ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಲರಾ ಆತಂಕ! ಆಹಾರ ಗುಣಮಟ್ಟದ ಬಗ್ಗೆ ಎಚ್ಚರವಹಿಸಲು ಸೂಚನೆ

ಉಡುಪಿ ಜಿಲ್ಲೆಯ ಹೊಸ್ಮಾರುವಿನ ಹೋಟೆಲ್​ನಿಂದ ಕಾಲರಾ ಸೊಂಕು ಸಾಮೂಹಿಕವಾಗಿ ಹರಡಿರುವ ಶಂಕೆ ವ್ಯಕ್ತವಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಅವರು ಮಾಹಿತಿ‌ ನೀಡಿದ್ದಾರೆ. ಈ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಲರಾ ಆತಂಕ ಎದುರಾಗಿದ್ದು, ಆಹಾರ ಸ್ವಲ್ಪ ಕಲುಷಿತವಾದರೂ ಅಪಾಯ ಕಟ್ಟಿಟ್ಟಬುತ್ತಿ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಲರಾ ಆತಂಕ! ಆಹಾರ ಗುಣಮಟ್ಟದ ಬಗ್ಗೆ ಎಚ್ಚರವಹಿಸಲು ಸೂಚನೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಲರಾ ಆತಂಕ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 20, 2024 | 5:46 PM

ದಕ್ಷಿಣ ಕನ್ನಡ, ಸೆ.20: ಮೂಡಬಿದಿರೆ ತಾಲೂಕಿನ ನೆಲ್ಲಿಕಾರು ಗ್ರಾಮದ ಓರ್ವ ವ್ಯಕ್ತಿಯಲ್ಲಿ ಕಾಲರಾ(cholera) ಸೋಂಕು ಪತ್ತೆಯಾಗಿದ್ದು, ಉಡುಪಿ(Udupi) ಜಿಲ್ಲೆಯ ಹೊಸ್ಮಾರುವಿನ ಹೋಟೆಲ್​ನಿಂದ ಸೊಂಕು ಸಾಮೂಹಿಕವಾಗಿ ಹರಡಿರುವ ಶಂಕೆ ವ್ಯಕ್ತವಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಅವರು ಮಾಹಿತಿ‌ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಸೋಂಕು ಪತ್ತೆ ಹಿನ್ನಲೆ ದಕ್ಷಿಣ ಕನ್ನಡ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಹೋಟೆಲ್ ಮಾಲೀಕರ ಜೊತೆ ವಿಶೇಷ ಸಭೆ ನಡೆಸಿದ್ದೇವೆ ಎಂದರು.

ಹೋಟೆಲ್ ಮಾಲೀಕರ ಜೊತೆ ವಿಶೇಷ ಸಭೆ

ಇನ್ನು ಸಭೆಯಲ್ಲಿ ಕಾಲರಾ ಸೋಂಕು ಪ್ರಮುಖವಾಗಿ ಕಲುಷಿತ ಆಹಾರದಿಂದ ಹರಡುವ ಸಾಧ್ಯತೆ ಇದೆ. ಹೀಗಾಗಿ ಕಡ್ಡಾಯವಾಗಿ ಆಹಾರ ಗುಣಮಟ್ಟದ ಬಗ್ಗೆ ಜಾಗ್ರತೆ ವಹಿಸಲು ಸೂಚನೆ ನೀಡಿದ್ದೇವೆ‌. ಜೊತೆಗೆ ಕಲುಷಿತ ಆಹಾರ, ಹಳಸಿದ ಆಹಾರವನ್ನ ಗ್ರಾಹಕರಿಗೆ ನೀಡಬಾರದು. ಪ್ರಮುಖವಾಗಿ ತರಕಾರಿ, ಹಣ್ಣು ಹಂಪಲು ಗುಣಮಟ್ಟವನ್ನ ಕಾಪಾಡಬೇಕು. ಗ್ರಾಹಕರಿಗೆ ನೀಡುವ ಪಾತ್ರೆ ಪ್ಲೇಟ್​ಗಳನ್ನ ಬಿಸಿ ನೀರಿನಲ್ಲಿ ತೊಳೆಯಬೇಕು ಎಂದು ಸೂಚಿಸಲಾಗಿದೆ.

ಇದನ್ನೂ ಓದಿ:ಸಿಎಂ ತವರಲ್ಲಿ ಕಾಲರಾ ಪತ್ತೆ; ಒಂದೇ ಗ್ರಾಮದ ಮೂವರಲ್ಲಿ ಕಾಣಿಸಿಕೊಂಡ ರೋಗ​

ಆಹಾರ ಸ್ವಲ್ಪ ಕಲುಷಿತವಾದರೂ ಕಾಲರಾ ಅಪಾಯ

ಬೇಸಿಗೆ ಸಂದರ್ಭದಲ್ಲಿ ಶುದ್ಧ ನೀರು ಬಳಸಬೇಕು ಹಾಗೂ ಬೇಯಿಸಿದ ಆಹಾರವನ್ನ ಬಳಕೆ ಮಾಡುವುದನ್ನ ಕಡಿಮೆ ಮಾಡಬೇಕು‌‌. ಆಹಾರ ಸ್ವಲ್ಪ ಕಲುಷಿತವಾದರೂ ಕಾಲರಾ ಅಪಾಯವಿದೆ. ಪಂಚಾಯತ್ ರಾಜ್ ವ್ಯಾಪ್ತಿಯ ನೀರಿನ ತೊಟ್ಟಿಗಳ ನಿರಂತರ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ಕ್ಲೋರಿನೇಷನ್ ಹಾಗೂ ಸೂಪರ್ ಕ್ಲೋರಿನೇಷನ್ ಮಾಡಬೇಕು. ಕಲುಷಿತ ಆಹಾರ ಸೇವನೆ ಮಾಡುವುದರಿಂದ ಕಾಲರಾ ಸೋಂಕು ಹರಡಲಿದ್ದು, ತೀವ್ರ ವಾಂತಿ ಭೇದಿಯಾಗಿ ವ್ಯಕ್ತಿ ಸಾವನ್ನಪ್ಪುವ ಆತಂಕ ಇದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್