ಮಂಗಳೂರು ಅಕ್ಟೋಬರ್ 9: ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ (Kukke Subrahmanya Temple) ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ದಂಪತಿ (Former Prime Minister HD Deve Gowda couple) ಸಮೇತ ಇಂದು ಸೋಮವಾರ ಭೇಟಿ ನೀಡಿದ್ದು, ನಾಗಪ್ರತಿಷ್ಠೆ, ತುಲಾಭಾರ, ಮಹಾಪೂಜೆ (Nagapratisthe, Tulabharas) ನೆರವೇರಿಸಿದರು. ಪತ್ನಿ ಚೆನ್ನಮ್ಮ ಜೊತೆಯಾಗಿ ಪೂಜಾ ಕಾರ್ಯಗಳಲ್ಲಿ ಭಾಗಿಯಾದರು. ಹೆಚ್.ಡಿ.ದೇವೇಗೌಡ ದಂಪತಿ ಬೆಳಿಗ್ಗೆ ಆಶ್ಲೇಷ ಪೂಜೆ ನೆರವೇರಿಸಿದರು. ಬಳಿಕ ಸಂಪುಟ ನರಸಿಂಹ ದೇವರ ದರ್ಶನ ಪಡೆದರು.
ಬಳಿಕ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತನಾಡಿದ ದೇವೇಗೌಡರು ಲೋಕಸಭೆ ಚುನಾವಣೆಯಲ್ಲಿ (Lok Sabha Elections 2024) ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ವಿಚಾರವನ್ನು ಪ್ರಸ್ತಾಪಿಸಿದರು. ಈಗಾಗಲೇ ಅಮಿತ್ ಶಾ ಜೊತೆ ಕುಮಾರಸ್ವಾಮಿ ಚರ್ಚೆ ಮಾಡಿದ್ದಾರೆ. ಲೋಕಸಭಾ ಕ್ಷೇತ್ರಗಳ ಸೀಟು ಹಂಚಿಕೆ ಬಗ್ಗೆ ಚರ್ಚೆ ಇನ್ನೂ ನಡೆಯಬೇಕಷ್ಟೇ. ದಸರಾ ಬಳಿಕ ಸೀಟು ಹಂಚಿಕೆ ಚರ್ಚೆ ನಡೆಯಲಿದೆ.
Also Read: ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ದಂಪತಿ ಭೇಟಿ -ನಾಗಪ್ರತಿಷ್ಠೆ, ತುಲಾಭಾರ
ಅಮಿತ್ ಶಾ ಜೊತೆ ಕುಮಾರಸ್ವಾಮಿ ಮತ್ತೆ ಚರ್ಚೆ ಮಾಡಲಿದ್ದಾರೆ. ಮೈತ್ರಿ ಚರ್ಚೆಗೂ ಮುನ್ನ ಶಾಸಕರು, ಇಬ್ರಾಹಿಂ ಜೊತೆ ಮಾತುಕತೆ ನಡೆಸುತ್ತೇವೆ. ಆ ನಂತರ ಹೆಚ್.ಡಿ.ಕುಮಾರಸ್ವಾಮಿ ಅವರು ಅಮಿತ್ ಶಾರನ್ನು ಭೇಟಿ ಮಾಡಲಿದ್ದಾರೆ. ಮಂಡ್ಯ ಸೇರಿದಂತೆ ಯಾವುದೇ ಕ್ಷೇತ್ರಗಳ ಬಗ್ಗೆ ತೀರ್ಮಾನ ಆಗಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು (Congress) ಎಲ್ಲ 28 ಕ್ಷೇತ್ರಗಳನ್ನೂ ಗೆಲ್ಲುವ ಉತ್ಸಾಹದಲ್ಲಿದ್ದಾರೆ. ಆ ಕಾರಣಕ್ಕೆ ಮೈತ್ರಿ (Alliance) ನಿರ್ಧಾರಕ್ಕೆ ಬಂದಿದ್ದೇವೆ ಎಂದು ಕುಕ್ಕೆಸುಬ್ರಹ್ಮಣ್ಯದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದರು.
ಅಧಿವೇಶನ ಕಳೆದು ನನ್ನ ಆರೋಗ್ಯ ಸುಧಾರಿಸಿದರೆ ನಾನು ಅಥವಾ ಕುಮಾರಸ್ವಾಮಿ ಮತ್ತೆ ಗೃಹಮಂತ್ರಿಗಳ ಜೊತೆ ಚರ್ಚೆ ನಡೆಸಲಿದ್ದೇವೆ. ಮೈತ್ರಿಗೆ ಮೊದಲು ಜೆಡಿಎಸ್ ನ 19 MLA, 8 MLC ಗಳು, ಪಕ್ಷದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಜೊತೆ ಎರಡು ಸುತ್ತು ಮಾತುಕತೆ ನಡೆಸಲಾಗಿದೆ. ಅದು ನಡೆದ ಬಳಿಕ ಕುಮಾರಸ್ವಾಮಿ ಗೃಹ ಮಂತ್ರಿಗಳ ಭೇಟಿ ಮಾಡಿದ್ದಾರೆ. ಹಿಂದಿನ ಚುನಾವಣೆಯ ಮತ ಗಳಿಕೆ ಒಟ್ಟುಗೂಡಿಸಿ ಒಂದು ನಿರ್ಧಾರಕ್ಕೆ ಬರಲಾಗಿದೆ. ಆದರೆ ಯಾವ ಯಾವ ಕ್ಷೇತ್ರ ಅನ್ನೋ ಬಗ್ಗೆ ಇನ್ನೂ ಫೈನಲ್ ಆಗಿಲ್ಲ. ಮಂಡ್ಯ ಸೇರಿದಂತೆ ಯಾವುದೇ ತೀರ್ಮಾನ ಆಗಿಲ್ಲ. ಸದ್ಯ ಹಾಸನ ಜೆಡಿಎಸ್, ರಾಮನಗರ ಕಾಂಗ್ರೆಸ್ ಕೈಯಲ್ಲಿದೆ, ಉಳಿದೆಡೆ ಬಿಜೆಪಿನೇ ಇದೆ. ಕಾಂಗ್ರೆಸ್ 28 ಗೆಲ್ಲುವ ಉತ್ಸಾಹದಲ್ಲಿದ್ದಾರೆ. ಆ ಕಾರಣಕ್ಕೆ ಬಿಜೆಪಿ, ಜೆಡಿಎಸ್ ಒಂದುಗೂಡಿ ಹೋಗುವ ನಿರ್ಧಾರಕ್ಕೆ ಬಂದಿದ್ದೇವೆ ಎಂದು ಗೌಡರು ಸ್ಪಷ್ಟಪಡಿಸಿದರು.’
ಜಾತಿ ಆಧಾರದಲ್ಲಿ ಮತ ವಿಭಜನೆಯ ಬಗ್ಗೆ ನಾನು ಈಗ ವಾದ ಮಾಡಲ್ಲ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶೇಕಡಾವಾರು ಮತ ಬಿಜೆಪಿಗೆ 30-33 ,ಕಾಂಗ್ರೆಸ್ 40, ಜೆಡಿಎಸ್ 20,22 ಸಿಕ್ಕಿದೆ. ಈ ಬಾರಿಗೆ ಯಾರಿಗೆ ಓಟ್ ಮಾಡಬೇಕು ಅನ್ನೋದನ್ನ ಮತದಾರ ತೀರ್ಮಾನ ಮಾಡ್ತಾನೆ. ಕೇಂದ್ರದಲ್ಲಿ ಎನ್ ಡಿಎ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ ಬರೋ ವಿಚಾರ ಬಗ್ಗೆ ಹೆಚ್ಚೇನೂ ನಾನು ಚರ್ಚೆ ಮಾಡಲು ಹೋಗಲ್ಲ. ನಾನು ಇರೋದು ಬೆಂಗಳೂರಿನಲ್ಲಿ, ಯಾರನ್ನೂ ಭೇಟಿಯೂ ಆಗಿಲ್ಲ. ಎನ್ ಡಿಎ, ಯುಪಿಎ ಬಗ್ಗೆ, ಯಾರ ಬಗ್ಗೆಯೂ ಹೆಚ್ಚು ತಲೆಕೊಡಿಸಿಕೊಳ್ಳಲು ಹೋಗಲ್ಲ. ‘ಐ ಆಮ್ 91 ಕ್ಷಮಿಸಿ’ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದರು.
ಮತ್ತಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:48 pm, Mon, 9 October 23