Corona Cases: ಕೇರಳದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳ: ದಕ್ಷಿಣ ಕನ್ನಡ ಜಿಲ್ಲೆ ಗಡಿಯಲ್ಲಿ ಕಟ್ಟುನಿಟ್ಟಿನ ತಪಾಸಣೆ

Mangaluru News: ದಕ್ಷಿಣ ಕನ್ನಡ ಜಿಲ್ಲೆಯ ಗಡಿಯಲ್ಲಿ ಕಟ್ಟುನಿಟ್ಟಿನ ಕೊವಿಡ್-19 ತಪಾಸಣೆ ನಡೆಸಲಾಗುವುದು. ಜನ ಪರಿಸ್ಥಿತಿ ಅರ್ಥ ಮಾಡಿಕೊಂಡು ಕೊವಿಡ್ ನಿಯಮ ಪಾಲಿಸಬೇಕು ಎಂದು ಟಿವಿ9ಗೆ ಮಂಗಳೂರು ಪೊಲೀಸ್ ಕಮಿಷನರ್ ಎನ್​. ಶಶಿಕುಮಾರ್ ಹೇಳಿದ್ದಾರೆ.

Corona Cases: ಕೇರಳದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳ: ದಕ್ಷಿಣ ಕನ್ನಡ ಜಿಲ್ಲೆ ಗಡಿಯಲ್ಲಿ ಕಟ್ಟುನಿಟ್ಟಿನ ತಪಾಸಣೆ
ಸಾಂಕೇತಿಕ ಚಿತ್ರ
Follow us
TV9 Web
| Updated By: ganapathi bhat

Updated on: Jul 30, 2021 | 3:02 PM

ಮಂಗಳೂರು: ಕೇರಳದಲ್ಲಿ ಭಾರಿ ಪ್ರಮಾಣದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಗಡಿಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸುವ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಗಡಿಯಲ್ಲಿ ಕಟ್ಟುನಿಟ್ಟಿನ ತಪಾಸಣೆ ಮಾಡಲಾಗುವುದು ಎಂದು ಮಂಗಳೂರು- ಕೇರಳ ಗಡಿ ತಲಪಾಡಿಯಲ್ಲಿ ಟಿವಿ9ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಹೇಳಿಕೆ ನೀಡಿದ್ದಾರೆ.

ಬಸ್​​ನಲ್ಲಿ ಬರುವವರಿಗೆ 15 ದಿನಕ್ಕೊಮ್ಮೆ ನೆಗೆಟಿವ್​ ವರದಿ ಕಡ್ಡಾಯ. ಅದನ್ನು ಒಂದು ವಾರಕ್ಕೆ ಇಳಿಸುವ ಚಿಂತನೆ ಇದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಈಗ ಮೊದಲ ಡೋಸ್​ ಲಸಿಕೆ ಪಡೆದಿದ್ದರೆ ಭೇಟಿಗೆ ಅವಕಾಶವಿದೆ. ಈ ವಿಚಾರದಲ್ಲೂ ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಡಾ. ಕೆ.ವಿ. ರಾಜೇಂದ್ರ ಮಾಹಿತಿ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಗಡಿಯಲ್ಲಿ ಕಟ್ಟುನಿಟ್ಟಿನ ಕೊವಿಡ್-19 ತಪಾಸಣೆ ನಡೆಸಲಾಗುವುದು. ಜನ ಪರಿಸ್ಥಿತಿ ಅರ್ಥ ಮಾಡಿಕೊಂಡು ಕೊವಿಡ್ ನಿಯಮ ಪಾಲಿಸಬೇಕು ಎಂದು ಟಿವಿ9ಗೆ ಮಂಗಳೂರು ಪೊಲೀಸ್ ಕಮಿಷನರ್ ಎನ್​. ಶಶಿಕುಮಾರ್ ಹೇಳಿದ್ದಾರೆ. ಇಲ್ಲವಾದರೆ ಮತ್ತೆ ಲಾಕ್​ಡೌನ್ ಪರಿಸ್ಥಿತಿ ಎದುರಿಸಬೇಕಾಗುತ್ತೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ಹಿನ್ನಲೆಯಲ್ಲಿ ಅವರು ಗಡಿಭಾಗಗಳಿಗೆ ಭೇಟಿ ನೀಡಿದ್ದಾರೆ. ಸರ್ಕಾರದ ಆದೇಶದಂತೆ ನಾನು ಮತ್ತು ಜಿಲ್ಲಾಧಿಕಾರಿಗಳು ಗಡಿ ಭೇಟಿ ಮಾಡಿದ್ದೇವೆ. ಜನರೆ ಅರ್ಥ ಮಾಡಿಕೊಂಡು ಕೋವಿಡ್ ನಿಯಮ ಪಾಲಿಸಬೇಕು. ಕೋವಿಡ್ ನಿಯಾಮಾವಳಿ ಪಾಲಿಸದೇ ಇದ್ರೆ ಮತ್ತೆ ಲಾಕ್ ಡೌನ್ ನಂತಹ ಪರಿಸ್ಥಿತಿ ಎದುರಿಸಬೇಕಾಗುತ್ತದೆ.

ಇದನ್ನೂ ಓದಿ: ಕೇರಳ ಆಯ್ತು, ಈಗ ಕರ್ನಾಟಕ ತಮಿಳುನಾಡಿನಲ್ಲಿ ಹೆಚ್ಚಾದ ಕೊರೊನಾ ಪ್ರಕರಣಗಳು; ದಕ್ಷಿಣ ಕನ್ನಡಕ್ಕೆ ಆತಂಕ

ಕೊರೊನಾ ಇನ್ನೂ ಹೆಚ್ಚಾಗಲಿದೆ: ಕೋಲಾರದಲ್ಲಿ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ ಡಾ. ಶಿವಾನಂದ ಶಿವಯೋಗಿ

(Corona Cases spike in Kerala Border areas of Karnaraka Kerala to undergo strict Covid19 measures)

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು