Crime News: ತೊಕ್ಕೊಟ್ಟು ಸಮೀಪದ ಬಾವಿಯಲ್ಲಿ 36 ವರ್ಷದ ವ್ಯಕ್ತಿಯ ಶವ ಪತ್ತೆ

ಉಳ್ಳಾಲ ತಾಲೂಕಿನ ತೊಕ್ಕೊಟ್ಟು ಸಮೀಪದ ಬಾವಿಯಲ್ಲಿ 36 ವರ್ಷದ ವ್ಯಕ್ತಿಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮೃತರನ್ನು ಎಎಸ್ ಮಹಾಂತೇಶ್ ಎಂದು ಗುರುತಿಸಲಾಗಿದೆ. ಹಾಸನ ಜಿಲ್ಲೆಯ ಅರಸೀಕೆರೆಯವರಾದ ಇವರು ಬೆಂಗಳೂರಿನಲ್ಲಿ ನೆಲೆಸಿದ್ದರು.

Crime News: ತೊಕ್ಕೊಟ್ಟು ಸಮೀಪದ ಬಾವಿಯಲ್ಲಿ 36 ವರ್ಷದ ವ್ಯಕ್ತಿಯ ಶವ ಪತ್ತೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Dec 05, 2022 | 1:45 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ತೊಕ್ಕೊಟ್ಟು ಸಮೀಪದ ಬಾವಿಯಲ್ಲಿ 36 ವರ್ಷದ ವ್ಯಕ್ತಿಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮೃತರನ್ನು ಎಎಸ್ ಮಹಾಂತೇಶ್ ಎಂದು ಗುರುತಿಸಲಾಗಿದೆ. ಹಾಸನ ಜಿಲ್ಲೆಯ ಅರಸೀಕೆರೆಯವರಾದ ಇವರು ಬೆಂಗಳೂರಿನಲ್ಲಿ ನೆಲೆಸಿದ್ದರು. ಅವರು ನವೆಂಬರ್ 30ರಂದು ಬೆಂಗಳೂರಿನಿಂದ ತೊಕ್ಕೊಟ್ಟಿಗೆ ಪ್ರಯಾಣ ಬೆಳೆಸಿದ್ದರು ಮತ್ತು ಎನ್‌ಹೆಚ್ 66 ರ ಪಕ್ಕದಲ್ಲಿರುವ ಕಾಪಿಕಾಡ್‌ನಲ್ಲಿರುವ ಲಾಡ್ಜ್‌ನಲ್ಲಿ ತಂಗಿದ್ದಾರೆ. ಅದೇ ರಾತ್ರಿ ಅವರು ಲಾಡ್ಜ್‌ನಿಂದ ಹೊರಗೆ ಹೋಗಿದ್ದಾರೆ ಆದರೆ ಹಿಂತಿರುಗಲಿಲ್ಲ ಎಂದು ಹೇಳಿದ್ದಾರೆ.

ಡಿಸೆಂಬರ್ 1ರಂದು ಸಂಜೆ ಚೆಕ್ ಔಟ್ ಡೇಟ್ ಆಗಿದ್ದರಿಂದ ರೂಮ್ ಬಾಯ್ ಮಹಾಂತೇಶ್ ಕೊಠಡಿಯ ಬಾಗಿಲು ತಟ್ಟಿದ್ದಾನೆ. ಯಾವುದೇ ಪ್ರತಿಕ್ರಿಯೆ ಬಾರದ ಕಾರಣ ಹೊಟೇಲ್ ಬಾಯ್ ಕೊಠಡಿ ತೆರೆದು ನೋಡಿದ್ದರೆ ಆದರೆ ಒಳಗೆ ಯಾರು ಇರಲಿಲ್ಲ. ಲಾಡ್ಜ್ ಅಧಿಕಾರಿಗಳು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನು ಓದಿ: ದಕ್ಷಿಣ ಕನ್ನಡ: ಬೈಕ್​ಗೆ ಲಾರಿ ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ಸಾವು; ಮಕ್ಕಳಿಗೆ ಗಾಯ

ಬೆಂಗಳೂರು ಮೂಲದ ವ್ಯಕ್ತಿಯ ಸಹೋದರಿ ಈ ಹಿಂದೆ ಪೊಲೀಸರಿಗೆ ನಾಪತ್ತೆ ದೂರು ನೀಡಿದ್ದರು. ಇದೇ ವೇಳೆ ಸಮೀಪದ ಮನೆಯ ಹಿಂದಿನ ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಬಾವಿಯೊಳಗೆ ಇಣುಕಿ ನೋಡಿದಾಗ ಮನೆಕೆಲಸದಾಕೆ ಶವವನ್ನು ಪತ್ತೆ ಹಚ್ಚಿದ್ದು, ಬಳಿಕ ಅದು ಮಹಾಂತೇಶ ಅವರದ್ದು ಎಂದು ಗುರುತಿಸಲಾಗಿದೆ.

ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹವನ್ನು ಬಾವಿಯಿಂದ ಹೊರತೆಗೆದಿದ್ದಾರೆ. ಸಾವಿಗೆ ಕಾರಣ ತಿಳಿದು ಬಂದಿಲ್ಲ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ ಎಂದು ಪಿಟಿಐ ಹೇಳಿದೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:45 pm, Mon, 5 December 22