ನಂಜನಗೂಡು ಯುವತಿಗೆ ಪ್ರೀತಿ ಹೆಸರಲ್ಲಿ ವಂಚನೆ; ಮಂಗಳೂರು ನಿವಾಸಿ ಮೊಹಮ್ಮದ್ ಅಜ್ವಾನ್ ಬಂಧನ

Crime News: ಮಂಗಳೂರಿನ ಮಹಿಳಾ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಯುವತಿ, ಆರೋಪಿ ಮನೆ ಹುಡುಕಿಕೊಂಡು ಮಂಗಳೂರಿಗೆ ಬಂದಿದ್ದರು. ಈ ವೇಳೆ ಅಜ್ವಾನ್ ಕುಟುಂಬಸ್ಥರು ಹಲ್ಲೆ ನಡೆಸಿದ ಆರೋಪ ಕೂಡ ಕೇಳಿಬಂದಿತ್ತು.

ನಂಜನಗೂಡು ಯುವತಿಗೆ ಪ್ರೀತಿ ಹೆಸರಲ್ಲಿ ವಂಚನೆ; ಮಂಗಳೂರು ನಿವಾಸಿ ಮೊಹಮ್ಮದ್ ಅಜ್ವಾನ್ ಬಂಧನ
ಮಂಗಳೂರು ನಿವಾಸಿ ಮೊಹಮ್ಮದ್ ಅಜ್ವಾನ್ ಬಂಧನ
Follow us
TV9 Web
| Updated By: ganapathi bhat

Updated on: Sep 23, 2021 | 9:06 PM

ಮಂಗಳೂರು: ಪ್ರೀತಿ ಹೆಸರಿನಲ್ಲಿ ನಂಜನಗೂಡು ಮೂಲದ ಯುವತಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಲ್ಲಿ ಆರೋಪಿ ಯುವಕನನ್ನ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಪೊಲೀಸರು ಮೊಹಮ್ಮದ್ ಅಜ್ವಾನ್‌ ಎಂಬಾತನನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಮಂಗಳೂರಿನ ಮುಡಿಪು ನಿವಾಸಿ ಮೊಹಮ್ಮದ್ ಅಜ್ವಾನ್ ಬಂಧನವಾಗಿದೆ. ಪ್ರೀತಿಯ ನಾಟಕವಾಡಿ ಅನ್ಯಕೋಮಿನ ಯುವಕನಿಂದ ವಂಚನೆ ನಡೆಸಿದ್ದ. ಯುವತಿಯ ನಗ್ನ ಫೋಟೋ ವೈರಲ್ ಮಾಡುವ ಬೆದರಿಕೆ ಒಡ್ಡಿದ್ದ. ಬೆದರಿಕೆ ಹಾಕಿ 35 ಲಕ್ಷ ರೂಪಾಯಿ ಪಡೆದಿರುವ ಆರೋಪವನ್ನು ಕೂಡ ಆತ ಎದುರಿಸುತ್ತಿದ್ದ. ಈ ಬಗ್ಗೆ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಯುವತಿ, ಆರೋಪಿ ಮನೆ ಹುಡುಕಿಕೊಂಡು ಮಂಗಳೂರಿಗೆ ಬಂದಿದ್ದರು. ಈ ವೇಳೆ ಅಜ್ವಾನ್ ಕುಟುಂಬಸ್ಥರು ಹಲ್ಲೆ ನಡೆಸಿದ ಆರೋಪ ಕೂಡ ಕೇಳಿಬಂದಿತ್ತು.

ಪರಿಷತ್ ಕಲಾಪದಲ್ಲಿ ಮಂಗಳೂರು ಪೊಲೀಸರ ಮೇಲೆ ತೇಜಸ್ವಿನಿ ಆರೋಪ ವ್ಯಕ್ತಪಡಿಸಿದ್ದರು. ಈ ವಿಚಾರಕ್ಕೆ ಸಂಬಂಧಿಸಿ ಎಮ್.ಎಲ್.ಸಿ ತೇಜಸ್ವಿನಿ ಆರೋಪಕ್ಕೆ ಮಂಗಳೂರು ಪೊಲೀಸರು ಟಕ್ಕರ್ ನೀಡಿದ್ದಾರೆ. ಸಂತ್ರಸ್ತ ಮಹಿಳೆಯಿಂದ ದೂರು ಸ್ವೀಕರಿಸಿಲ್ಲ ಎಂದು ಆರೋಪ ಕೇಳಿತ್ತು. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಘಟನೆ‌ ಬಗ್ಗೆ ಆರೋಪ ಕೇಳಿಬಂದಿತ್ತು.

ಸೆಪ್ಟೆಂಬರ್ 21 ರಂದು ಮೈಸೂರು ಮೂಲದ ಯುವತಿ ಮಂಗಳೂರಿಗೆ ಬಂದಿದ್ದರು. ಮೈಸೂರಿ‌ನಲ್ಲಿ ಮಂಗಳೂರು ಯುವಕನಿಂದ ಲವ್, ಸೆಕ್ಸ್ ದೋಖಾ ಬಗ್ಗೆ ಪ್ರಶ್ನಿಸಲು ಮಂಗಳೂರಿನ ಕೋಣಾಜೆಗೆ ಬಂದಿದ್ದರು. ಈ ವೇಳೆ ಪೊಲೀಸರು ದೂರು ಪಡೆದಿಲ್ಲ ಎಂದು ಆರೋಪ ಕೇಳಿತ್ತು. ದೂರು ನೀಡೋಕೆ ಬಂದಾಕೆಯನ್ನು ಬಸ್ ಹತ್ತಿಸಿ ವಾಪಾಸ್ ಮೈಸೂರಿಗೆ ಕಳುಹಿಸಿದ್ದಾರೆ ಎಂದು ತೇಜಸ್ವಿನಿ ಆರೋಪ ಮಾಡಿದ್ದರು.

ಈ ಪ್ರಕರಣದಲ್ಲಿ ಪೊಲೀಸರಿಂದ ಯಾವುದೇ ಲೋಪ ಆಗಿಲ್ಲ ಎಂದು ಟಿವಿ9ಗೆ ಮಂಗಳೂರು ಪೊಲೀಸ್ ಆಯುಕ್ತ ಎನ್‌. ಶಶಿಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಯುವತಿ ತನಗೆ ಮೋಸ ಆಗಿದೆ ಎಂದು ಮಂಗಳೂರಿನ ಯುವಕನ ಮನೆಗೆ ಬಂದಿದ್ದಾಳೆ‌. ಈ ವೇಳೆ ಯುವಕನ ಮನೆಯಲ್ಲಿ ಯುವತಿಗೆ ಕಪಾಳಮೋಕ್ಷ ಮಾಡಿ ಮನೆಯಿಂದ ಹೊರ ಕಳುಹಿಸಿದ್ದಾರೆ. ಆಗ ಆಕೆ ಕೋಣಾಜೆ ಬಸ್ ಸ್ಟಾಂಡ್​ಗೆ ಬಂದು ಅಳುತ್ತಾ ಕುಳಿತಿದ್ದಾಳೆ‌. ಆಗ ಸಾರ್ವಜನಿಕರು 112 ಗೆ ಕರೆ ಮಾಡಿದ್ದಾರೆ. ಪೊಲೀಸರೇ ಬಸ್ ಸ್ಟಾಂಡ್​ಗೆ ಹೋಗಿ ಮಹಿಳೆಯ ಕಷ್ಟ ಕೇಳಿದ್ದಾರೆ. ಬಳಿಕ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ವಿಚಾರಿಸಿದ್ದಾರೆ ಎಂದು ಘಟನೆಯನ್ನು ತಿಳಿಸಿದ್ದಾರೆ.

ದೂರನ್ನು ಇಲ್ಲಿ ಕೂಡ ಕೊಡಬಹುದು ಅಂತಾ ಹೇಳಿದ್ದಾರೆ‌. ಆದ್ರೆ ಮೈಸೂರಿನಲ್ಲೆ ಮೋಸ ಆಗಿರೋದು ಅಲ್ಲೇ ದೂರು ಕೊಡುತ್ತೇನೆ ಯುವತಿ ಹೇಳಿದ್ದಾರೆ. ಬಳಿಕ ಪೊಲೀಸ್ ಇಲಾಖೆ ವಾಹನದಲ್ಲಿ ಕರೆದುಕೊಂಡು ಹೋಗಿ ಬಸ್ ಹತ್ತಿಸಿದ್ದಾರೆ. ಬಸ್ ಚಾಲಕ ಮತ್ತು ನಿರ್ವಾಹಕರಿಗೂ ಜೋಪಾನವಾಗಿ ಕರೆದುಕೊಂಡು ಹೋಗಲು ಹೇಳಿದ್ದಾರೆ‌. ಆದ್ರೆ ಬಸ್​ನಲ್ಲಿ ಇರುವಾಗ ಅವರ ಅಡ್ವೋಕೇಟ್ ಇಲ್ಲೇ ದೂರು ನೀಡಲು ಹೇಳಿದ್ದಾರೆ‌. ಬಳಿಕ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ‌. ನಾವು ಅವತ್ತೆ ಪ್ರಕರಣ ದಾಖಲು ಮಾಡಿಕೊಂಡಿದ್ದೇವೆ ಎಂದು ಶಶಿಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಿಯಕರನ ಹತ್ಯೆ ಕೇಸ್: ಪ್ರಿಯತಮೆ ಸೇರಿ ನಾಲ್ವರ ಬಂಧನ ಪುತ್ರಿಯರ ಜತೆ ಅಸಭ್ಯವಾಗಿ ವರ್ತಿಸುತ್ತಿದ್ದ ಪ್ರಿಯಕರನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರಿಯತಮೆ ಸೇರಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಠಾಣೆ ಪೊಲೀಸರಿಂದ ಆರೋಪಿಗಳ ಬಂಧನ ಮಾಡಲಾಗಿದೆ. ಶ್ವೇತಾ (35), ಡೇವಿಡ್ (31), ಶ್ರೀಕಾಂತ್ (28), ದಿನೇಶ (28) ಸೆರೆ ಸಿಕ್ಕಿದ್ದಾರೆ. ಸೆಪ್ಟೆಂಬರ್ 5 ರಂದು ಹೆಗ್ಗನಹಳ್ಳಿಯ ಕಿರಣ್ ಕುಮಾರ್ (26)ಗೆ ಚಾಕು ಇರಿತ ಮಾಡಲಾಗಿತ್ತು. ಸೆಪ್ಟೆಂಬರ್ 6 ರಂದು ಚಿಕಿತ್ಸೆ ಫಲಿಸದೆ ಕಿರಣ್ ಕುಮಾರ್​ ಮೃತಪಟ್ಟಿದ್ದ.

ಹೆತ್ತ ತಾಯಿಯನ್ನೇ ಹತ್ಯೆಗೈದ ಮಗ ಮಚ್ಚಿನಿಂದ ಕೊಚ್ಚಿ ಮಗನೊಬ್ಬ ಹೆತ್ತ ತಾಯಿಯನ್ನೇ ಹತ್ಯೆಗೈದ ಅಮಾನುಷ ಘಟನೆ ಚಿಕ್ಕಮಗಳೂರು ನಗರದ ಗೌರಿ ಕಾಲುವೆಯಲ್ಲಿ ನಡೆದಿದೆ. ಪುತ್ರ ದುಶ್ಯಂತ್ ತಾಯಿ ಸುಧಾ (48) ಹತ್ಯೆಗೈದಿದ್ದಾನೆ. ಪೊಲೀಸರು ಆರೋಪಿ ದುಶ್ಯಂತ್​ ವಶಕ್ಕೆ ಪಡೆದಿದ್ದಾರೆ. ಒಮ್ಮೊಮ್ಮೆ ದುಶ್ಯಂತ್ ಮಾನಸಿಕ ಅಸ್ವಸ್ಥನಂತೆ ವರ್ತಿಸ್ತಿದ್ದ ಎಂದು ತಿಳಿದುಬಂದಿದೆ. ಬಸವನಹಳ್ಳಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಜಾರ್ಖಂಡ ಜಡ್ಜ್​ ಹತ್ಯೆ ಪ್ರಕರಣ; ಉದ್ದೇಶ ಪೂರ್ವಕವಾಗಿಯೇ ಅಪಘಾತ ಮಾಡಲಾಗಿದೆ ಎಂದ ಸಿಬಿಐ

ಇದನ್ನೂ ಓದಿ: ಬೆಂಗಳೂರು: ಸ್ಫೋಟ ಸಂಭವಿಸಲು ರೀಲ್ ಪಟಾಕಿಯೇ ಕಾರಣ; ಪ್ರಾಥಮಿಕ ವಿವರಗಳು ಲಭ್ಯ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್