ಮಂಗಳೂರು: ಪುತ್ತೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಿಂದೂ ಸಂಘಟನೆ ಕಾರ್ಯಕರ್ತನಿಂದ ಹಲ್ಲೆ

Mangaluru news: ಚುನಾವಣೆಗೂ ಮೊದಲೇ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿ ಅಶೋಕ್ ರೈ ಅವರನ್ನು ಬೆಂಬಲಿಸಿದ್ದ ಕಾರ್ಯಕರ್ತನ ಮೇಲೆ ಹಿಂದೂ ಸಂಘಟನೆ ಕಾರ್ಯಕರ್ತನೊಬ್ಬ ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿದೆ.

ಮಂಗಳೂರು: ಪುತ್ತೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಿಂದೂ ಸಂಘಟನೆ ಕಾರ್ಯಕರ್ತನಿಂದ ಹಲ್ಲೆ
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಿಂದೂ ಸಂಘಟನೆ ಕಾರ್ಯಕರ್ತನಿಂದ ಹಲ್ಲೆ ಆರೋಪ

Updated on: Jun 20, 2023 | 9:49 PM

ಮಂಗಳೂರು: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿ ಮನೆಗೆ ನುಗ್ಗಿ ಜೀವ ಬೆದರಿಕೆಯೊಡ್ಡಿರುವ ಆರೋಪ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು (Puttur) ತಾಲೂಕಿನಲ್ಲಿ ಕೇಳಿಬಂದಿದೆ. ಚುನಾವಣೆಗೂ ಮೊದಲೇ ಬಿಜೆಪಿ (BJP) ಬಿಟ್ಟು ಕಾಂಗ್ರೆಸ್ ಸೇರಿ ಅಶೋಕ್ ರೈ (Ashok Rai) ಅವರನ್ನು ಬೆಂಬಲಿಸಿದ್ದ ಕಾರ್ಯಕರ್ತನ ಮೇಲೆ ಹಿಂದೂ ಸಂಘಟನೆ ಕಾರ್ಯಕರ್ತನೊಬ್ಬ ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿದೆ.

ನರಿಮೊಗರು ನಿವಾಸಿ ಪ್ರವೀಣ್ ಆಚಾರ್ಯ ಎಂಬಾತ ಚುನಾವಣೆಗೂ ಮೊದಲೇ ಬಿಜೆಪಿ ತೊರೆದು ಕಾಂಗ್ರೆಸ್ ಬೆಂಬಲಿಸಿದ್ದನು. ಅಲ್ಲದೆ, ಬಿಜೆಪಿ ತೊರೆದ ಕಾಂಗ್ರೆಸ್ ಸೇರಿದ ಅಶೋಕ್ ರೈ ಪರ ಪ್ರಚಾರ ನಡೆಸಿದ್ದನು. ಆದರೆ ಇಂದು ಪುತ್ತೂರು ತಾಲೂಕಿನ ಪುರುಷಕಟ್ಟೆಯಲ್ಲಿ ಪ್ರವೀಣ್ ಆಚಾರ್ಯನ ಮೇಲೆ ಹಿಂದೂ ಸಂಘಟನೆ ಕಾರ್ಯಕರ್ತ ಪ್ರವೀಣ್ ಎಂಬಾತ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಹಲ್ಲೆಗೀಡಾದ ಪ್ರವೀಣ್​ಗೆ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:49 pm, Tue, 20 June 23