ಚೈತ್ರಾ ವಂಚನೆ ಕೇಸ್​:ವಿಚಾರಣೆಗೆ ಹಾಜರಾಗುವಂತೆ ವಜ್ರದೇಹಿ ಸ್ವಾಮೀಜಿಗೆ ಸಿಸಿಬಿ ನೋಟಿಸ್

ಉದ್ಯಮಿ ಗೋವಿಂದ್​ ಬಾಬು ಪೂಜಾರಿ ಬಳಿ ಕೋಟ್ಯಾಂತರ ಹಣವನ್ನು ತೆಗೆದುಕೊಂಡು ವಂಚಿಸಿದ ಚೈತ್ರಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ವಿಚಾರಣೆಗೆ ಹಾಜರಾಗುವಂತೆ ವಜ್ರದೇಹಿ ಸ್ವಾಮೀಜಿ(Vajradehi Swamiji)ಗೆ ಬೆಂಗಳೂರು ಸಿಸಿಬಿ ಪೊಲೀಸರು (CCB Police) ನೋಟಿಸ್ ಕೊಟ್ಟಿದ್ದಾರೆ.

ಚೈತ್ರಾ  ವಂಚನೆ ಕೇಸ್​:ವಿಚಾರಣೆಗೆ ಹಾಜರಾಗುವಂತೆ ವಜ್ರದೇಹಿ ಸ್ವಾಮೀಜಿಗೆ ಸಿಸಿಬಿ ನೋಟಿಸ್
ವಜ್ರದೇಹಿ ಸ್ವಾಮೀಜಿ
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 10, 2023 | 6:05 PM

ಮಂಗಳೂರು, ಅ.10: ಬೈಂದೂರು ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿ ಗೋವಿಂದ್​ ಬಾಬು ಪೂಜಾರಿ ಬಳಿ ಕೋಟ್ಯಾಂತರ ಹಣವನ್ನು ತೆಗೆದುಕೊಂಡು ವಂಚಿಸಿದ ಚೈತ್ರಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ವಿಚಾರಣೆಗೆ ಹಾಜರಾಗುವಂತೆ ವಜ್ರದೇಹಿ ಸ್ವಾಮೀಜಿ(Vajradehi Swamiji)ಗೆ ಬೆಂಗಳೂರು ಸಿಸಿಬಿ ಪೊಲೀಸರು (CCB Police) ನೋಟಿಸ್ ಕೊಟ್ಟಿದ್ದಾರೆ. ಹೌದು, ಮಂಗಳೂರಿನ ಗುರುಪುರದಲ್ಲಿರುವ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಸ್ವಾಮೀಜಿ‌ ವಿಚಾರಣೆಗೆ ಹಾಜರಾಗಲಿದ್ದಾರೆ.

ಇನ್ನು ವಂಚನೆ ಪ್ರಕರಣದ ಆರೋಪಿಯಾದ ಚೈತ್ರಾ,  ಆತನ ವಿರುದ್ಧವೇ ಜಾರಿ ನಿರ್ದೇಶಾನಲಯಕ್ಕೆ ಪತ್ರ ಬರೆಯಲಾಗಿತ್ತು. ಜೊತೆಗೆ ಪತ್ರದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಜ್ರದೇಹಿ ಮಠದ ಸ್ವಾಮೀಜಿ ಹೆಸರನ್ನು ಸಹ ಚೈತ್ರಾ ಪ್ರಸ್ತಾಪ ಮಾಡಿದ್ದರು. ಬಳಿಕ ಈ ಕುರಿತು ಮಾತನಾಡಿದ್ದ ಸ್ವಾಮೀಜಿ, ‘ಚೈತ್ರಾ ನನಗೆ ಫೋನ್ ಮಾಡಿ ನಿಮ್ಮ ಮೇಲೆ ದೂರು ಇದೆ ಎಂದಿದ್ದರು. ನಿಮಗೆ ಗೋವಿಂದಬಾಬು ಪೂಜಾರಿ 1.50 ಕೋಟಿ ರೂ. ಹಣ ನೀಡಿದ್ದಾರಂತೆ. ಹಣ ವಾಪಸ್ ನೀಡಿ ಎಂದು ಚೈತ್ರಾ ಕುಂದಾಪುರ ನನಗೆ ಹೇಳಿದ್ದರು. ಆಗ ಚೈತ್ರಾ ಕುಂದಾಪುರ ಹೇಳಿಕೆಯನ್ನು ನಾನು ಖಂಡಿಸಿದ್ದೆ. ಚೈತ್ರಾ ಕುಂದಾಪುರ ಸುಳ್ಳು ಆರೋಪದ ಬಗ್ಗೆ ನಾನು ಆಕ್ರೋಶಗೊಂಡಿದ್ದೆ ಎಂದು ಹೇಳಿದ್ದರು.

ಇದನ್ನೂ ಓದಿ:MLA ಟಿಕೆಟ್​ ವಂಚನೆ ಕೇಸ್: EDಗೆ ಬರೆದ ಪತ್ರದಲ್ಲಿ ಮತ್ತೊಬ್ಬ ಸ್ವಾಮೀಜಿ ಹೆಸರು ಪ್ರಸ್ತಾಪಿಸಿದ ಚೈತ್ರಾ ಕುಂದಾಪುರ ​

ನನಗೂ, ಪ್ರಕರಣಕ್ಕೂ ಸಂಬಂಧವಿಲ್ಲ ಎಂದಿದ್ದ ಸ್ವಾಮೀಜಿ

ಇನ್ನು ಇದೇ ವೇಳೆ ‘ನನಗೂ, ಆಕೆಯ ಪ್ರಕರಣಕ್ಕೂ ಸಂಬಂಧ ಇಲ್ಲ. ಜುಲೈ ತಿಂಗಳಲ್ಲಿ ಹಿಂದೂ ಸಂಘಟನೆಯ ಸತ್ಯಜಿತ್‌ ಸುರತ್ಕಲ್ ಫೋನ್ ಮಾಡಿದ್ದರು. ಗೋವಿಂದ ಪೂಜಾರಿಗೆ ಟಿಕೆಟ್ ನೀಡುವ ವಿಚಾರದಲ್ಲಿ ವಂಚಿಸಿರುವ ಬಗ್ಗೆ ನನಗೆ ಪ್ರಶ್ನೆ ಮಾಡಿದ್ದರು. ಆದರೆ, ನನಗೇನೂ ತಿಳಿದಿರಲಿಲ್ಲ, ನನ್ನಲ್ಲಿ ಯಾಕೆ ಪ್ರಶ್ನೆ ಮಾಡುವುದೆಂದು ಕೇಳಿದ್ದೆ. ಬಳಿಕ ಅವರೇ ಫೋನ್ ಮಾಡಿ, ಚೈತ್ರಾ ಮತ್ತು ಅಭಿನವ ಹಾಲಶ್ರೀ ಹೆಸರಿದೆ ಎಂದಿದ್ದರು. ಹಾಲಶ್ರೀ ಯುವ ಬ್ರಿಗೇಡ್ ಜೊತೆ ಗುರುತಿಸಿಕೊಂಡಿದ್ದರು. ಹೀಗಾಗಿ ಚಕ್ರವರ್ತಿ ಸೂಲಿಬೆಲೆ ಹೆಸರು ತಳುಕು ಹಾಕಿಕೊಳ್ಳುವ ಸಂಶಯ ಬಂತು. ಆ ಸಂದರ್ಭದಲ್ಲಿ ಅವರಿಗೆ ಫೋನ್ ಮಾಡಿದ್ದೆ ಎಂದಿದ್ದರು.

ಗಗನ್ ಕಡೂರು ಹೆಸರು ಬಂದಾಗ ಸಿಟಿ ರವಿ ಗಮನಕ್ಕೆ ತರಲಾಗಿತ್ತು. ಅವರಲ್ಲಿ ಕೂಲಕುಂಶವಾಗಿ ಮಾತಾಡಿ ಸುಮ್ಮನೆ ಬಿಡಬೇಡಿ ಎಂದಿದ್ದೆ. ಚೈತ್ರಾ ಕುಂದಾಪುರ ಜೊತೆ ಒಡನಾಟ ಇದೆಯಾ ಎಂದು ಸೂಲಿಬೆಲೆ ಕೇಳಿದ್ದರು. ಚೈತ್ರಾ ಕುಂದಾಪುರ ಬರೆದ ಪುಸ್ತಕಕ್ಕೆ ಬೆನ್ನುಡಿ ಬರೆದಿದ್ದೆ. ಹೀಗಾಗಿ ಅವರು ಸಂಪರ್ಕ ಇದೆ ಎಂದು ಹೇಳಿದ್ದೆ. ಹಾಗಿದ್ದರೆ ಚೈತ್ರಾ ಕುಂದಾಪುರ ಜೊತೆಯೂ ಒಮ್ಮೆ ಮಾತನಾಡಿ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದರು ಎಂದು ಹೇಳಿದ್ದರು. ಇದೀಗ ಸಿಸಿಬಿ ಪೊಲೀಸರು ಸ್ವಾಮೀಜಿಗೆ ನೋಟಿಸ್​ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್