ಚುನಾವಣಾ ಫಲಿತಾಂಶಕ್ಕೂ ಮುನ್ನ ಮಂಜುನಾಥನ ದರ್ಶನ ಪಡೆದ ಬಿಎಸ್​ವೈ

ಮಂಗಳೂರು: ನಾಳಿನ ಉಪಚುನಾವಣಾ ಫಲಿತಾಂಶ ಬಿಜೆಪಿ ಸರ್ಕಾರದ ಅಳಿವು ಉಳಿವಿನ ಮೇಲೆ ನಿಂತಿದೆ. ಹೀಗಾಗಿ ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ಫಲಿತಾಂಶಕ್ಕೂ ಮುನ್ನ ಧರ್ಮಸ್ಥಳ ಶ್ರೀಮಂಜುನಾಥ ಸ್ವಾಮಿ ದರ್ಶನ ಪಡೆದಿದ್ದಾರೆ. ಹೆಚ್ಚು ಬಿಜೆಪಿ ಅಭ್ಯರ್ಥಿಗಳು ಗೆದ್ದು, ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಬಿಎಸ್​ವೈ ದೇವರ ಮೊರೆ ಹೋಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ದೇವಸ್ಥಾನಕ್ಕೆ ಸಿಎಂ ಯಡಿಯೂರಪ್ಪ ಭೇಟಿ ನೀಡಿ ಮಂಜುನಾಥೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಡಿಸಿಎಂ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಶಾಸಕ ಹರೀಶ್ […]

ಚುನಾವಣಾ ಫಲಿತಾಂಶಕ್ಕೂ ಮುನ್ನ ಮಂಜುನಾಥನ ದರ್ಶನ ಪಡೆದ ಬಿಎಸ್​ವೈ
Follow us
ಸಾಧು ಶ್ರೀನಾಥ್​
|

Updated on:Dec 08, 2019 | 3:26 PM

ಮಂಗಳೂರು: ನಾಳಿನ ಉಪಚುನಾವಣಾ ಫಲಿತಾಂಶ ಬಿಜೆಪಿ ಸರ್ಕಾರದ ಅಳಿವು ಉಳಿವಿನ ಮೇಲೆ ನಿಂತಿದೆ. ಹೀಗಾಗಿ ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ಫಲಿತಾಂಶಕ್ಕೂ ಮುನ್ನ ಧರ್ಮಸ್ಥಳ ಶ್ರೀಮಂಜುನಾಥ ಸ್ವಾಮಿ ದರ್ಶನ ಪಡೆದಿದ್ದಾರೆ. ಹೆಚ್ಚು ಬಿಜೆಪಿ ಅಭ್ಯರ್ಥಿಗಳು ಗೆದ್ದು, ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಬಿಎಸ್​ವೈ ದೇವರ ಮೊರೆ ಹೋಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ದೇವಸ್ಥಾನಕ್ಕೆ ಸಿಎಂ ಯಡಿಯೂರಪ್ಪ ಭೇಟಿ ನೀಡಿ ಮಂಜುನಾಥೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಡಿಸಿಎಂ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಶಾಸಕ ಹರೀಶ್ ಪೂಂಜಾ ಸೇರಿದಂತೆ ಹಲವರು ಯಡಿಯೂರಪ್ಪಗೆ ಸಾಥ್ ನೀಡಿದ್ದಾರೆ.

ಸರ್ಕಾರ ಮೂರು ವರ್ಷ ಸುಭದ್ರ: 14 ಕ್ಷೇತ್ರವನ್ನು ನಾವು ಗೆಲ್ಲುತ್ತೇವೆ. ಇನ್ನೊಂದು ಕಾಂಗ್ರೆಸ್ ಅಥವಾ ಜೆಡಿಎಸ್ ಪಡೆಯುತ್ತೆ‌. ಸರ್ಕಾರ ಮೂರು ವರ್ಷ ಸುಭದ್ರವಾಗಿರುತ್ತೆ. ಫಲಿತಾಂಶ ಹಾಗೂ ರಾಜ್ಯದ ಜನರ ಒಳಿತಿಗಾಗಿ ವಿಶೇಷ ಪ್ರಾರ್ಥನೆ ಮಾಡಲಾಗಿದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿಕ್ರಿಯೆಸಿದ್ದಾರೆ.

Published On - 3:26 pm, Sun, 8 December 19

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ