ಮಂಗಳೂರು: ಭಿನ್ನ ಕೋಮಿನ ಜೋಡಿಯ ಮೇಲೆ ಹಲ್ಲೆಗೆ ಯತ್ನ; ನೈತಿಕ ಪೊಲೀಸ್​ಗಿರಿ ಆರೋಪದಡಿ ಇಬ್ಬರ ಬಂಧನ

ಮಂಗಳೂರು: ಭಿನ್ನ ಕೋಮಿನ ಜೋಡಿಯ ಮೇಲೆ ಹಲ್ಲೆಗೆ ಯತ್ನ; ನೈತಿಕ ಪೊಲೀಸ್​ಗಿರಿ ಆರೋಪದಡಿ ಇಬ್ಬರ ಬಂಧನ
ಭಿನ್ನ ಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದ ಹಿಂದೂ ಕಾರ್ಯಕರ್ತರು

ನೈತಿಕ ಪೊಲೀಸ್ ಗಿರಿ ಆರೋಪದ ಹಿನ್ನೆಲೆ ಇಬ್ಬರು ಹಿಂದೂ ಸಂಘಟನೆ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಈ ಹಿನ್ನೆಲೆ, ಬಿಜೆಪಿ ಸರ್ಕಾರದ ಹಿಂದೂ ವಿರೋಧಿ ಧೋರಣೆ ಎಂದು ಆರೋಪಿಸಿ ಶಾಸಕರ ಜೊತೆ ವಾಗ್ವಾದ ಕೂಡ ನಡೆಸಲಾಗಿದೆ.

TV9kannada Web Team

| Edited By: ganapathi bhat

Apr 06, 2022 | 9:15 AM

ಮಂಗಳೂರು: ನೈತಿಕ ಪೊಲೀಸ್ ಗಿರಿ ಆರೋಪದಡಿ ಉಪ್ಪಿನಂಗಡಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಉಪ್ಪಿನಂಗಡಿ ಪೊಲೀಸರಿಂದ ಬಾಲಚಂದ್ರ (35), ರಂಜಿತ್ (31) ಎಂಬ ಇಬ್ಬರನ್ನು ಸೆರೆ ಹಿಡಿಯಲಾಗಿದೆ. ಆಟೋದಲ್ಲಿ ಗುಂಡ್ಯಕ್ಕೆ ತೆರಳುತ್ತಿದ್ದ ಭಿನ್ನ ಕೋಮಿನ ವ್ಯಕ್ತಿಗಳನ್ನು ತಡೆದು ಹಿಂದೂ ಕಾರ್ಯಕರ್ತರಿಂದ ಹಲ್ಲೆಗೆ ಯತ್ನಿಸಲಾಗಿತ್ತು. ದ‌ಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಗುಂಡ್ಯದಲ್ಲಿ ಘಟನೆ ನಡೆದಿತ್ತು. ಹಲ್ಲೆ ಹಿನ್ನೆಲೆ ಆಟೋ ಚಾಲಕನಿಂದ ಠಾಣೆಗೆ ದೂರು ನೀಡಲಾಗಿದೆ. ಪ್ರಿಯತಮೆ‌ ಜತೆ ತೆರಳುವಾಗ ಹಲ್ಲೆ ಎಂದು ದೂರು ಕೊಡಲಾಗಿದೆ. ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ. ಈ ಹಿನ್ನೆಲೆ, ನೈತಿಕ ಪೊಲೀಸ್ ಗಿರಿ ಆರೋಪದಲ್ಲಿ ಇಬ್ಬರ ಬಂಧನ ಮಾಡಲಾಗಿದೆ. ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ನೈತಿಕ ಪೊಲೀಸ್ ಗಿರಿ ಆರೋಪದಡಿ ಹಿಂದೂ ಕಾರ್ಯಕರ್ತರ ಬಂಧನ ಹಿನ್ನೆಲೆ ಪುತ್ತೂರು ಶಾಸಕ ಸಂಜೀವ ಮಠಂದೂರು ವಿರುದ್ದ ಹಿಂದೂ ಕಾರ್ಯಕರ್ತರ ಆಕ್ರೋಶ ವ್ಯಕ್ತವಾಗಿದೆ. ಉಪ್ಪಿನಂಗಡಿ ಬಳಿ ಶಾಸಕ ಮಠಂದೂರು ತಡೆದು ಕಾರ್ಯಕರ್ತರು ವಾಗ್ವಾದ ನಡೆಸಿದ್ದಾರೆ. ಉಪ್ಪಿನಂಗಡಿ ಬಳಿ ಶಾಸಕ ಮಠಂದೂರು ತಡೆದು ಕಾರ್ಯಕರ್ತರು ಧಿಕ್ಕಾರ ಕೂಗಿದ್ದಾರೆ. ಕಾರ್ಯಕರ್ತರ ಪರ ನಿಲ್ಲದ ಹಿನ್ನೆಲೆ ಶಾಸಕರ ವಿರುದ್ದ ಅಸಮಾಧಾನ ಕೇಳಿಬಂದಿದೆ.

ಬಿಜೆಪಿ ಸರ್ಕಾರದ ಹಿಂದೂ ವಿರೋಧಿ ಧೋರಣೆ ಎಂದು ಆರೋಪಿಸಿ ವಾಗ್ವಾದ ನಡೆಸಲಾಗಿದೆ. ನೈತಿಕ ಪೊಲೀಸ್ ಗಿರಿ ಆರೋಪದ ಹಿನ್ನೆಲೆ ಇಬ್ಬರು ಹಿಂದೂ ಸಂಘಟನೆ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆ ಏನಾಗಿತ್ತು?

ಭಿನ್ನ ಕೋಮಿನ ಜೋಡಿಯನ್ನು ಹಿಂದೂ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಗುಂಡ್ಯ ಪ್ರದೇಶದಲ್ಲಿ ನಿನ್ನೆ (ಏಪ್ರಿಲ್ 5) ನಡೆದಿತ್ತು. ಆಟೋ ಚಾಲಕನ ಜತೆ ಗುಂಡ್ಯಕ್ಕೆ ಬಂದಿದ್ದ ಹಿಂದೂ ಸಮಾಜದ ಯುವತಿಯನ್ನು ಪೊಲೀಸರಿಗೆ ಒಪ್ಪಿಸಲಾಗಿತ್ತು. ರಸ್ತೆ ಬದಿ ಆಟೋ ನಿಲ್ಲಿಸಿ ಕಾಡು ದಾರಿಯಲ್ಲಿ ಹೋಗುತ್ತಿದ್ದರು ಎಂದು ಹೇಳಿ ಆರೋಪಿಸಲಾಗಿತ್ತು. ಮಾಹಿತಿ ಪಡೆದು ಜೋಡಿಯನ್ನು ತಡೆದಿದ್ದ ಹಿಂದೂ ಕಾರ್ಯಕರ್ತರು ಇಬ್ಬರನ್ನು ಪೊಲೀಸರಿಗೆ ಒಪ್ಪಿಸಿದ್ದರು.

ಅನ್ಯಕೋಮಿನ ಜೋಡಿಗೆ ಹಿಂದೂ ಕಾರ್ಯಕರ್ತರಿಂದ ಹಲ್ಲೆಗೆ ಯತ್ನಿಸಿದ್ದಾರೆ ಎಂಬ ಬಗ್ಗೆಯೂ ಮಾಹಿತಿ ಲಭ್ಯವಾಗಿತ್ತು. ಇಬ್ಬರನ್ನೂ ಕರೆತಂದ ಹಿಂದೂ ಕಾರ್ಯಕರ್ತರು ಅವರನ್ನು ಪೊಲೀಸರಿಗೆ ಒಪ್ಪಿಸಿದ್ದರು. ಪುತ್ತೂರು ಮೂಲದ ಅನ್ಯಕೋಮಿನ ಆಟೋ ಚಾಲಕನ ಜತೆ ವೇಣೂರಿನ ಹಿಂದೂ ಯುವತಿ ಬಂದಿದ್ದರು ಎಂಬ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು.

ಇದನ್ನೂ ಓದಿ: ಏಪ್ರಿಲ್ 13ರೊಳಗೆ ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗಿಸಲು ಗಡುವು ನೀಡಿದ ಹಿಂದೂ ಸಂಘಟನೆಗಳು

ಇದನ್ನೂ ಓದಿ: ಸೌಹಾರ್ದತೆಗೆ ಸಾಕ್ಷಿಯಾದ ಅಡ್ಡಪಲ್ಲಕ್ಕಿ ಉತ್ಸವ, ಜಾತಿ-ಮತ ಮರೆತು ಶ್ರೀಗಳ ದರ್ಶನ ಪಡೆದ ಮುಸ್ಲಿಂ ಮುಖಂಡರು!

Follow us on

Related Stories

Most Read Stories

Click on your DTH Provider to Add TV9 Kannada