ಕೂಲಿಗೆ ತೆರಳುವ ಮಹಿಳೆಯೊಬ್ಬರು ರಾಷ್ಟ್ರಧ್ವಜಕ್ಕೆ ವಂದಿಸುತ್ತಿರುವ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್
ಸುಳ್ಯದ ಗಾಂಧಿ ವಿಚಾರ ವೇದಿಕೆ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಕಾರ್ಯಕ್ರಮ ಮುಗಿದ ಮೇಲೆ ಅದೇ ದಾರಿಯಾಗಿ ಕೂಲಿಗೆ ಹೊರಟಿದ್ದ ಮಹಿಳೆ ಧ್ವಜವನ್ನು ಕಂಡು, ರಾಷ್ಟ್ರ ಧ್ವಜಕ್ಕೆ ಗೌರವ ಸಲ್ಲಿಸಿದ್ದಾರೆ.
ಮಂಗಳೂರು: ಭಾರತದ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶದ ವಿವಿಧೆಡೆ ಸಂಭ್ರಮದಿಂದ ಆಚರಿಸಲಾಯಿತು. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹಿತ ವಿವಿಧ ನಾಯಕರು ಹಾಗೂ ಜನಸಾಮಾನ್ಯರು ಕೂಡ ಸ್ವಾತಂತ್ರ್ಯ ಸಂಭ್ರಮದಲ್ಲಿ ಭಾಗಿಯಾಗಿದರು. ದೇಶ ಹಾಗೂ ಕರ್ನಾಟಕದ ವಿವಿಧೆಡೆ ವಿನೂತನ ಶೈಲಿಯ ಸ್ವಾತಂತ್ರ್ಯ ದಿನೋತ್ಸವ ಗಮನ ಸೆಳೆಯಿತು. ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ, ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಏಣಗುಡ್ಡೆಯಲ್ಲಿ ಅತಿಸಾಮಾನ್ಯ ಮಹಿಳೆಯೊಬ್ಬರು ಭಾರತದ ಬಾವುಟಕ್ಕೆ ಚಪ್ಪಲಿ ಕಳಚಿಟ್ಟು ಸೆಲ್ಯೂಟ್ ಹೊಡೆದಿರುವ ಫೋಟೊ ವೈರಲ್ ಆಗಿದೆ.
ಸುಳ್ಯದ ಗಾಂಧಿ ವಿಚಾರ ವೇದಿಕೆ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಕಾರ್ಯಕ್ರಮ ಮುಗಿದ ಮೇಲೆ ಅದೇ ದಾರಿಯಾಗಿ ಕೂಲಿಗೆ ಹೊರಟಿದ್ದ ಮಹಿಳೆ ಧ್ವಜವನ್ನು ಕಂಡು, ರಾಷ್ಟ್ರ ಧ್ವಜಕ್ಕೆ ಗೌರವ ಸಲ್ಲಿಸಿದ್ದಾರೆ. ಚಪ್ಪಲಿ ಕಳಚಿಟ್ಟು, ಧ್ವಜಕ್ಕೆ ಸೆಲ್ಯೂಟ್ ಮಾಡಿದ್ದಾರೆ. ಸ್ಥಳದಲ್ಲಿ ಇದ್ದವರು ಈ ಕ್ಷಣವನ್ನು ಸೆರೆ ಹಿಡಿದಿದ್ದಾರೆ. ಈಗ ಈ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಹಳಷ್ಟು ಜನರು ಸಾಮಾನ್ಯ ಮಹಿಳೆಯೊಬ್ಬರ ದೇಶಪ್ರೇಮದ ಫೋಟೊವನ್ನು ಮೆಚ್ಚಿ, ಹಂಚಿಕೊಂಡಿದ್ದಾರೆ.
ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮದ ನಂತರ ತನ್ನ ದೈನಂದಿನ ಕೆಲಸಕ್ಕೆ ಹೊರಟಿದ್ದ ಮಾತೆಯೊಬ್ಬರು ರಾಷ್ಟ್ರಧ್ವಜವನ್ನು ಕಂಡು, ಚಪ್ಪಲಿ ತೆಗೆದು ಧ್ವಜಕ್ಕೆ ಸೆಲ್ಯೂಟ್ ಮಾಡಿ ತನ್ನ ಪಾಡಿಗೆ ಕೆಲಸಕ್ಕೆ ಹೊರಟು ಹೋದರಂತೆ.
ಇದು ಭಾರತ… ಇದು ಸಂಭ್ರಮ… ಇದು ಶ್ರದ್ಧೆ… ಇದು ಭಕ್ತಿ… pic.twitter.com/nYlW9WUygx
— C T Ravi ?? ಸಿ ಟಿ ರವಿ (@CTRavi_BJP) August 15, 2021
ಈ ಫೋಟೊವನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕೂಡ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮದ ನಂತರ ತನ್ನ ದೈನಂದಿನ ಕೆಲಸಕ್ಕೆ ಹೊರಟಿದ್ದ ಮಾತೆಯೊಬ್ಬರು ರಾಷ್ಟ್ರಧ್ವಜವನ್ನು ಕಂಡು, ಚಪ್ಪಲಿ ತೆಗೆದು ಧ್ವಜಕ್ಕೆ ಸೆಲ್ಯೂಟ್ ಮಾಡಿ ತನ್ನ ಪಾಡಿಗೆ ಕೆಲಸಕ್ಕೆ ಹೊರಟು ಹೋದರಂತೆ. ಇದು ಭಾರತ. ಇದು ಸಂಭ್ರಮ. ಇದು ಶ್ರದ್ಧೆ. ಇದು ಭಕ್ತಿ ಎಂದು ಸಿ.ಟಿ. ರವಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ದಾವಣಗೆರೆ ಜಿಲ್ಲಾಡಳಿತದಿಂದ ಸನ್ಮಾನ