ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಹೆಚ್ಚಾದ ಮದ್ರಾಸ್ ಐ; ಕಾಂಜಂಕ್ಟಿವಿಟಿಸ್ ಬಗ್ಗೆ ಎಚ್ಚರಿಕೆ ವಹಿಸಲು ಸೂಚನೆ

Conjunctivitis Increasing in Dakshina Kannada; ಮದ್ರಾಸ್ ಐ ಸೋಂಕಿನಿಂದ ಬಳಲುತ್ತಿರುವವರು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಶುದ್ಧ ಕರವಸ್ತ್ರ ಬಳಸಿ ಕಣ್ಣಿರನ್ನು ಸ್ವಚ್ಛಗೊಳಿಸುತ್ತಿರಬೇಕು. ಆ ಕರವಸ್ತ್ರವನ್ನು ಬೇರೆಯವರು ಬಳಸಬಾರದು. ಕಿರಿಕಿರಿ ಉಂಟಾದಾಗ, ಕಣ್ಣನ್ನು ಉಜ್ಜುವುದನ್ನು ತಪ್ಪಿಸಬೇಕು. ಉಜ್ಜುವುದರಿಂದ ಕಣ್ಣುಗಳು ಬಾತುಕೊಳ್ಳುವ ಸಾಧ್ಯತೆ ಇದೆ ಎಂದು ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಹೆಚ್ಚಾದ ಮದ್ರಾಸ್ ಐ; ಕಾಂಜಂಕ್ಟಿವಿಟಿಸ್ ಬಗ್ಗೆ ಎಚ್ಚರಿಕೆ ವಹಿಸಲು ಸೂಚನೆ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Aug 17, 2023 | 8:01 PM

ಮಂಗಳೂರು, ಆಗಸ್ಟ್ 17: ಕಾಂಜಂಕ್ಟಿವಿಟಿಸ್ ಅಥವಾ ಮದ್ರಾಸ್ ಐ (Conjunctivitis) ಪ್ರಕರಣಗಳು ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ದಿಢೀರ್ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ (DHO) ಡಾ. ಕಿಶೋರ್ ಕುಮಾರ್ ಸೂಚಿಸಿದ್ದಾರೆ. ಯಾವುದೇ ರೋಗಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ವೈದ್ಯಕೀಯ ಸಲಹೆಯನ್ನು ಪಡೆಯುವಂತೆ ಸಾರ್ವಜನಿಕರಿಗೆ ಸೂಚಿಸಿದ್ದಾರೆ. ಜಿಲ್ಲೆಯಲ್ಲಿ 504 ಕಾಂಜಂಕ್ಟಿವಿಟಿಸ್ ಪ್ರಕರಣಗಳು ಈವರೆಗೆ ವರದಿಯಾಗಿದೆ. ಕೆಲವರು ಚೇತರಿಸಿಕೊಂಡಿದ್ದಾರೆ ಎಂದು ಕಿಶೋರ್ ಕುಮಾರ್ ಅವರು ಸ್ಥಳೀಯ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

ಕಾಂಜಂಕ್ಟಿವಿಟಿಸ್ ಅಥವಾ ಮದ್ರಾಸ್ ಐ ಎಂಬುದು ವೈರಸ್ ಮೂಲಕ ಹರಡುತ್ತದೆ. ಸೋಂಕು ತಗುಲಿದವರ ಕಣ್ಣುಗಳು ಕೆಂಪು ಬಣ್ಣಕ್ಕೆ ತಿರುಗುತ್ತವೆ ಮತ್ತು ಕಣ್ಣಿನಲ್ಲಿ ಕಿರಿಕಿರಿ ಅನುಭವವಾಗುತ್ತದೆ. ಜತೆಗೆ ನೀರು ಸೋರುತ್ತಿರುತ್ತದೆ. ಕಾಂಜಂಕ್ಟಿವಿಟಿಸ್‌ನಿಂದ ಕಣ್ಣಿನಲ್ಲಿ ನೋವು ಹೆಚ್ಚಾದರೆ, ಕುತ್ತಿಗೆ ಮತ್ತು ತಲೆ ನೋವೂ ಅನುಭವಕ್ಕೆ ಬರುತ್ತದೆ ಎಂದು ಅವರು ತಿಳಿಸಿದ್ದಾರೆ.

ಮದ್ರಾಸ್ ಐ ಸೋಂಕಿನಿಂದ ಬಳಲುತ್ತಿರುವವರು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಶುದ್ಧ ಕರವಸ್ತ್ರ ಬಳಸಿ ಕಣ್ಣಿರನ್ನು ಸ್ವಚ್ಛಗೊಳಿಸುತ್ತಿರಬೇಕು. ಆ ಕರವಸ್ತ್ರವನ್ನು ಬೇರೆಯವರು ಬಳಸಬಾರದು. ಕಿರಿಕಿರಿ ಉಂಟಾದಾಗ, ಕಣ್ಣನ್ನು ಉಜ್ಜುವುದನ್ನು ತಪ್ಪಿಸಬೇಕು. ಉಜ್ಜುವುದರಿಂದ ಕಣ್ಣುಗಳು ಬಾತುಕೊಳ್ಳುವ ಸಾಧ್ಯತೆ ಇದೆ ಎಂದು ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

ಕಪ್ಪು ಕನ್ನಡಕವನ್ನು ಧರಿಸುವುದು ಉತ್ತಮ. ಇದು ಪ್ರಕಾಶಮಾನವಾದ ಪರಿಸರದಲ್ಲಿ ಅಸ್ವಸ್ಥತೆಯಿಂದ ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಮಗು ಅಥವಾ ವಿದ್ಯಾರ್ಥಿಗಳು ಕಾಂಜಂಕ್ಟಿವಿಟಿಸ್​ನಿಂದ ಬಳಲುತ್ತಿದ್ದರೆ, 2 ದಿನಗಳ ಕಾಲ ಮನೆಯಲ್ಲಿ ವಿಶ್ರಾಂತಿ ಪಡೆಯುವುದು ಉತ್ತಮ. ವೃತ್ತಿಪರರೂ ಮನೆಯಲ್ಲೇ ಇರುವುದು ಉತ್ತಮ ಎಂದು ಕಿಶೋರ್ ಕುಮಾರ್ ಹೇಳಿದ್ದಾರೆ.

ಸೋಂಕು ಒಂದು ವಾರ ಅಥವಾ ಅದಕ್ಕಿಂತ ಹೆಚ್ಚು ಕಾಲ ಇದ್ದರೆ, ಕಾರ್ನಿಯಾದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ. ಆದ್ದರಿಂದ, ಕಿರಿಕಿರಿ ಉಂಟಾದರೆ ನಾವು ಕಣ್ಣುಗಳನ್ನು ಉಜ್ಜುವುದನ್ನು ತಪ್ಪಿಸಬೇಕು. ಚಿಕಿತ್ಸೆಯು ಎಲ್ಲಾ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಭ್ಯವಿದೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೆ ವೈದ್ಯರನ್ನು ಸಂಪರ್ಕಿಸಬಹುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Madras eye in Kalaburagi: ಕಲಬುರಗಿ ಜನರಿಗೆ ಮದ್ರಾಸ್ ಐ ಕಾಟ; ಸೋಂಕು ತಡೆಗೆ ವೈದ್ಯರ ಸಲಹೆಯೇನು?

ಕಾಂಜಂಕ್ಟಿವಿಟಿಸ್ ಬಗ್ಗೆ ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಮೂಡಿಸುವಂತೆ ಡಿಡಿಪಿಐಗೆ ಸೂಚಿಸಿದ್ದೇವೆ. ಹಾಗಾಗಿ ಎಲ್ಲರೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಉತ್ತಮ ಎಂದು ಆರೋಗ್ಯಾಧಿಕಾರಿ ಸಲಹೆ ನೀಡಿದ್ದಾರೆ.

ರಾಜ್ಯದೆಲ್ಲೆಡೆ ಮದ್ರಾಸ್ ಐ ಪ್ರಕರಣಗಳು ಹೆಚ್ಚಾಗಿದ್ದು, ಜುಲೈ 25 ಮತ್ತು ಆಗಸ್ಟ್ 4 ರ ನಡುವೆ ಕೇವಲ ಒಂದು ವಾರದಲ್ಲಿ ರಾಜ್ಯದಾದ್ಯಂತ 40,477 ಪ್ರಕರಣಗಳು ಪತ್ತೆಯಾಗಿದ್ದವು. ನಂತರದ ದಿನಗಳಲ್ಲಿ ಕೂಡ ಸಾವಿರಾರು ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿದ್ದವು. ಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕ ಬಾಗದ ಜನರಲ್ಲಿ ಕೂಡ ಸೋಂಕು ವ್ಯಾಪಕವಾಗಿ ಹರಡುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ