ಹಾವೇರಿಯಲ್ಲಿ ರಾಜ್ಯ ಸರ್ಕಾರದ ‘ಆಶಾಕಿರಣ’ ಕಾರ್ಯಕ್ರಮಕ್ಕೆ ಚಾಲನೆ ನೀಡಲಿರುವ ಸಿಎಂ ಸಿದ್ದರಾಮಯ್ಯ, ಏನಿದು ಯೋಜನೆ?

ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ರಾಜ್ಯ ಸರ್ಕಾರದ ‘ಆಶಾಕಿರಣ’ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಫೆ.18ರಂದು ಹಾವೇರಿಯಲ್ಲಿ ಸಿಎಂ ಸಿದ್ದರಾಮಯ್ಯನವರು ‘ನಿಮ್ಮ ಮನೆ ಬಾಗಿಲಿಗೆ ಕಣ್ಣಿನ ಆರೈಕೆ’ ಎಂಬ ಧ್ಯೇಯ ವಾಕ್ಯದಲ್ಲಿ ‘ಆಶಾಕಿರಣ’ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

ಹಾವೇರಿಯಲ್ಲಿ ರಾಜ್ಯ ಸರ್ಕಾರದ ‘ಆಶಾಕಿರಣ’ ಕಾರ್ಯಕ್ರಮಕ್ಕೆ ಚಾಲನೆ ನೀಡಲಿರುವ ಸಿಎಂ ಸಿದ್ದರಾಮಯ್ಯ, ಏನಿದು ಯೋಜನೆ?
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
Follow us
| Updated By: ಆಯೇಷಾ ಬಾನು

Updated on: Feb 17, 2024 | 2:47 PM

ಮಂಗಳೂರು, ಫೆ.17: ನಾಳೆ ಹಾವೇರಿಯಲ್ಲಿ ನಡೆಯಲಿರುವ ರಾಜ್ಯ ಸರ್ಕಾರದ ‘ಆಶಾಕಿರಣ’ (Ashakirana) ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah) ಚಾಲನೆ ನೀಡಲಿದ್ದಾರೆ. ‘ನಿಮ್ಮ ಮನೆ ಬಾಗಿಲಿಗೆ ಕಣ್ಣಿನ ಆರೈಕೆ’ ಎಂಬ ಧ್ಯೇಯ ವಾಕ್ಯದಲ್ಲಿ ಯೋಜನೆ ಜಾರಿಯಾಗಲಿದೆ ಎಂದು ಮಂಗಳೂರಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ತಿಳಿಸಿದರು. ಮಗುವಿನಿಂದ ಹಿಡಿದು ಎಲ್ಲಾ ವಯೋಮಾನದವರಿಗೆ ಕಣ್ಣಿನ ತಪಾಸಣೆ ಮಾಡಲಾಗುತ್ತೆ. ದೃಷ್ಟಿದೋಷ ಇರುವವರಿಗೆ ಉಚಿತ ಕನ್ನಡಕ ವಿತರಣೆ ಮಾಡುತ್ತೇವೆ ಎಂದು ಹೇಳಿದರು.

ಮಂಗಳೂರಿನಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ನಾಳೆ (ಫೆ.18) ನಡೆಯಲಿರುವ ‘ಆಶಾಕಿರಣ’ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಆಶಾಕಿರಣ ಕಾರ್ಯಕ್ರಮ ನಾಳೆ ಹಾವೇರಿಯಲ್ಲಿ ಉದ್ಘಾಟನೆ ಆಗ್ತಿದೆ. ಸಿಎಂ ಸಿದ್ದರಾಮಯ್ಯನವರು ಕಾರ್ಯಕ್ರಮ ಉದ್ಘಾಟನೆ ಮಾಡ್ತಾರೆ. ನಿಮ್ಮ ಮನೆ ಬಾಗಿಲಿಗೆ ಕಣ್ಣಿನ ಆರೈಕೆ ಎಂಬ ಧ್ಯೇಯ ವಾಕ್ಯದಲ್ಲಿ ಯೋಜನೆ ಕಾರ್ಯನಿರ್ವಹಿಸಲಿದೆ. ಮಗುವಿನಿಂದ ಹಿಡಿದು ಎಲ್ಲಾ ವಯೋಮಾನದವರಿಗೆ ಕಣ್ಣಿನ ತಪಾಸಣೆ ಮಾಡಲಾಗುತ್ತೆ. ದೃಷ್ಟಿದೋಷ ಇರುವವರಿಗೆ ಉಚಿತ ಕನ್ನಡಕ ವಿತರಣೆ ಮಾಡಲಾಗುತ್ತೆ.

ಅವಶ್ಯಕತೆ ಇರುವವರಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಮಾಡುತ್ತೇವೆ. ಮೊದಲ ಹಂತದಲ್ಲಿ ಚಿಕ್ಕಬಳ್ಳಾಪುರ, ಕಲಬುರಗಿ, ಚಾಮರಾಜನಗರ, ಹಾವೇರಿ ಜಿಲ್ಲೆಯಲ್ಲಿ ಈ ಯೋಜನೆ ಜಾರಿ ಮಾಡ್ತಿದ್ದೇವೆ. ಎರಡನೇ ಹಂತದಲ್ಲಿ ಚಿತ್ರದುರ್ಗ, ಮಂಡ್ಯ, ರಾಯಚೂರು, ಉತ್ತರಕನ್ನಡ ಜಿಲ್ಲೆಯಲ್ಲಿ ಆಶಾಕಿರಣ ಅಭಿಯಾನ ಆರಂಭವಾಗುತ್ತದೆ. ಮುಂದೆ ಹಂತ ಹಂತವಾಗಿ ರಾಜ್ಯದ ಉಳಿದ ಜಿಲ್ಲೆಗಳಲ್ಲೂ ಈ ಯೋಜನೆ ವಿಸ್ತರಣೆ ಆಗುತ್ತೆ. ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡುತ್ತಾರೆ. ಎಲ್ಲಾ ವಯೋಮಾನದವರ ಪ್ರಾಥಮಿಕ‌ ಹಂತದ ಕಣ್ಣಿ‌ನ ತಪಾಸಣೆ ಮಾಡ್ತಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಇದನ್ನೂ ಓದಿ: ಮಂಗಳೂರು ಜೆರೋಸಾ ಶಾಲೆ ಪ್ರಕರಣ; IAS ಅಧಿಕಾರಿ ನೇತೃತ್ವದಲ್ಲಿ ತನಿಖೆಗೆ ಆದೇಶ

ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ನಾವು ಗೆಲ್ಲಲು ಆಗಿಲ್ಲ, ಆದ್ರೆ ನಮ್ಮ ಪ್ರಯತ್ನ ನಾವು ಮಾಡ್ತೇವೆ

ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಬದಲಾವಣೆ ಆಗುತ್ತದೆ.ಧರ್ಮ, ಜಾತಿ, ಸ್ವಾರ್ಥ, ಪ್ರಚೋದನಕಾರಿ ಮಾತು ಇದೇ ಅಗಿದೆ. ಈ ಬಗ್ಗೆ ಜನರಿಗೆ ಅರ್ಥವಾಗುವ ರೀತಿ ನಾವು ಪ್ರಚಾರ ಮಾಡ್ತೇವೆ ಎಂದು ದ.ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ನಾವು ಗೆಲ್ಲಲು ಆಗಿಲ್ಲ, ಒಪ್ಪಿಕೊಳ್ಳುತ್ತೇವೆ. ಆದ್ರೆ ನಮ್ಮ ಪ್ರಯತ್ನ ನಾವು ಮಾಡ್ತೇವೆ. ಜನರ ಮುಂದೆ ಕೊಟ್ಟಿರುವ ಮಾತು ಉಳಿಸಿಕೊಂಡಿರುವ ಸರ್ಕಾರ ನಮ್ಮದು. ಒಳ್ಳೆಯ ಕೆಲಸ ಮಾಡಲು ಮುಖ್ಯಮಂತ್ರಿಗಳು ಮುಂದೆ ಹೆಜ್ಜೆ ಇಡ್ತಿದ್ದಾರೆ. ಕರ್ನಾಟಕಕ್ಕೆ ಆಗಿರುವ ಅನ್ಯಾಯದ ಬಗ್ಗೆ ಪ್ರತಿಪಾದನೆ ಮಾಡ್ತಿದ್ದಾರೆ. ಜನರ ವಿಶ್ವಾಸ ಗಳಿಸಲು ನಮ್ಮ ಪ್ರಾಮಾಣಿಕ ಪ್ರಯತ್ನ ಇರುತ್ತೆ. ಕೊಡಗಿನಲ್ಲಿ ನಾವು ಗೆದ್ದೇ ಇಲ್ಲ ಗೆದ್ದೇ ಇಲ್ಲ ಅಂತಿದ್ರು. ಮೊನ್ನೆ ಎರಡು ಶಾಸಕ‌ ಸ್ಥಾನ ಗೆದ್ದಿದೇವೆ. ಅದೇ ರೀತಿ ಜ‌ನರ ಮನಸ್ಸನ್ನ ನಾವು ಗೆಲ್ಲಬೇಕು. ಈ ಸಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಬದಲಾವಣೆ ಆಗುತ್ತೆ. ಜನರಿಗೂ ಇದನ್ನು‌ ನೋಡಿ‌ ನೋಡಿ‌ ಸಾಕಾಗಿ ಹೋಗಿದೆ. ನಿಮಗೆ ಅಭಿವೃದ್ಧಿ, ಶಾಂತಿ, ನೆಮ್ಮದಿ ಬೇಕಾ ಅಥವಾ ಈ ಮಾತುಗಳನ್ನೇ ಕೇಳಿಕೊಂಡು ಹೋಗ್ಬೇಕಾ ಎಂಬ ಪ್ರಶ್ನೆಯನ್ನು ಜನರ ಮುಂದಿಡುತ್ತೇವೆ ಎಂದು ಮಂಗಳೂರಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಜನರಿಗೆ ಪ್ರಶ್ನೆ ಮಾಡಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ