‘ಕಲೆಕ್ಷನ್ ಮಾಸ್ಟರ್’ಎಂದು ಸಿಎಂ ಸಿದ್ದರಾಮಯ್ಯ ಫೋಟೋ ಪೋಸ್ಟ್: ಶಾಸಕ ಹರೀಶ್ ಪೂಂಜ ವಿರುದ್ಧ FIR

| Updated By: ಗಂಗಾಧರ​ ಬ. ಸಾಬೋಜಿ

Updated on: Oct 27, 2023 | 4:43 PM

ಚಾರ್ಮಾಡಿ ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣ-ತೆರವು ಜಟಾಪಟಿ ವಿಚಾರವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ಇತ್ತೀಚೆಗೆ ಎಫ್ಐಆರ್ ದಾಖಲಾಗಿತ್ತು. ಇದೀಗ ಕಲೆಕ್ಷನ್ ಮಾಸ್ಟರ್​​ ಎಂದು ಸಿಎಂ ಸಿದ್ದರಾಮಯ್ಯ ಫೋಟೋ ಎಡಿಟ್ ಮಾಡಿ ಪೋಸ್ಟ್ ಮಾಡಿದಕ್ಕೆ ಮತ್ತೆ ಎಫ್ಐಆರ್ ದಾಖಲಾಗಿದೆ.

‘ಕಲೆಕ್ಷನ್ ಮಾಸ್ಟರ್’ಎಂದು ಸಿಎಂ ಸಿದ್ದರಾಮಯ್ಯ ಫೋಟೋ ಪೋಸ್ಟ್: ಶಾಸಕ ಹರೀಶ್ ಪೂಂಜ ವಿರುದ್ಧ FIR
ಬಿಜೆಪಿ ಶಾಸಕ ಹರೀಶ್ ಪೂಂಜ
Follow us on

ಮಂಗಳೂರು, ಅಕ್ಟೋಬರ್​​​ 27: ಕಲೆಕ್ಷನ್ ಮಾಸ್ಟರ್​​ ಎಂದು ಸಿಎಂ ಸಿದ್ದರಾಮಯ್ಯ ಫೋಟೋ ಎಡಿಟ್ ಮಾಡಿ ವೈರಲ್ ಮಾಡಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ (Harish Poonja) ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲು ಮಾಡಲಾಗಿದೆ. ಜಿಲ್ಲಾ ಪಂಚಾಯತ್​ ಮಾಜಿ ಸದಸ್ಯ ಶೇಖರ್ ಕುಕ್ಕೆಡಿ ನೀಡಿದ ಐಪಿಸಿ ಸೆಕ್ಷನ್ 1869 U/S 504, 505(2) ಅಡಿ ದೂರು ದಾಖಲಾಗಿತ್ತು.

ಸಿಎಂ ಕಚೇರಿ, ಗೃಹ ಕಚೇರಿ ಮತ್ತು ಸಿಎಂ ನಿವಾಸದ ಗೇಟ್​ಗೆ ಕಲೆಕ್ಷನ್ ಮಾಸ್ಟರ್​ ಎಂದು ಬೋರ್ಡ್ ಹಾಕಿರುವ ಫೋಟೋ ಎಡಿಟ್ ಮಾಡಿ ಶಾಸಕ ಹರೀಶ್ ಪೂಂಜ ಹೆಸರಿನ ಫೇಸ್​ಬುಕ್ ಪೇಜ್​ನಲ್ಲಿ ಪೋಸ್ಟ್ ಮಾಡಲಾಗಿತ್ತು.

ಇನ್ನು ಇತ್ತೀಚೆಗೆ ಚಾರ್ಮಾಡಿ ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣ-ತೆರವು ಜಟಾಪಟಿ ವಿಚಾರವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಸರ್ಕಾರಿ ಅಧಿಕಾರಿಗಳಿಗೆ ಕರ್ತವ್ಯಕ್ತೆ ಅಡ್ಡಿಪಡಿಸಿ ಬೆದರಿಕೆ ಹಾಕಿದ್ದಾರೆ ಎನ್ನುವ ಆರೋಪದ ಮೇಲೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಅರಣ್ಯ ಭೂಮಿ ಒತ್ತುವರಿ, ಆರ್​ಎಫ್​ಓಗೆ ಕರ್ತವ್ಯಕ್ಕೆ ಅಡ್ಡಿ; ಶಾಸಕರ ವಿರುದ್ದ ಈಶ್ವರ್ ಖಂಡ್ರೆಗೆ ದೂರು

ಬೆಳ್ತಂಗಡಿಯ ಕಳೆಂಜ ಗ್ರಾಮದ ವ್ಯಕ್ತಿಯೋರ್ವರು ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮ ಮನೆ ನಿರ್ಮಾಣ ಮಾಡಲಾಗುತ್ತಿತ್ತು. ಈ ವಿಚಾರವಾಗಿ ಅರಣ್ಯ ಇಲಾಖೆಯು ಮನೆ ತೆರವುಗೊಳಿಸಲು ಮುಂದಾಗಿದ್ದರು. ಈ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ದೌಡಾಯಿಸಿ ಮನೆ ಕಟ್ಟಿದವರ ಪರ ಬ್ಯಾಟಿಂಗ್ ಮಾಡಿದ್ದರು. ಅಲ್ಲದೇ ಮನೆ ತೆರವು ಮಾಡಲು ಬಂದಿದ್ದ ಅರಣ್ಯಾಧಿಕಾರಿಗಳಿಗೆ ತರಾಟಗೆ ತೆಗೆದುಕೊಂಡಿದ್ದರು.

ಪ್ರಕರಣದ ಹಿನ್ನೆಲೆ?

ಅರಣ್ಯ ಭೂಮಿಯ ಅತಿಕ್ರಮಣಕ್ಕೆ ಸಂಬಂಧಿಸಿದಂತೆ ವಿವಾದಕ್ಕೆ ಕಾರಣವಾಗಿದ್ದ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಸರ್ವೆ ನಂಬರ್ 309 ರ ನಿಡ್ಲೆ ವಿಸ್ತೃತ ಬ್ಲಾಕ್ 2ರಲ್ಲಿ ಅಮ್ಮಿನಡ್ಕ -ಕೆದ್ದ ನಿವಾಸಿ ಲೋಲಾಕ್ಷ ಯಾನೆ ಅನಂತು ಅವರು ಅರಣ್ಯ ಇಲಾಖೆಯ ಜಾಗವನ್ನು ಒತ್ತುವರಿ ಮಾಡಿ ನೂತನ ಮನೆ ನಿರ್ಮಾಣಕ್ಕೆ ಮುಂದಾಗಿರುವ ಬಗ್ಗೆ ಮಂಗಳೂರು ಅರಣ್ಯ ಇಲಾಖೆಗೆ ದೂರು ಬಂದಿತ್ತು.

ಇದನ್ನೂ ಓದಿ: ಹರೀಶ್ ಪೂಂಜ ವಿರುದ್ಧ ಎಫ್​ಐಆರ್: ಕಾಂಗ್ರೆಸ್ ವಿರುದ್ಧ ಕೋಟ ಶ್ರೀನಿವಾಸ ಪೂಜಾರಿ ಕಿಡಿ, ಸ್ಪೀಕರ್​ಗೆ ದೂರು ಎಂದ ಬಿಜೆಪಿ ನಾಯಕ

ಈ ಹಿನ್ನೆಲೆ ಅ.6 ರಂದು ಅರಣ್ಯ ಇಲಾಖೆ ಸಿಬ್ಬಂದಿ ನೂತನ ಮನೆಯ ಫೌಂಡೇಶನ್ ತೆರವುಗೊಳಿಸಿದ್ದರು. ಘಟನೆ ವಿಚಾರ ತಿಳಿದು ಶಾಸಕ ಹರೀಶ್ ಪೂಂಜ ಅಕ್ಟೋಬರ್ 7 ರಂದು ಸ್ಥಳಕ್ಕೆ ಭೇಟಿ ನೀಡಿ ಅರಣ್ಯಧಿಕಾರಿಗಳಿಗೆ ಬೈದಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಸರ್ಕಾರಿ ಅಧಿಕಾರಿಗಳಿಗೆ ಕರ್ತವ್ಯಕ್ತೆ ಅಡ್ಡಿಪಡಿಸಿ ಬೆದರಿಕೆ ಹಾಕಿದ್ದಾರೆ ಎನ್ನುವ ಆರೋಪದ ಮೇಲೆಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪೊಲೀಸರು ಎಫ್​ಐಆರ್​ ದಾಖಲಿಸಿಕೊಂಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:42 pm, Fri, 27 October 23