ಉಡುಪಿ ಕಾಲೇಜಿನ ವಿಡಿಯೋ ಪ್ರಕರಣ, ಉಡುಪಿ ತಲುಪುವ ಮುನ್ನ ​ಮೌನ ಮುರಿದ ಸಿದ್ದರಾಮಯ್ಯ

ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೌನ ಮುರಿದಿದ್ದಾರೆ.

ಉಡುಪಿ ಕಾಲೇಜಿನ ವಿಡಿಯೋ ಪ್ರಕರಣ, ಉಡುಪಿ ತಲುಪುವ ಮುನ್ನ ​ಮೌನ ಮುರಿದ ಸಿದ್ದರಾಮಯ್ಯ
ಸಿದ್ದರಾಮಯ್ಯ
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ರಮೇಶ್ ಬಿ. ಜವಳಗೇರಾ

Updated on: Aug 01, 2023 | 12:26 PM

ಮಂಗಳೂರು, (ಆಗಸ್ಟ್ 01): ರಾಷ್ಟ್ರಮಟ್ಟದಲ್ಲಿ ಭಾರೀ ಸದ್ದು ಮಾಡುತ್ತಿರುವ ಉಡುಪಿ(Udupi) ಖಾಸಗಿ ಕಾಲೇಜಿನ ಶೌಚಾಲಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕೊನೆಗೂ ಮೌನ ಮುರಿದಿದ್ದಾರೆ. ಉಡುಪಿ ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲು ಇಂದು ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಸಿದ್ದರಾಮಯ್ಯ ಬಂದಿಳಿದರು. ಈ ವೇಳೆ ಸುದ್ದಿಗಾರೊಂದಿಗೆ ಮಾತನಾಡಿದ ಸಿಎಂ, ಉಡುಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ಡಿವೈಎಸ್ಪಿ ನೇತ್ವದಲ್ಲಿ ತನಿಖೆ ನಡೆಯುತ್ತಿದ್ದು, ಅದು ಮೊದಲು ನಡೆಯಲಿ. ರಾಷ್ಟ್ರೀಯ ಮಹಿಳಾ ಆಯೋಗವೇ ಅಲ್ಲಿ ಕ್ಯಾಮರಾ ಇಟ್ಟಿರಲಿಲ್ಲ ಎಂದಿದ್ದಾರೆ. ತನಿಖಾ ವರದಿ ಬರಲಿ. ಆಮೇಲೆ ಈ ಬಗ್ಗೆ ಮಾತನಾಡುತ್ತೇನೆ. ಕಾಲೇಜ್‌ನಲ್ಲಿ ಇರುವ ವಿದ್ಯಾರ್ಥಿಗಳು ತಮಾಷೆ ಮಾಡಿರಬಹುದು ಎಂದು ಹೋಂ ಮಿನಿಸ್ಟರ್ ಹೇಳಿರಬಹುದು. ಎಫ್ಐಆರ್ ಆಗಿ ತನಿಖೆ ನಡೆಯುತ್ತಿದೆ. ಡಿವೈಎಸ್ಪಿ ಲೆವೆಲ್ ತನಿಖೆ ಆಗುತ್ತಿರುವ ಎಸ್ ಐಟಿ ತನಿಖೆ ಪ್ರಶ್ನೆ ಉದ್ಭವಿಸಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಉಡುಪಿ ಕಾಲೇಜಿಗೆ ಖುಷ್ಬೂ ಜತೆ ಬಂದ ವಕೀಲೆ ಬಗ್ಗೆ ಬಿಜೆಪಿ ಆಕ್ಷೇಪ, ಮಹಿಳಾ ಕಾಂಗ್ರೆಸ್ ತಿರುಗೇಟು

ಕರಾವಳಿಗೆ ಆಗಲೇ ಏನೇನು ಕೊಡಬಹುದು ಎಂದು ಹೇಳಿದ್ದೇವೆ. ಜುಲೈ ತಿಂಗಳ ಮಳೆ ಹಾನಿ ಬಗ್ಗೆ ಪರಿಶೀಲನೆಗೆ ಬಂದಿದ್ದೇನೆ. ನೈತಿಕ ಪೊಲೀಸ್ ಗಿರಿ ಯಾರೇ ಮಾಡಿದ್ದರೂ ನಿರ್ದಾಕ್ಷಿಣ್ಯ ಕ್ರಮ. ಕಾನೂನು ಕೈಗೆತ್ತಿಕೊಳ್ಳಲು ಇಲ್ಲಿ ಯಾರಿಗೂ ಅವಕಾಶ ಇಲ್ಲ. ಪೊಲೀಸರಿಗೆ ಇದಕ್ಕೆ ಅವಕಾಶ ಕೊಡಬೇಡಿ ಎಂದು ಎಚ್ಚರಿಕೆ ನೀಡಿದರು.

ಸೌಜನ್ಯ ಕೇಸ್ ಸಿಬಿಐಗೆ ಕೊಟ್ಟಿತ್ತು. ಅದು ಕೋರ್ಟ್​ನಲ್ಲಿ ಇತ್ತು. ಈಗ ಅವರ ಪೋಷಕರು ‌ಮರು ತನಿಖೆಗೆ ಮನವಿ ಮಾಡಿದ್ದಾರೆ. ಕಾನೂನು ಪ್ರಕಾರ ಏನಾಗಬೇಕು ಅಂತ ನೋಡಿ ಮುಂದಿನ ನಿರ್ಧಾರ ಮಾಡುತ್ತೇವೆ. ನಾನು ಲಾಯರ್ ಆಗಿ ಹೇಳುವುದಾದರೆ ಇದರ ಬಗ್ಗೆ ಹೈಕೋರ್ಟ್ ಗೆ ಅಪೀಲ್ ಹೋಗಬೇಕು. ನಾನು ಸಿಬಿಐ ಕೋರ್ಟ್ ಜಡ್ಜ್ ಮೆಂಟ್ ನೋಡಿಲ್ಲ.ಅವರ ಪೋಷಕರು ಜಡ್ಜ್ ಮೆಂಟ್ ಕಾಪಿ ತಂದು ಕೊಟ್ಟಿದ್ದಾರೆ. ಅದರ ಜಡ್ಜ್ ಮೆಂಟ್ ಓದಿ ಅಪೀಲ್​ಗೆ ಅವಕಾಶ ಇದ್ಯಾ ಅಂತ ನೋಡುತ್ತೇನೆ ಎಂದು ತಿಳಿಸಿದರು.

ಸಾಮಾಜಿಕ ತಾಣಗಳಲ್ಲಿ ಸುಳ್ಳು ಸುದ್ದಿ ಹರಡಿದರೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಟೀಕೆ ಮಾಡಿದರೆ ಕ್ರಮ ತೆಗೆದುಕೊಳ್ಳುವುದಿಲ್ಲ. ಸುಳ್ಳು ಸುದ್ದಿಗೆ ಕ್ರಮ. ಫ್ಯಾಮಿಲಿ ಬಗ್ಗೆ ಹೇಳುವುದು ಟೀಕೆನಾ? ಏನು ಬೇಕಾದರೂ ಹೇಳಬಹುದಾ? ನಿಮ್ಮ ಫ್ಯಾಮಿಲಿ ಬಗ್ಗೆ ಯಾರಾದ್ರೂ ಏನು ಬೇಕಾದರೂ ಹೇಳಬಹುದಾ ಎಂದು ಪ್ರಶ್ನಿಸಿದ ಸಿಎಂ, ಟೀಕೆ ಬೇರೆ, ಸುಳ್ಳು ಸುದ್ದಿ ಹಬ್ಬಿಸುವುದ ಬೇರೆ. ವೈಯಕ್ತಿಕವಾಗಿ ತೇಜೋವಧೆ ಮಾಡುವುದು ಕೂಡ ಬೇರೆ ಎಂದು ಹೇಳಿದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ