ಮಂಗಳೂರು: ನಾಳಿನ ಉಪಚುನಾವಣಾ ಫಲಿತಾಂಶ ಬಿಜೆಪಿ ಸರ್ಕಾರದ ಅಳಿವು ಉಳಿವಿನ ಮೇಲೆ ನಿಂತಿದೆ. ಹೀಗಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಫಲಿತಾಂಶಕ್ಕೂ ಮುನ್ನ ಧರ್ಮಸ್ಥಳ ಶ್ರೀಮಂಜುನಾಥ ಸ್ವಾಮಿ ದರ್ಶನ ಪಡೆದಿದ್ದಾರೆ. ಹೆಚ್ಚು ಬಿಜೆಪಿ ಅಭ್ಯರ್ಥಿಗಳು ಗೆದ್ದು, ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಬಿಎಸ್ವೈ ದೇವರ ಮೊರೆ ಹೋಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ದೇವಸ್ಥಾನಕ್ಕೆ ಸಿಎಂ ಯಡಿಯೂರಪ್ಪ ಭೇಟಿ ನೀಡಿ ಮಂಜುನಾಥೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಡಿಸಿಎಂ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಶಾಸಕ ಹರೀಶ್ ಪೂಂಜಾ ಸೇರಿದಂತೆ ಹಲವರು ಯಡಿಯೂರಪ್ಪಗೆ ಸಾಥ್ ನೀಡಿದ್ದಾರೆ.
ಸರ್ಕಾರ ಮೂರು ವರ್ಷ ಸುಭದ್ರ:
14 ಕ್ಷೇತ್ರವನ್ನು ನಾವು ಗೆಲ್ಲುತ್ತೇವೆ. ಇನ್ನೊಂದು ಕಾಂಗ್ರೆಸ್ ಅಥವಾ ಜೆಡಿಎಸ್ ಪಡೆಯುತ್ತೆ. ಸರ್ಕಾರ ಮೂರು ವರ್ಷ ಸುಭದ್ರವಾಗಿರುತ್ತೆ. ಫಲಿತಾಂಶ ಹಾಗೂ ರಾಜ್ಯದ ಜನರ ಒಳಿತಿಗಾಗಿ ವಿಶೇಷ ಪ್ರಾರ್ಥನೆ ಮಾಡಲಾಗಿದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿಕ್ರಿಯೆಸಿದ್ದಾರೆ.
Published On - 3:26 pm, Sun, 8 December 19