ಬಕ್ರಿದ್ ಕುರ್ಬಾನಿ ಹೆಸರಿನಲ್ಲಿ ಗೋವುಗಳ ಮಾರಣ ಹೋಮ; ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಬಜರಂಗದಳ ಮನವಿ

ಕುರ್ಬಾನಿಗೆ ತಯಾರಿ ನಡೆಯುತ್ತಿರುವ ಬಗ್ಗೆ ಮಾಹಿತಿ ಬರುತ್ತಿದೆ. ರಾಜ್ಯ ಸರ್ಕಾರ ಜಿಲ್ಲಾಡಳಿತ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಜರಂಗ ದಳ ಮನವಿ ಮಾಡಿದೆ.

ಬಕ್ರಿದ್ ಕುರ್ಬಾನಿ ಹೆಸರಿನಲ್ಲಿ ಗೋವುಗಳ ಮಾರಣ ಹೋಮ; ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಬಜರಂಗದಳ ಮನವಿ
ಸಾಂದರ್ಭಿಕ ಚಿತ್ರ
Follow us
ಆಯೇಷಾ ಬಾನು
|

Updated on: Jun 26, 2023 | 3:17 PM

ಮಂಗಳೂರು: ಮುಸ್ಲಿಮರ ಪವಿತ್ರ ಹಬ್ಬ ಬಕ್ರಿದ್​ಗೆ(Bakrid) ಕೆಲವೇ ದಿನಗಳು ಬಾಕಿ ಇವೆ. ಈ ವರ್ಷ ಜೂನ್ 29ರಂದು ಬಕ್ರೀದ್ ಆಚರಿಸಲಾಗುತ್ತಿದ್ದು ಮುಸ್ಲಿಮರು ಭರ್ಜರಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಕುರಿಗಳ ಮಾರಾಟ ಹೆಚ್ಚಾಗಿದೆ. ಇನ್ನು ಬಕ್ರಿದ್ ಹಿನ್ನೆಲೆ ಕುರ್ಬಾನಿ ಹೆಸರಿನಲ್ಲಿ ಸಾವಿರಾರು ಗೋವುಗಳ ಮಾರಣ ಹೋಮ ಆಗುವ ಸಾಧ್ಯತೆ ಇದೆ ಎಂದು ಬಜರಂಗದಳ(Bajrang Dal) ಆತಂಕ ವ್ಯಕ್ತಪಡಿಸಿದೆ.

ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಂಚಾಲಕ ಸುನೀಲ್ ಕೆ.ಆರ್, ಗೋವಂಶ ಹತ್ಯೆಯ ಬಗ್ಗೆ ಆತಂಕ ಹೊರ ಹಾಕಿದ್ದಾರೆ. ಕುರ್ಬಾನಿಗೆ ತಯಾರಿ ನಡೆಯುತ್ತಿರುವ ಬಗ್ಗೆ ಮಾಹಿತಿ ಬರುತ್ತಿದೆ. ರಾಜ್ಯ ಸರ್ಕಾರ ಜಿಲ್ಲಾಡಳಿತ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಅಕ್ರಮ ಗೋಸಾಗಾಣಿಕೆ, ಗೋವುಗಳ ಬಲಿಯನ್ನು ತಡೆಯಬೇಕು. ಇಂದಿನಿಂದ ಜೂನ್ 30 ರವರೆಗೆ ಚೆಕ್ ಪೋಸ್ಟ್ ತೆರೆಯಬೇಕು. ಗೋಸಾಗಾಟ ತಡೆಯಲು ವಿಶೇಷ ಪೊಲೀಸ್ ತಂಡ ರಚಿಸಬೇಕು ಎಂದು ಬಜರಂಗದಳ ಪ್ರಾಂತ ಸಂಚಾಲಕ ಸುನೀಲ್ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗದಲ್ಲಿ 2 ಕೋಮಿನ ಯುವಕರ ನಡುವೆ ಗಲಾಟೆ ಆಗಿದ್ಯಾಕೆ? ಕಾರಣ ಬಿಚ್ಚಿಟ್ಟ ಎಸ್​ಪಿ

ಜಾನುವಾರು ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಾಲಾಡಿ ಕುದ್ರುಬೆಟ್ಟುವಿನಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತರಿಂದ ಮೂರು ಹಸುಗಳನ್ನು ವಶಕ್ಕೆ ಪಡೆಯಲಾಗಿದೆ. ಕರಿಕಲ್ಕಟ್ಟೆಯ ಚಂದ್ರ ಶೆಟ್ಟಿ (55), ಗುಡ್ಡೆಯಂಗಡಿ ನಿವಾಸಿ ಅಣ್ಣಪ್ಪ (65) ಬಂಧಿತ ಅರೋಪಿಗಳು. ಶಂಕರನಾರಾಯಣ ಪೊಲೀಸ್ ಠಾಣೆ ಪಿಎಸ್​ಐ ನಾಸೀರ್ ಹುಸೇನ್ ಖಚಿತ ಮಾಹಿತಿಯೊಂದಿಗೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಿಸಿಕೊಂಡು ಕುಂದಾಪುರ ಕಡೆಗೆ ಸಾಗುತ್ತಿದ್ದರು ಎಂಬ ಮಾಹಿತಿ ಸಿಕ್ಕಿದ್ದು ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ