ಮಂಗಳೂರಿನಲ್ಲಿ ರೈಲು ಹಳಿ ತಪ್ಪಿಸುವ ಯತ್ನ, ಹಳಿ ಮೇಲೆ ಜಲ್ಲಿ ಕಲ್ಲು ಸುರಿದಿರುವ ಆಗಂತುಕರು

ಇತ್ತೀಚಿನ ದಿನಗಳಲ್ಲಿ ರೈಲು ಹಳಿ ತಪ್ಪಿಸುವ ಯತ್ನಗಳು ಹೆಚ್ಚಾಗುತ್ತಿವೆ. ಅದೃಷ್ಟವಶಾತ್ ಲೊಕೊಪೈಲಟ್​ಗಳ ಸಮಯ ಪ್ರಜ್ಞೆಯಿಂದ ಅನಾಹುತಗಳು ತಪ್ಪಿವೆ. ಇದೀಗ ಮಂಗಳೂರಿನಲ್ಲಿ ಇದೇ ಮಾದರಿಯ ಘಟನೆಯೊಂದು ನಡೆದಿದೆ, ಮಂಗಳೂರಿನಿಂದ ಕೇರಳಕ್ಕೆ ಹೋಗುವ ಮಾರ್ಗದಲ್ಲಿ ಉಳ್ಳಾಲದ ಬಳಿ ರೈಲ್ವೆ ಹಳಿ ಮೇಲೆ ಆಗಂತುಕರು ಜಲ್ಲಿ ಕಲ್ಲುಗಳನ್ನು ಸುರಿದಿರುವ ಕುರಿತು ಮಾಹಿತಿ ಲಭ್ಯವಾಗಿದೆ.

ಮಂಗಳೂರಿನಲ್ಲಿ ರೈಲು ಹಳಿ ತಪ್ಪಿಸುವ ಯತ್ನ, ಹಳಿ ಮೇಲೆ ಜಲ್ಲಿ ಕಲ್ಲು ಸುರಿದಿರುವ ಆಗಂತುಕರು
ರೈಲು-ಸಾಂದರ್ಭಿಕ ಚಿತ್ರImage Credit source: Trayaan
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: ನಯನಾ ರಾಜೀವ್

Updated on: Oct 20, 2024 | 10:42 AM

ಇತ್ತೀಚಿನ ದಿನಗಳಲ್ಲಿ ರೈಲು ಹಳಿ ತಪ್ಪಿಸುವ ಯತ್ನಗಳು ಹೆಚ್ಚಾಗುತ್ತಿವೆ. ಅದೃಷ್ಟವಶಾತ್ ಲೊಕೊಪೈಲಟ್​ಗಳ ಸಮಯ ಪ್ರಜ್ಞೆಯಿಂದ ಅನಾಹುತಗಳು ತಪ್ಪಿವೆ. ಇದೀಗ ಮಂಗಳೂರಿನಲ್ಲಿ ಇದೇ ಮಾದರಿಯ ಘಟನೆಯೊಂದು ನಡೆದಿದೆ, ಮಂಗಳೂರಿನಿಂದ ಕೇರಳಕ್ಕೆ ಹೋಗುವ ಮಾರ್ಗದಲ್ಲಿ ಉಳ್ಳಾಲದ ಬಳಿ ರೈಲ್ವೆ ಹಳಿ ಮೇಲೆ ಆಗಂತುಕರು ಜಲ್ಲಿ ಕಲ್ಲುಗಳನ್ನು ಸುರಿದಿರುವ ಕುರಿತು ಮಾಹಿತಿ ಲಭ್ಯವಾಗಿದೆ.

ರೈಲುಗಳು ಚಲಿಸುವ ಸಂದರ್ಭದಲ್ಲಿ ದೊಡ್ಡ ಸದ್ದು ಕೇಳಿ ಸ್ಥಳೀಯರಿಗೆ ಆತಂಕ ಉಂಟಾಗಿತ್ತು. ತಡರಾತ್ರಿ ಸುಮಾರಿಗೆ ತೊಕ್ಕೊಟ್ಟುವಿನ ರೈಲ್ವೇ ಹಳಿಯಲ್ಲಿ ಘಟನೆ ನಡೆದಿದೆ. ರೈಲೊಂದು ಕೇರಳ ಕಡೆಗೆ ತೆರಳಿದ ವೇಳೆ ದೊಡ್ಡ ಶಬ್ದ ಕೇಳಿಸಿತ್ತು, ಬಳಿಕ ಇನ್ನೊಂದು ರೈಲು ಚಲಿಸುವಾಗ ಮತ್ತೊಮ್ಮೆ ದೊಡ್ಡ ಸದ್ದು ಕೇಳಿತ್ತು. ಕೆಲವು ಮಂದಿ ಭೂಕಂಪವಾಗಿರಬಹುದು ಎಂದುಕೊಂಡಿದ್ದರು.

ಬಳಿಕ ರೈಲ್ವೆ ಹಳಿ ಕಡೆಯಿಂದ ಶಬ್ದ ಕೇಳಿದ್ದರಿಂದ ಆ ಕಡೆಗೆ ಸ್ಥಳೀಯರು ಬಂದು ಪರಿಶೀಲನೆ ನಡೆಸಿದ್ದಾರೆ, ಆಗ ಹಳಿ ಮೇಲೆ ಜಲ್ಲಿಕಲ್ಲುಗಳನ್ನು ಸುರಿದಿರುವುದು ಕಂಡುಬಂದಿದೆ. ರೈಲ್ವೇ ಪೊಲೀಸ್ ಠಾಣೆ ಮತ್ತು ಉಳ್ಳಾಲ ಪೊಲೀಸ್ ಠಾಣೆಗೆ ಸ್ಥಳೀಯರ ಮಾಹಿತಿ ನೀಡಲಾಗಿದೆ.

ಇತ್ತೀಚೆಗಷ್ಟೇ ಉಗ್ರ ಸಂಘಟನೆ ಎಚ್ಚರಿಕೆ ಬೆನ್ನಲ್ಲೇ ಮತ್ತಷ್ಟು ಹೆಚ್ಚಾದ ಆತಂಕ ಹೆಚ್ಚಾಗಿದೆ, ಪಾಕ್‌ ಭಯೋತ್ಪಾದಕ ಫ‌ರ್ಹಾತುಲ್ಲಾ ಘೋರಿ ಭಾರತದಾದ್ಯಂತ ರೈಲುಗಳನ್ನು ಹಳಿ ತಪ್ಪಿಸುವ ಎಚ್ಚರಿಕೆ ನೀಡಿದ್ದ, ದೇಶದ ಹಲವೆಡೆ ಎನ್.ಐ.ಎ ಮತ್ತು ಭಯೋತ್ಪಾದಕ ನಿಗ್ರಹ ದಳದ ಮೂಲಕ ತನಿಖೆ ನಡೆಯುತ್ತಿದೆ.

ಮತ್ತಷ್ಟು ಓದಿ: ಪಂಜಾಬ್​ನಲ್ಲಿ ರೈಲು ಹಳಿ ತಪ್ಪಿಸುವ ಯತ್ನ, ರೈಲ್ವೆ ಹಳಿಯಲ್ಲಿತ್ತು ಕಬ್ಬಿಣದ ಸರಳುಗಳು

ರೈಲು ಹಳಿ ತಪ್ಪಿಸುವ ಮತ್ತೊಂದು ಯತ್ನ, ರೈಲ್ವೆ ಹಳಿಯಲ್ಲಿ ಸಿಲಿಂಡರ್ ಪತ್ತೆ ಉತ್ತರಾಖಂಡದಲ್ಲಿ ದುಷ್ಕರ್ಮಿಗಳು ರೈಲು ಹಳಿ ತಪ್ಪಿಸುವ ಯತ್ನ ಮಾಡಿದ್ದರು. ರೂರ್ಕಿಯ ಧನೇರಾ ರೈಲು ನಿಲ್ದಾಣದ ಬಳಿಯ ರೈಲ್ವೆ ಹಳಿಯಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಪತ್ತೆಯಾಗಿದೆ. ಗ್ಯಾಸ್ ಸಿಲಿಂಡರ್ ಪತ್ತೆಯಾದ ಸ್ಥಳವು ಬಂಗಾಳ ಇಂಜಿನಿಯರಿಂಗ್ ಗ್ರೂಪ್ ಮತ್ತು ಸೆಂಟರ್‌ನ ಪ್ರಧಾನ ಕಚೇರಿಗೆ ಸಮೀಪದಲ್ಲಿರುವ ಕಾರಣ ಸೂಕ್ಷ್ಮ ಪ್ರದೇಶವಾಗಿದೆ. ಸೇನಾ ವಾಹನಗಳು ಮತ್ತು ಸಿಬ್ಬಂದಿಯನ್ನು ಸರಕು ರೈಲುಗಳ ಮೂಲಕ ವಿವಿಧ ಪೋಸ್ಟ್‌ಗಳಿಗೆ ಸಾಗಿಸುವುದು ಸೇರಿದಂತೆ ಈ ಪ್ರದೇಶವನ್ನು ಮಿಲಿಟರಿಯವರು ಹೆಚ್ಚಾಗಿ ಬಳಕೆ ಮಾಡುತ್ತಾರೆ.

ಹಳಿಗಳ ಮೇಲೆ ಸಿಲಿಂಡರ್ ಪತ್ತೆಯಾಗಿರುವುದು ಪರಿಸ್ಥಿತಿಯ ಗಂಭೀರತೆಯನ್ನು ಹೆಚ್ಚಿಸಿದೆ. ಸಿಲಿಂಡರ್​ ಕಂಡ ಕೂಡಲೇ ಲೋಕೊ ಪೈಲಟ್​ ಬ್ರೇಕ್​ ಹಾಕಿ ರೈಲು ನಿಲ್ಲಿಸಿದ್ದಾರೆ. ಘಟನೆಯನ್ನು ರೈಲ್ವೆ ಅಧಿಕಾರಿಗಳಿಗೆ ತಿಳಿಸಿದ್ದು, ಕೂಡಲೇ ಸ್ಥಳಕ್ಕೆ ಆಗಮಿಸಿದ ಅವರು ಸಿಲಿಂಡರ್ ತೆಗೆದಿದ್ದಾರೆ.

ರೈಲ್ವೆ ಹಳಿ ಮೇಲೆ ಕಿಡಿಗೇಡಿಗಳು ಇರಿಸಿದ್ದ ಸಿಮೆಂಟ್ ಮೈಲಿಗಲ್ಲಿಗೆ ಗುದ್ದಿದ ರೈಲು ರಾಜಸ್ಥಾನದ ಅಜ್ಮೀರ್​ನಿಂದ ಅಹಮದಾಬಾದ್​ಗೆ ಹೋಗುವ ಮಾರ್ಗದಲ್ಲಿ ರೈಲಿನ ಹಳಿ ತಪ್ಪಿಸುವ ಪ್ರಯತ್ನ ನಡೆದಿತ್ತು. ರೈಲ್ವೆ ಹಳಿ ಮೇಲಿದ್ದ ಸಿಮೆಂಟ್​ ಮೈಲಿಗಲ್ಲಿಗೆ ಗೂಡ್ಸ್​ ರೈಲು ಡಿಕ್ಕಿ ಹೊಡೆದು ಹಳಿ ತಪ್ಪಿದೆ. ಕಾನ್ಪುರದಲ್ಲಿ ಭಾನುವಾರ ಕಾಳಿಂದಿ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನವನ್ನು ಕಿಡಿಗೇಡಿಗಳು ನಡೆಸಿದ್ದರು, ಹಳಿ ಮೇಲೆ ಸಿಲಿಂಡರ್, ಪೆಟ್ರೋಲ್​ ತುಂಬಿದ ಬಾಟಲಿಗಳು, ಗನ್​ ಪೌಡರ್ ಸೇರಿದಂತೆ ಅಪಾಯಕಾರಿ ವಸ್ತುಗಳನ್ನು ಇರಿಸಲಾಗಿತ್ತು.

ರೈಲು ಸಿಲಿಂಡರ್​ಗೆ ಡಿಕ್ಕಿ ಹೊಡೆದ ಪರಿಣಾಮ ಅದು ಸ್ಫೋಟಗೊಂಡಿತ್ತು, ಆದರೆ ರೈಲಿಗಾಗಲಿ ಅಥವಾ ಪ್ರಯಾಣಿಕರಿಗಾಗಲಿ ಯಾವುದೇ ರೀತಿಯ ಸಮಸ್ಯೆಯಾಗಿರಲಿಲ್ಲ. ಲೊಕೊ ಪೈಲಟ್ ತುರ್ತು ಬ್ರೇಕ್ ಹಾಕಿದ್ದರಿಂದ ರೈಲು ಹಳಿಯಲ್ಲಿ ಅಡಚಣೆ ಉಂಟಾದ ಕಾರಣ ತಕ್ಷಣ ರೈಲ್ವೆ ಸಂರಕ್ಷಣಾ ಪಡೆ (ಆರ್‌ಪಿಎಫ್) ಗೆ ಎಚ್ಚರಿಕೆ ನೀಡಿ ಸಂಪೂರ್ಣ ತಪಾಸಣೆ ನಡೆಸಿದ ನಂತರ ದೊಡ್ಡ ರೈಲು ಅಪಘಾತವನ್ನು ತಪ್ಪಿಸಲಾಯಿತು.

ದಕ್ಷಿಣ ಕನ್ನಡದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ