ನೂತನ ಶಿಕ್ಷಣ ಪದ್ಧತಿಯಲ್ಲಿ ಮೌಢ್ಯತೆ ತುಂಬಿದೆ, ವರ್ಣಾಶ್ರಮ ಮತ್ತೆ ಬರಲಿದೆ; ಮಂಗಳೂರು ವಿವಿ ಬಳಿ ಸಿಎಫ್​ಐ ಪ್ರತಿಭಟನೆ

| Updated By: Skanda

Updated on: Aug 30, 2021 | 1:28 PM

ನೂತನ‌ ಶಿಕ್ಷಣ ನೀತಿಯಿಂದ ವರ್ಣಾಶ್ರಮ ಮತ್ತೆ ಬರಲಿದೆ. ಪ್ರಾಚೀನ ಯುಗದ ಇತಿಹಾಸದಲ್ಲಿ ಮೌಢ್ಯತೆ ತುಂಬಿದೆ. ಆ ಮೌಢ್ಯತೆಯನ್ನು ನಾವು ನಮ್ಮ ಮಕ್ಕಳಿಗೆ ಕಲಿಸಲಾಗುವುದಿಲ್ಲ ಎಂದು ಸಿಎಫ್​ಐ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೂತನ ಶಿಕ್ಷಣ ಪದ್ಧತಿಯಲ್ಲಿ ಮೌಢ್ಯತೆ ತುಂಬಿದೆ, ವರ್ಣಾಶ್ರಮ ಮತ್ತೆ ಬರಲಿದೆ; ಮಂಗಳೂರು ವಿವಿ ಬಳಿ ಸಿಎಫ್​ಐ ಪ್ರತಿಭಟನೆ
ಪ್ರತಿಭಟನಾ ನಿರತ ವಿದ್ಯಾರ್ಥಿನಿ
Follow us on

ಮಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿರೋಧಿಸಿ ಸಿಎಫ್‌ಐ ಕಾರ್ಯಕರ್ತರ ಪ್ರತಿಭಟನೆ ನಡೆಸಿದ ಘಟನೆ ಮಂಗಳೂರಿನ ಕೋಣಾಜೆ ವಿಶ್ವ ವಿದ್ಯಾನಿಲಯದಲ್ಲಿ ನಡೆದಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಉದ್ಘಾಟನಾ ಸಮಾರಂಭವನ್ನು ವಿರೋಧಿಸಿ ಮಂಗಳ ಗಂಗೋತ್ರಿ ಆವರಣದಲ್ಲಿ ಪ್ರತಿಭಟನೆ ಆರಂಭಿಸಿದ ಸಿಎಫ್‌ಐ (ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ) ಕಾರ್ಯಕರ್ತರು ನೂತನ ನೀತಿಯಲ್ಲಿ ಮಧ್ಯ ಯುಗದ ಇತಿಹಾಸ ತೆಗೆದಿದ್ದಾರೆ. ಪ್ರಾಚೀನ ಮತ್ತು ಈಗಿನ ಇತಿಹಾಸವನ್ನು ಕಲಿಸಲಾಗುತ್ತಿದೆ. ಪ್ರಾಚೀನ ಯುಗದ ಇತಿಹಾಸದಲ್ಲಿ ಮೌಢ್ಯತೆ ತುಂಬಿದೆ. ಆ ಮೌಢ್ಯತೆಯನ್ನು ನಾವು ನಮ್ಮ ಮಕ್ಕಳಿಗೆ ಕಲಿಸಲಾಗುವುದಿಲ್ಲ ಎಂದು ವಾದ ಮಾಡಿದ್ದಾರೆ.

ಪ್ರತಿಭಟನೆ ಬಗ್ಗೆ ಪೊಲೀಸರಿಗೆ ಮೊದಲೇ ಸುಳಿವು ಸಿಕ್ಕಿದ್ದ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಸಿಬ್ಬಂದಿಯನ್ನು ಮುನ್ನೆಚ್ಚರಿಕಾ ಕ್ರಮವಾಗಿ ನಿಯೋಜಿಸಲಾಗಿತ್ತು. ಹೀಗಾಗಿ ಪ್ರತಿಭಟನೆಗೆ ಮುಂದಾಗುತ್ತಿದ್ದಂತೆಯೇ 50 ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು ಕಾರ್ಯಕರ್ತರನ್ನು ಮನಬಂದಂತೆ ಎಳೆದೊಯ್ದು ಪೊಲೀಸ್ ವಾಹನಕ್ಕೆ ತುಂಬಿಸಿದ್ದಾರೆ.

ನೂತನ‌ ಶಿಕ್ಷಣ ನೀತಿಯಿಂದ ವರ್ಣಾಶ್ರಮ ಮತ್ತೆ ಬರಲಿದೆ. ಪ್ರಾಚೀನ ಯುಗದ ಇತಿಹಾಸದಲ್ಲಿ ಮೌಢ್ಯತೆ ತುಂಬಿದೆ. ಆ ಮೌಢ್ಯತೆಯನ್ನು ನಾವು ನಮ್ಮ ಮಕ್ಕಳಿಗೆ ಕಲಿಸಲಾಗುವುದಿಲ್ಲ ಎಂದು ಸಿಎಫ್​ಐ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದರಿ ಕಾರ್ಯಕ್ರಮದಲ್ಲಿ ಸಚಿವ ಅಶ್ವತ್ಥ ನಾರಾಯಣ ಭಾಗಿಯಾಗಿದ್ದು, ಸಭಾಂಗಣದ ಹೊರಗೆ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ.

(CFI protest at Mangaluru University against National Education Policy claiming that it will impose superstition)

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಟೀಕಿಸಿದ್ದ ಸಿದ್ದರಾಮಯ್ಯ
ರಾಷ್ಟ್ರೀಯ ಶಿಕ್ಷಣ ನೀತಿ-2020 ರ ಕುರಿತಾದ ಆದೇಶವನ್ನು ಈ ಕ್ಷಣವೇ ಹಿಂಪಡೆದು ವಿಸ್ತೃತ ಚರ್ಚೆ ನಡೆಸಿದ ಬಂತರ ಅನುಷ್ಠಾನಗೊಳಿಸುವ ಕುರಿತು ತೀರ್ಮಾನಿಸಬೇಕೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ (Siddaramaiah) ಅವರು ಸರ್ಕಾರವನ್ನು ಒತ್ತಾಯಿಸಿದ್ದರು. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದ ಅವರು, ಯಾವುದೇ ಚರ್ಚೆ ನಡೆಸದೆ ಆದೇಶ ಹೊರಡಿಸಿರುವುದು ಸರ್ವಾಧಿಕಾರಿ ನಿಲುವು, ದೇಶದ ಒಕ್ಕೂಟ ತತ್ವಕ್ಕೆ ಮಾಡಿರುವ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಈ ನಾಡಿನ ಶಿಕ್ಷಣ ತಜ್ಞರು, ಉಪನ್ಯಾಸಕರು, ಹಿರಿಯರು ಮತ್ತು ವಿರೋಧ ಪಕ್ಷಗಳ ಮುಖಂಡರು ಈ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (NEP 2020) ತರಾತುರಿಯಲ್ಲಿ ರಾಜ್ಯದ ಮೇಲೆ ಹೇರಬೇಡಿ, ಸಂಬಂಧಿಸಿದ ವಲಯಗಳ ಜನರ ಜೊತೆಗೆ ವಿಸ್ತೃತ ಚರ್ಚೆ ನಡೆಸಿ, ಸಾಧಕ ಬಾಧಕಗಳನ್ನು ಪರಿಶೀಲಿಸಿದ ನಂತರ ತೀರ್ಮಾನಿಸಿ ಎಂದು‌ ಹೇಳಿದ್ದೆವು ಎಂದಿದ್ದರು.

ಹಾಗೆ ಮಾಡದೇ ಈ ಅನಾಹುತಕಾರಿ ನೀತಿಯನ್ನು ಪ್ರಸ್ತುತ ಶೈಕ್ಷಣಿಕ ವರ್ಷದಿಂದಲೆ ಜಾರಿಗೊಳಿಸಲು ಆದೇಶ ಹೊರಡಿಸಲಾಗಿದೆ. ಈ ಆದೇಶದಲ್ಲಿ ಹಲವಾರು ಅಪಾಯಕಾರಿಯಾದ ಅಂಶಗಳಿವೆ; ಬಡವರ, ಮಧ್ಯಮ ವರ್ಗದವರ ಗುಣಮಟ್ಟದ ಉನ್ನತ ಶಿಕ್ಷಣ ಪಡೆಯುವ ಕನಸಿಗೆ ನೇರವಾಗಿ ಬೆಂಕಿ ಇಡುವ ಪ್ರಕ್ರಿಯೆಯ ಭಾಗವಾಗಿ ಈ ಶಿಕ್ಷಣ ನೀತಿಯನ್ನು ಜಾರಿಗೊಳಿಸಲು ಹೊರಡಲಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದರು.

ಇದನ್ನೂ ಓದಿ:
ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಉನ್ನತ ಶಿಕ್ಷಣ ವ್ಯವಸ್ಥೆ ಧ್ವಂಸ, ಜಾರಿ ಆದೇಶ ಹಿಂಪಡೆಯಲು ಸಿದ್ದರಾಮಯ್ಯ ಆಗ್ರಹ 

ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಐಪ್ಯಾಡ್; ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಿಂದ ಕ್ರಾಂತಿ: ಬಸವರಾಜ ಬೊಮ್ಮಾಯಿ

Published On - 1:17 pm, Mon, 30 August 21