Drugs Scam: ಡ್ರಗ್ಸ್ ದಂಧೆಯಿಂದ ಮಗಳನ್ನು ರಕ್ಷಿಸಲು ವಿಶ್ವ ಹಿಂದೂ ಪರಿಷತ್ಗೆ ಪತ್ರ ಬರೆದ ಕ್ರಿಶ್ಚಿಯನ್ ಮಹಿಳೆ

| Updated By: ಆಯೇಷಾ ಬಾನು

Updated on: Dec 27, 2021 | 2:02 PM

ಮಂಗಳೂರಿನ ಬಿಜೈ ಬಳಿಯ ಗ್ರೇಸಿ ಪಿಂಟೋ ಎಂಬ ಮಹಿಳೆ ತನ್ನ ಮಗಳನ್ನು ಡ್ರಗ್ಸ್ ಕೂಪದಿಂದ ಹೊರ ಬರುವಂತೆ ಮಾಡಲು ಸಹಾಯ ಕೋರಿ ಪತ್ರ ಬರೆದಿದ್ದಾರೆ. ಸುರತ್ಕಲ್ ನಿವಾಸಿ ಶರೀಫ್ ಸಿದ್ದಿಕಿ ಎಂಬಾತನ ಡ್ರಗ್ ದಂಧೆಯಲ್ಲಿ ನನ್ನ ಮಗಳು ಸಿಲುಕಿದ್ದಾಳೆ.

Drugs Scam: ಡ್ರಗ್ಸ್ ದಂಧೆಯಿಂದ ಮಗಳನ್ನು ರಕ್ಷಿಸಲು ವಿಶ್ವ ಹಿಂದೂ ಪರಿಷತ್ಗೆ ಪತ್ರ ಬರೆದ ಕ್ರಿಶ್ಚಿಯನ್ ಮಹಿಳೆ
ಡ್ರಗ್ಸ್ ದಂಧೆಯಿಂದ ಮಗಳನ್ನು ರಕ್ಷಿಸಲು ವಿಶ್ವ ಹಿಂದೂ ಪರಿಷತ್ಗೆ ಪತ್ರ ಬರೆದ ಕ್ರಿಶ್ಚಿಯನ್ ಮಹಿಳೆ
Follow us on

ಮಂಗಳೂರು: ರಾಜ್ಯದಲ್ಲಿ ತಲೆ ಎತ್ತಿರುವ ಡ್ರಗ್ಸ್ ದಂಧೆಯಿಂದ ಮಗಳನ್ನು ರಕ್ಷಿಸಲು ಕ್ರಿಶ್ಚಿಯನ್ ಮಹಿಳೆ ವಿಶ್ವ ಹಿಂದೂ ಪರಿಷತ್ಗೆ ಪತ್ರ ಬರೆದಿದ್ದಾರೆ. ಮಂಗಳೂರಿನ ಕ್ರೈಸ್ತ ಮಹಿಳೆ ವಿಶ್ವಹಿಂದೂ ಪರಿಷತ್ ಮುಖಂಡರ ಮೊರೆ ಹೋಗಿದ್ದು ಪತ್ರದ ಮೂಲಕ ಮನವಿ ಸಲ್ಲಿಸಿರುವ ಘಟನೆ ನಡೆದಿದೆ.

ಮಂಗಳೂರಿನ ಬಿಜೈ ಬಳಿಯ ಗ್ರೇಸಿ ಪಿಂಟೋ ಎಂಬ ಮಹಿಳೆ ತನ್ನ ಮಗಳನ್ನು ಡ್ರಗ್ಸ್ ಕೂಪದಿಂದ ಹೊರ ಬರುವಂತೆ ಮಾಡಲು ಸಹಾಯ ಕೋರಿ ಪತ್ರ ಬರೆದಿದ್ದಾರೆ. ಸುರತ್ಕಲ್ ನಿವಾಸಿ ಶರೀಫ್ ಸಿದ್ದಿಕಿ ಎಂಬಾತನ ಡ್ರಗ್ ದಂಧೆಯಲ್ಲಿ ನನ್ನ ಮಗಳು ಸಿಲುಕಿದ್ದಾಳೆ. ಕಳೆದ ಮೂರು ವರ್ಷಗಳಿಂದ ಡ್ರಗ್ ದಾಸಳಾಗಿರುವ ಮಗಳನ್ನು ಸರಿಪಡಿಸಿ ತನಗೆ ಒಪ್ಪಿಸುವಂತೆ ಮಹಿಳೆ ಪತ್ರದಲ್ಲಿ ತಿಳಿಸಿದ್ದಾರೆ.

ಮಗಳಿಗೆ ನಿರಂತರ ಲೈಂಗಿಕ ದೌರ್ಜನ್ಯ, ಡ್ರಗ್ ಪೂರೈಕೆ ಮಾಡುತ್ತಿದ್ದು ಮಗಳು ಡ್ರಗ್ ಚಟಕ್ಕೆ ಬಿದ್ದು ಮಾನಸಿಕವಾಗಿ ಕುಗ್ಗಿ ಅಸ್ವಸ್ಥತೆ ಒಳಗಾಗಿದ್ದಾಳೆ. ಸಿದ್ದಿಕಿ ಮತ್ತು ಅವನ ಸ್ನೇಹಿತರಿಂದ ನಿರಂತರ ಡ್ರಗ್ ಪೂರೈಕೆ ಮತ್ತು ದೌರ್ಜನ್ಯ ನಡೆಯುತ್ತಿದ್ದು ಪೊಲೀಸ್ ಠಾಣೆ ಮತ್ತು ಸಮುದಾಯದ ಗುರುಗಳಿಗೆ ದೂರು ಕೊಟ್ಟರೂ ನ್ಯಾಯ ಸಿಕ್ಕಿಲ್ಲ. ನನ್ನ ಮಗಳನ್ನ ರಕ್ಷಣೆ ಮಾಡಿ ಎಂದು ವಿಎಚ್ಪಿಗೆ ಪತ್ರ ಬರೆದು ಮಹಿಳೆ ದಂಧೆಯಿಂದ ಮುಕ್ತಿ ಕೋರಿದ್ದಾರೆ.

ಬೆಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿ ಅರೆಸ್ಟ್
ಬೆಂಗಳೂರು: ರಾಜ್ಯದಲ್ಲಿ ಡ್ರಗ್ಸ್ ಮಾರಾಟ ಪ್ರಕರಣ ಹೆಚ್ಚಾಗುತ್ತಿದೆ. ಸದ್ಯ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ಪದಾರ್ಥ ಮಾರಾಟಕ್ಕೆ ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಿ.ಕೆ.ಅಚ್ಚುಕಟ್ಟು ಠಾಣಾ ಪೊಲೀಸರು ಸುಡಾನ್ ಪ್ರಜೆಯಾದ ನಫಿ ಇಬ್ರಾಹಿಂ ಮರೆಗ್ ಸತೂರ್ ಎಂಬುವವನನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿ ಕಾಲೇಜೊಂದರ ಬಳಿ ಡ್ರಗ್ಸ್ ಮಾರಾಟಕ್ಕೆ ಯತ್ನಿಸುತ್ತಿದ್ದ. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ್ದ ಪೊಲೀಸುರ ಆರೋಪಿಯನ್ನು ಬಂಧಿಸಿ ಬಂಧಿತನಿಂದ 1,04,500 ರೂ. ಮೌಲ್ಯದ ಎಕ್ಸ್ಟಸಿ ಮಾತ್ರೆಗಳನ್ನ ವಶಕ್ಕೆ ಪಡೆದಿದ್ದಾರೆ.

ರಾಜ್ಯದಲ್ಲಿ ಡ್ರಗ್ಸ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆ ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಡ್ರಗ್ಸ್ ವಿಚಾರವನ್ನು ತುಂಬಾ ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಕರ್ನಾಟಕ ಡ್ರಗ್ಸ್ ಮುಕ್ತ ಮಾಡಲು ಸರ್ಕಾರ ಸಿದ್ಧವಾಗಿದೆ. ಡ್ರಗ್ಸ್ ಮಾರುವವರು, ಪಡೆಯುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಅಂತ ಹೇಳಿದ್ದಾರೆ.

ಕಾಲೇಜುಗಳಲ್ಲಿ ಡ್ರಗ್ಸ್ ತೆಗೆದುಕೊಳ್ಳುತ್ತಿರುವುದು ಗಮನಕ್ಕೆ ಬಂದರೆ ಕಾಲೇಜು ಆಡಳಿತ ಮಂಡಳಿಯ ಮೇಲೆ ಕ್ರಮ ಕೈಗೊಳ್ಳಲಾಗುವುದು. ಡ್ರಗ್ ಪುಡಿ ಸಿಕ್ಕಿದರೆ ಪುಡಿ ಪುಡಿ ಮಾಡಬೇಕು. ಈಗಾಗಲೇ ಕಾಲೇಜುಗಳ ಸುತ್ತಮುತ್ತ, ಕಾಲೇಜು ಕ್ಯಾಂಪಸ್ ಒಳಗೆ ಸಿಸಿ ಟಿವಿ ಹಾಕಲು ಪೊಲೀಸ್ ಇಲಾಖೆಗೆ ಸೂಚನೆ ಕೊಟ್ಟಿದ್ದೇವೆ ಅಂತ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿ: Ludhiana Blast: ಲುಧಿಯಾನ ಕೋರ್ಟ್ ಸ್ಫೋಟದ ಹಿಂದೆ ಖಲಿಸ್ತಾನಿ, ಡ್ರಗ್ಸ್ ಸ್ಮಗ್ಲರ್ ಕೈವಾಡ ಪತ್ತೆ