CM Bommai Speech: ದೇಶ ರಾಜ್ಯದ ಅಭಿವೃದ್ಧಿಗೆ ಡಬಲ್ ಎಂಜಿನ್ ಸರ್ಕಾರ ಬೇಕು ಎಂದ ಸಿಎಂ ಬಸವರಾಜ ಬೊಮ್ಮಾಯಿ

ಕರ್ನಾಟಕದ ಅಭಿವೃದ್ಧಿ ಜೊತೆಗೆ ಭಾರತ ಅಭಿವೃದ್ಧಿ ಆಗುತ್ತಿದೆ. ಡಬಲ್ ಇಂಜಿನ್ ಸರ್ಕಾರ ಕರ್ನಾಟಕ ಮಾತ್ರವಲ್ಲ ಭಾರತವನ್ನೂ ನಡೆಸುತ್ತಿದೆ ಎಂದರು.

CM Bommai Speech: ದೇಶ ರಾಜ್ಯದ ಅಭಿವೃದ್ಧಿಗೆ ಡಬಲ್ ಎಂಜಿನ್ ಸರ್ಕಾರ ಬೇಕು ಎಂದ ಸಿಎಂ ಬಸವರಾಜ ಬೊಮ್ಮಾಯಿ
ಮಂಗಳೂರಿನಲ್ಲಿ ಬಸವರಾಜ ಬೊಮ್ಮಾಯಿ ಮಾತನಾಡಿದರು.
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Sep 02, 2022 | 3:59 PM

ಮಂಗಳೂರು: ಇಂದು ಕರಾವಳಿ ಅಭಿವೃದ್ಧಿ ಚರಿತ್ರೆಯನನ್ನು ಸುವರ್ಣಾಕ್ಷರದಲ್ಲಿ ಬರೆದಿಡುವ ದಿನ. ಡಬಲ್ ಇಂಜಿನ್ ಸರ್ಕಾರ ಏನು ಮಾಡಿದೆ ಎಂದು ಕೆಲವರು ಕೇಳುತ್ತಾರೆ. ಮೋದಿ ಮಂಗಳೂರಿಗೆ ಪಾದಾರ್ಪಣೆ ಮಾಡಿದ ವೇಳೆ ಸಿಆರ್​ಝೆಡ್ ನೀತಿ ಬದಲಾವಣೆಗೆ ಒಪ್ಪಿಗೆ ಸಿಕ್ಕಿದೆ. ಕಾರವಾರದ ಮಾಜಾಳಿ ಪೋರ್ಟ್ ಅಭಿವೃದ್ಧಿಗೆ ಅನುಮೋದನೆ ಸಿಕ್ಕಿದೆ. ಮತ್ಸ್ಯ ಸಂಪದ ಯೋಜನೆ ಜಾರಿಯಾಗಿದೆ. ಇವೆಲ್ಲವೂ ಡಬಲ್ ಇಂಜಿನ್ ಸರ್ಕಾರದ ಯೋಜನೆಗಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ತಿಳಿಸಿದರು. ಕರ್ನಾಟಕದ ಅಭಿವೃದ್ಧಿ ಜೊತೆಗೆ ಭಾರತ ಅಭಿವೃದ್ಧಿ ಆಗುತ್ತಿದೆ. ಡಬಲ್ ಇಂಜಿನ್ ಸರ್ಕಾರ ಕರ್ನಾಟಕ ಮಾತ್ರವಲ್ಲ ಭಾರತವನ್ನೂ ನಡೆಸುತ್ತಿದೆ ಎಂದರು.

ದೇಶ ಅಭಿವೃದ್ಧಿ ಆಗಬೇಕಾದರೆ ನಮ್ಮ ಬಂದರುಗಳ ಸಾಮರ್ಥ್ಯ ವೃದ್ಧಿಯಾಗಬೇಕು ಎಂದು ಮೋದಿ ಅವರು ಕನಸು ಕಂಡಿದ್ದರು. 8 ವರ್ಷಗಳ ಯೋಜನೆಗೆ ಈಗ ಪ್ರತಿಫಲ ಸಿಗುತ್ತಿದೆ. ಇವತ್ತು 3,800 ಕೋಟಿ ರೂಪಾಯಿ ಮೊತ್ತದಲ್ಲಿ ಮಂಗಳೂರು ಬಂದರು ದೊಡ್ಡ ಅಭಿವೃದ್ಧಿಯಾಗುತ್ತಿದೆ. ನಾಲ್ಕು ಪಟ್ಟು ಅದರ ಸಾಮರ್ಥ್ಯ ವೃದ್ಧಿಯಾಗುತ್ತಿದೆ. ಮುಂದಿನ ದಿನಗಳಲ್ಲಿ ಕರಾವಳಿ ಮೂಲಕ ಸಮಗ್ರ ಕರ್ನಾಟಕದ ಅಭಿವೃದ್ಧಿ ಆಗುತ್ತಿದೆ ಎಂದು ಅವರು ವಿವರಿಸಿದರು.

ಕರಾವಳಿ ಉದ್ಯಮಿಗಳಿಗೆ ಸಿಆರ್​ಜೆಡ್ ನಿಯಮಗಳಲ್ಲಿ ಗೋವಾ ಮತ್ತು ಕೇರಳಗಳಿಗೆ ಇರುವ ಅನುಕೂಲ ನಮಗೆ ಇರಲಿಲ್ಲ. ಈಗ ಸಿಆರ್​ಜೆಡ್​ ಕರ್ನಾಟಕದ ಮಾಸ್ಟರ್​ಪ್ಲಾನ್​ಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಇದರಿಂದ ನಮ್ಮ ಹಲವು ವರ್ಷಗಳ ಸಮಸ್ಯೆ ಪರಿಹಾರವಾದಂತೆ ಆಗಿದೆ ಎಂದು ಶ್ಲಾಘಿಸಿದರು.

ಕಾರವಾರದ ಮಜಾಲಿ ಬಂದರನ್ನು 350 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ಪ್ರಧಾನಿ ಮತ್ಸ್ಯ ಸಂಪದ ಯೋಜನೆಯಲ್ಲಿ ಮೊದಲ ಬಾರಿಗೆ 100 ಹೈಸ್ಪೀಡ್ ದೋಣಿಗಳನ್ನು ಶೇ 40ರ ಸಬ್ಸಿಡಿಯಲ್ಲಿ ಒದಗಿಸಿದೆ. ಇವು ಆಳ ಸಮುದ್ರದಲ್ಲಿ ಮೀನುಗಾರಿಕೆ ಮಾಡುವ ಸಾಮರ್ಥ್ಯ ಹೊಂದಿವೆ. ಇವತ್ತು ನಾವು ಹೊನ್ನಾವರ ಮತ್ತು ಹೂವಿನಕಾರ ಬಂದರುಗಳ ಅಭಿವೃದ್ಧಿ ಜೊತೆಗೆ ನವ ಮಂಗಳೂರು ಹಾಗೂ ಕಾರವಾರ ಬಂದರುಗಳ ವಿಸ್ತರಣೆಯ ಯೋಜನೆ ಆರಂಭಿಸಿದ್ದೇವೆ ಎಂದರು.

ಮೀನುಗಾರರ ಮಕ್ಕಳಿಗೆ ವಿದ್ಯಾನಿಧಿ ಸೌಕರ್ಯ, ಮೀನುಗಾರಿಕೆ ಸಂಸ್ಥೆ, ಮೀನುಗಾರಿಕೆಯ ವಸತಿ ಸೌಕರ್ಯಕ್ಕೆ ಕ್ರಮ ಕೈಗೊಂಡಿದ್ದೇವೆ. ದೇಶವನ್ನು ಸ್ವಾವಲಂಬಿಯಾಗಿಸಲು ಬಂದರುಗಳಿಗೆ ಶಕ್ತಿ ತುಂಬಬೇಕಿದೆ. ಅದಕ್ಕಾಗಿ ಮೋದಿ ಮಂಗಳೂರಿಗೆ ಬಂದಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಭಾಷಣ ಮುಗಿಸಿದ ಬಳಿಕ ಸಿಎಂಗೆ ಮೋದಿ ಅವರು ಹಸ್ತಲಾಘವ ನೀಡಿದರು. ಕಾರ್ಯಕ್ರಮದಲ್ಲಿ ಮೂವರು ಮೀನುಗಾರರಿಗೆ ಸಾಂಕೇತಿಕವಾಗಿ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಿಸಲಾಯಿತು.

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್