ಕೊರೊನಾ ಆತಂಕ; ಇಂದು ಹಾಗೂ ನಾಳೆ ಕರಾವಳಿ ಪ್ರವಾಸ ಕೈಗೊಳ್ಳಲಿದ್ದಾರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಇಂದು ಹಾಗೂ ನಾಳೆ 2 ದಿನ ಬಸವರಾಜ ಬೊಮ್ಮಾಯಿ ಕರಾವಳಿ ಪ್ರವಾಸದಲ್ಲಿ ನಿರತರಾಗಲಿದ್ದು, ನಾಳೆ ಬೆಳಗ್ಗೆ ಗಡಿಭಾಗದ ಚೆಕ್​ಪೋಸ್ಟ್​ಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಲಿದ್ದಾರೆ.

ಕೊರೊನಾ ಆತಂಕ; ಇಂದು ಹಾಗೂ ನಾಳೆ ಕರಾವಳಿ ಪ್ರವಾಸ ಕೈಗೊಳ್ಳಲಿದ್ದಾರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
Follow us
TV9 Web
| Updated By: Skanda

Updated on: Aug 12, 2021 | 8:01 AM

ದಕ್ಷಿಣ ಕನ್ನಡ: ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಕೊರೊನಾ ಸೋಂಕು (Covid 19) ಮತ್ತೆ ಏರುಗತಿಯಲ್ಲಿ ಸಾಗುವ ಸೂಚನೆ ನೀಡಿರುವುದು ಆತಂಕಕ್ಕೆ ಕಾರಣವಾಗಿದೆ. ನೆರೆಯ ಕೇರಳ ರಾಜ್ಯದಲ್ಲಿ ದೇಶದ ಅರ್ಧಪಾಲು ಕೊರೊನಾ ಪ್ರಕರಣಗಳು (Corona Cases) ಪತ್ತೆಯಾಗುತ್ತಿದ್ದು ಕರ್ನಾಟಕದ ಗಡಿ ಜಿಲ್ಲೆಗಳು ಅಪಾಯದ ಸುಳಿಗೆ ಸಿಲುಕುತ್ತಿವೆ. ಹೀಗಾಗಿ ಕೊರೊನಾ ನಿಯಂತ್ರಣದ (Corona Control) ಕುರಿತು ಜಿಲ್ಲಾಡಳಿತಗಳೊಂದಿಗೆ ಸಭೆ ನಡೆಸಲು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಇಂದು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಪ್ರವಾಸ ಬೆಳೆಸುತ್ತಿದ್ದು, ಎರಡು ದಿನ ವಾಸ್ತವ್ಯ ಹೂಡಿ ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ.

ಕೊವಿಡ್ ನಿಯಂತ್ರಣ ಕುರಿತು ಜಿಲ್ಲಾಡಳಿತಗಳ ಜತೆ ಸಭೆ ನಡೆಸಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇಂದು ಬೆಳಗ್ಗೆ ಮಂಗಳೂರು ಜಿಲ್ಲಾಡಳಿತದೊಂದಿಗೆ ಮೊದಲು ಸಭೆ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ ಉಡುಪಿ ಜಿಲ್ಲಾಡಳಿತದೊಂದಿಗೆ ಸಭೆ ಕೈಗೊಳ್ಳಲಿದ್ದು, ಗಡಿ ಭಾಗಗಳಲ್ಲಿ ಪರಿಸ್ಥಿತಿ ಕೈಮೀರದಂತೆ ನೋಡಿಕೊಳ್ಳಲು ಏನೆಲ್ಲಾ ಕ್ರಮ ಅವಶ್ಯಕ? ಯಾವೆಲ್ಲಾ ಮಾರ್ಗಗಳಲ್ಲಿ ಅದನ್ನು ಸಾಧಿಸಬಹುದು ಎಂದು ಚರ್ಚೆ ನಡೆಸಲಿದ್ದಾರೆ.

ಇಂದು ಹಾಗೂ ನಾಳೆ 2 ದಿನ ಬಸವರಾಜ ಬೊಮ್ಮಾಯಿ ಕರಾವಳಿ ಪ್ರವಾಸದಲ್ಲಿ ನಿರತರಾಗಲಿದ್ದು, ನಾಳೆ ಬೆಳಗ್ಗೆ ಗಡಿಭಾಗದ ಚೆಕ್​ಪೋಸ್ಟ್​ಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಲಿದ್ದಾರೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಎರಡೂ ಜಿಲ್ಲೆಗಳ ಜಿಲ್ಲಾಡಳಿತದೊಂದಿಗೆ ಸಭೆ, ಸಮಾಲೋಚನೆ ಕೈಗೊಂಡ ನಂತರ ನಾಳೆ ಮಧ್ಯಾಹ್ನ ಬೆಂಗಳೂರಿಗೆ ವಾಪಸಾಗಲಿದ್ದಾರೆ.

ನಿಯಮ ಪಾಲಿಸಿ ಸ್ವಾತಂತ್ರ್ಯೋತ್ಸವ ಆಚರಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ‌ಕೇಸ್ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಆಗಸ್ಟ್​ 15ರಂದು ಕೂಡ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿ ಇರುತ್ತದೆ ಎಂದು ಸೂಚಿಸಲಾಗಿದೆ. ಸ್ವಾತಂತ್ರ್ಯ ದಿನ ಆಗಿದ್ದರೂ ವೀಕೆಂಡ್ ಕರ್ಫ್ಯೂ ಇರಲಿದೆ. ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಸ್ವಾತಂತ್ರ್ಯೋತ್ಸವ ದಿನಕ್ಕೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ನಿಯಮ ಪಾಲಿಸಿ ಸ್ವಾತಂತ್ರ್ಯೋತ್ಸವ ಆಚರಿಸಲು ಸೂಚನೆ ನೀಡಿದ್ದಾರೆ. ಹೆಚ್ಚು ಜನರನ್ನು ಸೇರಿಸದೇ ಧ್ವಜಾರೋಹಣ ಮಾಡಬೇಕು ಎಂದು ಆದೇಶ ನೀಡಲಾಗಿದೆ.

ದಕ್ಷಿಣ ಕನ್ನಡದಲ್ಲಿ ಕಳೆದ ಎರಡು ದಿನಗಳಿಂದ ಬೆಂಗಳೂರಿಗಿಂತಲೂ ಅಧಿಕ ಸಂಖ್ಯೆಯಲ್ಲಿ ಕೊರೊನಾ ಪ್ರಕರಣಗಳು ವರದಿ ಆಗಿದೆ. ಹೀಗಾಗಿ, ಸಾರ್ವಜನಿಕರು ಶಿಷ್ಟಾಚಾರ ಪಾಲಿಸಿ ಜವಾಬ್ದಾರಿಯುತವಾಗಿ ಸ್ವಾತಂತ್ರ್ಯ ದಿನ ಆಚರಿಸಲು ಸೂಚನೆ ಕೊಡಲಾಗಿದೆ. ಧ್ವಜಾರೋಹಣ ಸ್ಥಳದಲ್ಲಿ ಹೆಚ್ಚು ಜನ ಸೇರಿಸದೇ ಕೊವಿಡ್ ನಿಯಮ ಪಾಲಿಸಲು ಹೇಳಲಾಗಿದೆ. ವಾರಾಂತ್ಯ ಕರ್ಪ್ಯೂ ಹಿನ್ನೆಲೆ ಸಾರ್ವಜನಿಕರು ಅನಾವಶ್ಯಕವಾಗಿ ಮನೆಯಿಂದ ಹೊರಗೆ ಬರದಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ. ಈ ಮಧ್ಯೆಯೂ ಸ್ವಾತಂತ್ರ್ಯ ದಿನಾಚರಣೆಯ ಘನತೆಗೆ ಧಕ್ಕೆ ಬಾರದಂತೆ ಆಚರಿಸಬೇಕು ಎಂದು ಹೇಳಲಾಗಿದೆ.

(CM Basavaraj Bommai to visit Dakshina Kannada and Udupi amid spike in Covid 19 cases)

ಇದನ್ನೂ ಓದಿ: Corona 3rd Wave: ಕೇರಳಕ್ಕೆ ಆಘಾತ ನೀಡುತ್ತಿದೆ ಕೊರೊನಾ; ಎರಡು ಡೋಸ್​ ನಡುವಿನ ಅಂತರದಲ್ಲಿ ಬದಲಾವಣೆಯೇ ಪರಿಹಾರ?

ದಕ್ಷಿಣ ಕನ್ನಡದಲ್ಲಿ ಕೊರೊನಾ ಕೇಸ್ ಹೆಚ್ಚಳ: ಅದ್ದೂರಿ ಸ್ವಾತಂತ್ರ್ಯೋತ್ಸವಕ್ಕೆ ಬ್ರೇಕ್; ವಾರಾಂತ್ಯ ಕರ್ಫ್ಯೂ ಇರಲಿದೆ

ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ