ನೀರಿನ ಸಮಸ್ಯೆಯಿಂದ ಕಂಪನಿಗಳು ರಾಜ್ಯಕ್ಕೆ ಬರಲು ಹಿಂದೇಟು: ಆರ್ ಅಶೋಕ ಹೇಳಿಕೆಗೆ ಕೃಷ್ಣ ಬೈರೇಗೌಡ ತಿರುಗೇಟು

ಕರ್ನಾಟಕ ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಳವಾಗುತ್ತಿದೆ. ಬೆಂಗಳೂರಿನಲ್ಲಿ ನೀರಿನ ಸಮಸ್ಯೆಯಿಂದ ಐಟಿ ಕಂಪನಿಗಳು ರಾಜ್ಯಕ್ಕೆ ಬರಲು ಹಿಂಜರಿಯುತ್ತಿವೆ ಎಂದು ಆರ್.ಅಶೋಕ ಆರೋಪಿಸಿದ್ದರು. ಈ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಕೃಷ್ಣ ಬೈರೇಗೌಡ, ರಾಜ್ಯದ ಬಿಜೆಪಿ ನಾಯಕರಿಗೆ ಜನರ ಬಗ್ಗೆ ಕಾಳಜಿಯಿದ್ದರೆ ಮೊದಲು ದೆಹಲಿಗೆ ಹೋಗಲಿ ಎಂದರು.

ನೀರಿನ ಸಮಸ್ಯೆಯಿಂದ ಕಂಪನಿಗಳು ರಾಜ್ಯಕ್ಕೆ ಬರಲು ಹಿಂದೇಟು: ಆರ್ ಅಶೋಕ ಹೇಳಿಕೆಗೆ ಕೃಷ್ಣ ಬೈರೇಗೌಡ ತಿರುಗೇಟು
ಕೃಷ್ಣ ಬೈರೇಗೌಡ ಮತ್ತು ಆರ್.ಅಶೋಕ
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: Rakesh Nayak Manchi

Updated on:Mar 09, 2024 | 6:46 PM

ಮಂಗಳೂರು, ಮಾ.9: ರಾಜ್ಯದ ಬಿಜೆಪಿ ನಾಯಕರಿಗೆ ಜನರ ಬಗ್ಗೆ ಕಾಳಜಿಯಿದ್ದರೆ ಮೊದಲು ದೆಹಲಿಗೆ ಹೋಗಿ ನಾಯಕರ ಮನವೋಲಿಸಿ ಅನುದಾನ ತರಲಿ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಹೇಳಿದರು. ರಾಜ್ಯದಲ್ಲಿ ಕುಡಿಯುವ ನೀರಿನ‌ ಸಮಸ್ಯೆ ಹೆಚ್ಚಳ ವಿಚಾರವಾಗಿ ಮಾತನಾಡಿದ್ದ ವಿಪಕ್ಷ ನಾಯಕ ಆರ್.ಅಶೋಕ (R Ashoka), ಬೆಂಗಳೂರಿನಲ್ಲಿ ನೀರಿನ ಸಮಸ್ಯೆಯಿಂದ ಐಟಿಬಿಟಿ ಕಂಪನಿಗಳು ರಾಜ್ಯಕ್ಕೆ ಬರಲು ಹಿಂಜರಿಯುತ್ತವೆ ಎಂದು ಆರೋಪಿಸಿದ್ದರು.

ಈ ಆರೋಪಕ್ಕೆ ಮಂಗಳೂರಿನಲ್ಲಿ ತಿರುಗೇಟು ನೀಡಿದ ಕೃಷ್ಣ ಬೈರೇಗೌಡ, ಸೆಪ್ಟೆಂಬರ್ ತಿಂಗಳಿನಲ್ಲಿ ಬರಪರಿಹಾರಕ್ಕೆ ಅನುದಾನ ನೀಡುವಂತೆ ಕೇಂದ್ರಕ್ಕೆ ಪತ್ರ ಬರೆದಿದ್ದೇವೆ. ಮನವಿ ಕೊಟ್ಟು ಆರು ತಿಂಗಳಾದರೂ ಕೇಂದ್ರ ಒಂದು ಪೈಸೆಯೂ ಬಿಡುಗಡೆ ಮಾಡಿಲ್ಲ. ರೈತರಿಗೆ ರಾಜ್ಯ ಸರ್ಕಾರನೇ ಪರಿಹಾರ ನೀಡಿದೆ. ಅಂತಿಮ ಪರಿಹಾರವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡುತ್ತಿಲ್ಲ ಎಂದರು.

ಕರ್ನಾಟಕ ಇಷ್ಟೆಲ್ಲಾ ಬರ ಪರಿಸ್ಥಿತಿ ಎದುರಿಸುತ್ತಿದ್ದರೂ ಕೇಂದ್ರ ಸರ್ಕಾರ ನನಗೇನು ಸಂಬಂಧ ಇಲ್ಲ ಎಂಬಂತಿದೆ. ಬೇಜವಬ್ದಾರಿತನದಿಂದ ವರ್ತಿಸುತ್ತಿದೆ. ರಾಜ್ಯದ ಬಿಜೆಪಿ ನಾಯಕರಿಗೆ ಜನರ ಬಗ್ಗೆ ಕಾಳಜಿಯಿದ್ದರೆ ಮೊದಲು ದೆಹಲಿಗೆ ಹೋಗಲಿ. ಕೇಂದ್ರ ಸಚಿವರು, ಪ್ರಧಾನಿಯವರ ಜೊತೆ ಕೂತು ಮಾತನಾಡಲಿ. ಕರ್ನಾಟಕಕ್ಕೆ ಬರಬೇಕಾದ ಹಣವನ್ನು ಮೊದಲು ಕೊಡಿಸಲಿ. ಅದು ಬಿಟ್ಟು ಸುಮ್ಮನೆ ಪ್ರಚಾರಕ್ಕಾಗಿ ಹೇಳಿಕೆ ಕೊಡುವುದರಿಂದ ಸಮಸ್ಯೆ ಪರಿಹಾರವಾಗುವುದಿಲ್ಲ ಎಂದರು.

ಕರ್ನಾಟಕಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಏನು ಮಾತನಾಡುತ್ತಿಲ್ಲ. ರಾಜ್ಯದ ಬಿಜೆಪಿ ನಾಯಕರೇ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಏನೇ ಅನ್ಯಾಯ ಮಾಡಿದರೂ ಬಾಯಿ ಬಿಡುತ್ತಿಲ್ಲ. ಸಮರ್ಥನೆ ಮಾಡಿಕೊಂಡು ಅನ್ಯಾಯ ಮುಂದುವರಿಸಿಲು ಪ್ರತ್ಯಕ್ಷವಾಗಿ ಕಾರಣರಾಗಿದ್ದಾರೆ. ಬರಬೇಕಾದ ಹಣವನ್ನು ಕೇಂದ್ರದಿಂದ ಬಾಯಿಬಿಟ್ಟು ಕೇಳಲಿ. ಅದನ್ನು ಕೇಳದೆ ರಾಜ್ಯದ ಜನರಿಗೆ ಇಲ್ಲಿನ ಬಿಜೆಪಿ ನಾಯಕರು ಅನ್ಯಾಯ ಮಾಡುತ್ತಿದ್ದಾರೆ ಎಂದರು.

ಇದನ್ನೂ ಓದಿ: ಕಾಂಗ್ರೆಸ್ ಮಾಡಿದ ತಪ್ಪಿನಿಂದ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ: ಆರ್ ಅಶೋಕ ವಾಗ್ದಾಳಿ

ಬರಗಾಲ ಸವಾಲಿನ ಸನ್ನಿವೇಶ. ಇದನ್ನು ಎದುರಿಸುವ ಎಲ್ಲಾ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ. ರಾಜ್ಯದ 223 ತಾಲೂಕುಗಳಲ್ಲಿ ಬರ ಘೋಷಣೆ ಆಗಿದೆ. ರಾಜ್ಯಾದ್ಯಂತ 675 ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಪ್ರೈವೇಟ್ ಟ್ಯಾಂಕರ್ ಹಾಗೂ ಖಾಸಗಿ ಬೋರ್ ವೆಲ್​ಗಳನ್ನು ಬಾಡಿಗೆ ಪಡೆದು ನೀರು ಸರಬರಾಜು ಮಾಡುತ್ತಿದ್ದೇವೆ ಎಂದರು.

4000 ಬೋರ್ ವೆಲ್​ಗಳ ಬಾಡಿಗೆಗೆ ಒಪ್ಪಂದ ಮಾಡಿದ್ದೇವೆ. ಬೆಂಗಳೂರಿನಲ್ಲಿಯೂ ವಾಡಿಕೆಗಿಂತ ಹೆಚ್ಚು ಸಮಸ್ಯೆ ಕಂಡುಬಂದಿದೆ. ಬಿಬಿಎಂಪಿ ಜೊತೆ ಸಭೆ ಮಾಡಿ ಬೇಕಾದ ಹಣ ಕೊಡುವ ಕೆಲಸ ಮಾಡುತ್ತಿದ್ದೇವೆ. ಸಮಸ್ಯೆ ನಿಭಾಯಿಸಲು ಸರ್ಕಾರ ತೀವ್ರವಾದ ಹೆಜ್ಜೆ ಇಟ್ಟಿದೆ. ಖಾಸಗಿ ಟ್ಯಾಂಕರ್​ಗಳಿಗೆ ಸರ್ಕಾರ ದರ ನಿಗದಿ ಮಾಡಿದೆ. ನೀರಿನ ಸಮಸ್ಯೆ ಎದುರಿಸಲು ಹಿಂದೆ ಮಾಡದೇ ಇರುವ ಪ್ರಯತ್ನವನ್ನು ಈ ಬಾರಿ ಕೈಗೆತ್ತಿಕೊಳ್ಳಲಾಗಿದೆ ಎಂದರು.

ಗೊಂದಲದ ಗೂಡಿನಲ್ಲಿ ಬಿಜೆಪಿ

11 ನೇ ತಾರೀಕಿನ ಬಳಿಕ ಕಾಂಗ್ರೆಸ್​ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷರು ಈಗಾಗಲೇ ಹೇಳಿದ್ದಾಗಿ ಕೃಷ್ಣ ಬೈರೇಗೌಡ ಹೇಳಿದರು. ಈ ಬಾರಿಯು ಕರ್ನಾಟಕದಲ್ಲಿ ಬಿಜೆಪಿ ಗೊಂದಲದ ಗೂಡಾಗಿದೆ. ಹಾಲಿ ಸಂಸದರ ಹೆಸರೇ ಮೊದಲ ಪಟ್ಟಿಯಲ್ಲಿ ಬಂದಿಲ್ಲ. ಮೊದಲನೇ ಪಟ್ಟಿ ಬಿಡುಗಡೆ ಮಾಡಿದರು, ನಂತರ ತಡೆಹಿಡಿದಿದ್ದಾರೆಂಬ ಸುದ್ದಿಯಿದೆ. ಇದರ ನಡುವೆ ಕಾಂಗ್ರೆಸ್ ಪಕ್ಷದಿಂದ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದೇವೆ. ಸಾಕಷ್ಟು ಹೊಸ ಮುಖಗಳಿಗೆ ಯುವಕರಿಗೆ ಅವಕಾಶ ಮಾಡಿಕೊಟ್ಟಿದ್ದೇವೆ. ಆದಷ್ಟು ಶೀಘ್ರವಾಗಿ ಎರಡನೇ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದರು.

ಆದಷ್ಟು ಒಳ್ಳೆಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಚುನಾವಣೆಗೆ ಇಳಿಸುವ ಪ್ರಯತ್ನ ಮಾಡುತ್ತಿದ್ದೇವೆ. ಬಿಜೆಪಿ ಒಳಗಡೆನೇ ಗೊಂದಲವಿದೆ. ರಾಜ್ಯ ಅಧ್ಯಕ್ಷರಾಗಿದ್ದ ನಳಿನ್ ಕುಮಾರ್ ಕಟೀಲ್ ಹಾಲಿ ಸಂಸದರಾಗಿದ್ದರು. ಸೀಟು ಘೋಷಣೆ ಆಗಿಲ್ಲ ಅವರೇ ಮುಂದಿನ ಅಭ್ಯರ್ಥಿಯೇ ಎಂದು ಗೊತ್ತಿಲ್ಲ. ಬೇರೆಯವರು ಅಭ್ಯರ್ಥಿ ಎಂಬ ಚರ್ಚೆ ನಡೆಯುತ್ತಿದೆ. ರಾಜ್ಯದಲ್ಲಿ ಇರುವ ಸಂಸದರಲ್ಲಿ ಒಬ್ಬರ ಹೆಸರು ಘೋಷಣೆ ಆಗಿಲ್ಲ. ಹಾಲಿ ಸಂಸದರ ಮೇಲೆ ಒಂದು ಪ್ರಶ್ನಾರ್ಥಕ ಗುರುತು ಇಟ್ಟಿದ್ದಾರೆ ಎಂದರು.

ಬಿಜೆಪಿಯಲ್ಲಿ ಬೇರೆಯವರು ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿ ಗೊಂದಲ ಸಾಲದಕ್ಕೆ ಜೆಡಿಎಸ್​ನವರು ಬಿಜೆಪಿ ಸಂಸದರು ಇರುವ ಕಡೆ ಸೀಟು ನಮ್ಮದೆಂದು ಹೇಳುತ್ತಿದ್ದಾರೆ. ಕೋಲಾರದಲ್ಲಿ ಬಿಜೆಪಿ ಎಂಪಿ ಇದ್ದರೂ ದಳವದವರು ಇದು ನಮ್ಮದೇ ಸೀಟು ಅಂತಿದ್ದಾರೆ. ದಳ ವರ್ಸಸ್ ಬಿಜೆಪಿ ನಡೆಯುತ್ತಿದೆ. ಮಂಡ್ಯದಲ್ಲಿ ಸುಮಲತಾ ಬಿಜೆಪಿ ಸೇರಿದ್ದಾರೆ. ಸುಮಲತಾ ಅವರು ನಂಗೆ ಟಿಕೇಟ್ ಆಗುತ್ತೆ ಅಂತಾ ಚುನಾವಣಾ ಪ್ರಚಾರ ಶುರು ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರದಲ್ಲಿ ಡಿ.ಕೆ.ಸುರೇಶ್ ವಿರುದ್ಧ ದಳದವರು ಸ್ಪರ್ಧಿಸಲು ತಯಾರಿಲ್ಲ, ಬಿಜೆಪಿಯವರೂ ತಯಾರಿಲ್ಲ. ಎಲ್ಲರೂ ಪಲಾಯನ ವಾದ ಮಾಡುತ್ತಿದ್ದಾರೆ ಎಂದರು.

ಅವರ ಮೇಲೆ ಇವರು ಇವರ ಮೇಲೆ ಅವರು ಬೆರಳು ತೋರಿಸಿ ಗೊಂದಲ ಸೃಷ್ಟಿಸಿದ್ದಾರೆ. ದಳ ಬಿಜೆಪಿ ಸೇರಿ 27 ಸಂಸದರಿದ್ದಾರೆ. ಸಂಸದರು ಇಪ್ಪತ್ತೇಳು ಆದರೆ ಇವರದ್ದು ಬರೀ ಹೋಳು. ಈ ಗೊಂದಲಗಳಿಂದ ಜನರ ವಿಶ್ವಾಸ ಇನ್ನಷ್ಟು ಕಡಿಮೆಯಾಗುತ್ತಿದೆ. 27 ಜನ ಇದ್ದರೂ ಒಬ್ಬರು ಕೂಡ ಕರ್ನಾಟಕದ ಪರವಾಗಿ ಧ್ವನಿ ಎತ್ತಿಲ್ಲ. ಇಂತಹ ಸಂಸದರನ್ನು ಇಟ್ಟುಕೊಂಡು ರಾಜ್ಯಕ್ಕೆ ಅನ್ಯಾಯ ಹೊರತು ಲಾಭವಿಲ್ಲ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:44 pm, Sat, 9 March 24

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್