AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧಿಸಿದ ಸಿಸಿಬಿ ಪೊಲೀಸ್, 6kg ಗಾಂಜಾ ವಶ

ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ಕುಡುಪು ಪೆದಮಲೆ ಗ್ರಾಮದ ನಿಶಾಂತ್ ಶೆಟ್ಟಿ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಈತ ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಗಾಂಜಾ ಮಾರುತ್ತಿದ್ದ. ಸದ್ಯ ಗೂಡ್ಸ್ ಟೆಂಪೋದಲ್ಲಿ ಗಾಂಜಾ ಸಾಗಿಸುವಾಗ ಅರೆಸ್ಟ್ ಆಗಿದ್ದಾನೆ.

ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧಿಸಿದ ಸಿಸಿಬಿ ಪೊಲೀಸ್, 6kg ಗಾಂಜಾ ವಶ
ನಿಶಾಂತ್ ಶೆಟ್ಟಿ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Mar 28, 2024 | 9:17 AM

Share

ಮಂಗಳೂರು, ಮಾರ್ಚ್.28: ಜಿಲ್ಲೆಯಲ್ಲಿ ಸಿಸಿಬಿ ಪೊಲೀಸರು (CCB Police) ಕಾರ್ಯಾಚರಣೆ ನಡೆಸಿ ಗಾಂಜಾ (Ganja) ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ಕುಡುಪು ಪೆದಮಲೆ ಗ್ರಾಮದ ನಿವಾಸಿ ನಿಶಾಂತ್ ಶೆಟ್ಟಿ ಬಂಧಿತ ಆರೋಪಿ. ಈತನಿಂದ 1.50 ಲಕ್ಷ ಮೌಲ್ಯದ 6 ಕೆ.ಜಿ ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ.

ಆರೋಪಿ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಗಾಂಜಾ ಖರೀದಿಸಿ ತಂದು ಸಣ್ಣ ಸಣ್ಣ ಪ್ಯಾಕೆಟ್ ಮಾಡಿಕೊಂಡು ಮಂಗಳೂರು ನಗರದಲ್ಲಿ ಮಾರಾಟ ಮಾಡುತ್ತಿದ್ದ. ಈತ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ. ಉಳ್ಳಾಲ ತಾಲೂಕಿನ ತೊಕ್ಕೊಟ್ಟು ಒಳಪೇಟೆಯಲ್ಲಿ ಗೂಡ್ಸ್ ಟೆಂಪೋದಲ್ಲಿ ಗಾಂಜಾ ಸಾಗಿಸುವಾಗ ಸಿಸಿಬಿ ಬಲೆಗೆ ಬಿದ್ದಿದ್ದಾನೆ. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಒಟ್ಟು 9.11 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯ ವಿರುದ್ಧ ಈಗಾಗಲೇ ಹಲ್ಲೆ, ಕಳ್ಳತನ ಪ್ರಕರಣ ಸೇರಿದಂತೆ ಒಟ್ಟು 10ಕ್ಕೂ ಹೆಚ್ಚು ಪ್ರಕರಣಗಳಿರುವುದು ಪತ್ತೆಯಾಗಿದೆ.

ಇದನ್ನೂ ಓದಿ: ಬೆಂಗಳೂರು: ಹೋಳಿ ಆಚರಣೆ ನಂತರ ಹಲವರಲ್ಲಿ ಚರ್ಮ, ಕಣ್ಣಿನ ಸಮಸ್ಯೆ; ವೈದ್ಯರು ಹೇಳುವುದೇನು?

ಆಕಸ್ಮಿಕ ಬೆಂಕಿ, 6‌ ಲಕ್ಷ ರೂ. ಮೌಲ್ಯದ ನಾರು ಸುಟ್ಟುಭಸ್ಮ

ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ತಿಮ್ಮಲಾಪುರ ಬಳಿಯ ನಾರಿನ ಫ್ಯಾಕ್ಟರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿ ಉರಿದಿದ್ದು 6‌ ಲಕ್ಷ ರೂ. ಮೌಲ್ಯದ ನಾರು ಸುಟ್ಟುಭಸ್ಮವಾಗಿದೆ. ಜಯಣ್ಣ ಎಂಬುವರ ನಾರಿನ ಕಾರ್ಖಾನೆ ಬೆಂಕಿಗಾಹುತಿಯಾಗಿದೆ. ಸದ್ಯ ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಇದೆಲ್ಲಾ ಕಿಡಿಗೇಡಿಗಳ ಕೃತ್ಯ ಎಂದು ಮಾಲೀಕ ಜಯಣ್ಣ ಆರೋಪಿಸಿದ್ದಾರೆ. ಕಿಬ್ಬನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿದ್ಯಾರ್ಥಿಗಳ ಎಡವಟ್ಟಿಗೆ ಖಾಕಿ ಹೈರಾಣ

ಬೆಂಗಳೂರಲ್ಲಿ ವಿದ್ಯಾರ್ಥಿಗಳ ಎಡವಟ್ಟಿನಿಂದ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ನಿನ್ನೆ ಬನ್ನೇರುಘಟ್ಟ ರಸ್ತೆಯ ಕ್ರೈಸ್ಟ್ ಕಾಲೇಜು ವಿದ್ಯಾರ್ಥಿಗಳು ವಿದ್ಯಾರ್ಥಿನಿಯೊಬ್ಬಳನ್ನ ಆಟೋ ಚಾಲಕ ಕಿಡ್ನ್ಯಾಪ್​ ಮಾಡ್ತಿದ್ದಾನೆ ಅಂತಾ ಮೆಸೇಜ್​ ಪೋಸ್ಟ್​ ಮಾಡಿದ್ರು. ಆಗ ತನಿಖೆಗೆ ಇಳಿದಿದ್ದ ಹುಳಿಮಾವು ಠಾಣೆ ಪೊಲೀಸರಿಗೆ ಅಸಲಿ ಕಥೆ ಗೊತ್ತಾಗಿದೆ. ಆಟೋ ಬುಕಿಂಗ್ ವಿಚಾರಕ್ಕೆ ವಿದ್ಯಾರ್ಥಿನಿಯ ವಾಗ್ವಾದ ನಡೆದಿದ್ದು, ಇದನ್ನೇ ಕಿಡ್ನ್ಯಾಪ್ ಎಂದು ಬಿಂಬಿಸಲಾಗಿತ್ತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು