AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ 2 ಗಂಟೆಗಳ ಕಾಲ ಡಿನ್ನರ್​​ ಮೀಟಿಂಗ್​​ ನಡೆಸಿದ ಸಿಎಂ ಡಿ.ಕೆ. ಶಿವಕುಮಾರ್​​: ಬಿಜೆಪಿ ಶಾಸಕರ ಗೈರು

ಮಂಗಳೂರಿನಲ್ಲಿ 2 ಗಂಟೆಗಳ ಕಾಲ ಡಿನ್ನರ್​​ ಮೀಟಿಂಗ್​​ ನಡೆಸಿದ ಸಿಎಂ ಡಿ.ಕೆ. ಶಿವಕುಮಾರ್​​: ಬಿಜೆಪಿ ಶಾಸಕರ ಗೈರು

ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Sep 18, 2026 | 6:25 AM

Share

ಮಂಗಳೂರಿನ ತಣ್ಣೀರು ಬಾವಿ ಕಡಲಕಿನಾರೆ ಬಳಿ ಸಿಎಂ ಡಿ.ಕೆ. ಶಿವಕುಮಾರ್ ಅವರು ಎರಡು ಗಂಟೆಗಳ ಕಾಲ ಡಿನ್ನರ್ ಸಭೆ ನಡೆಸಿದರು. ಡಿಸಿಎಂ ಡಾ. ಜಿ. ಪರಮೇಶ್ವರ್, ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವು ಸಚಿವರು ಭಾಗವಹಿಸಿದ್ದರು. ಕರಾವಳಿ ಭಾಗದ ಅಭಿವೃದ್ಧಿ ಕಾರ್ಯಗಳು ಹಾಗೂ ಜನರ ಕುಂದುಕೊರತೆಗಳ ಕುರಿತು ಚರ್ಚೆ ನಡೆಸಲಾಯಿತು. ಈ ಸಭೆಯಲ್ಲಿ ಯಾವುದೇ ಬಿಜೆಪಿ ಶಾಸಕರು ಹಾಜರಿರಲಿಲ್ಲ.

ಮಂಗಳೂರು, ಸೆಪ್ಟೆಂಬರ್​​ 18: ಸಚಿವ ಸಂಪುಟ ಸಭೆಗಾಗಿ ಮಂಗಳೂರಿಗೆ ಆಗಮಿಸಿರುವ ಸಿಎಂ ಡಿ.ಕೆ. ಶಿವಕುಮಾರ್ ಅವರು ತಣ್ಣೀರು ಬಾವಿ ಕಡಲಕಿನಾರೆ ಬಳಿ ಎರಡು ಗಂಟೆಗಳ ಕಾಲ ಡಿನ್ನರ್ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವು ಸಚಿವರು ಹಾಗೂ ಸ್ಥಳೀಯ ಶಾಸಕರು ಭಾಗಿಯಾಗಿದ್ದರು. ಕರಾವಳಿ ಭಾಗದ ಕ್ಷೇತ್ರಗಳಲ್ಲಿನ ಅಭಿವೃದ್ಧಿ ಕೆಲಸಗಳು, ಜನರ ಕುಂದುಕೊರತೆಗಳು ಮತ್ತು ಸ್ಥಳೀಯ ಸಮಸ್ಯೆಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು. ಇನ್ನು ಡಿನ್ನರ್​​ ಮೀಟಿಂಗ್​​ಗೆ ಕರಾವಳಿ ಭಾಗದ ಬಿಜೆಪಿ ಶಾಸಕರು, ಸಂಸದರಿಗೂ ಆಹ್ವಾನ ನೀಡಲಾಗಿತ್ತು. ಆದರೆ ಬಿಜೆಪಿಯ ಯಾವುದೇ ಜನಪ್ರತಿನಿಧಿಗಳು ಸಭೆಯಲ್ಲಿ ಭಾಗಿಯಾಗಿಲ್ಲ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Sep 18, 2026 06:24 AM

Follow Us