AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಅಕ್ಕಿ ಇಲ್ಲವೆಂದು ಪೇಚಾಡುವ ಸರ್ಕಾರ; ತನ್ನದೇ ಗೋದಾಮಿನಿಂದ ಕೋಟ್ಯಾಂತರ ರೂ. ಅಕ್ಕಿ ಮಾಯ

ಅಕ್ಕಿ ಇಲ್ಲವೆಂದು ಪೇಚಾಡುವ ಸರ್ಕಾರಕ್ಕೆ ತನ್ನದೇ ಗೋದಾಮಿನಿಂದ ಅಕ್ಕಿ ಕಳುವುವಾಗುತ್ತಿರುವುದು ತಿಳಿದಿದೆಯೋ ಇಲ್ಲೋ. ಹೌದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಗೋದಾಮಿನಲ್ಲಿದ್ದ ಕೋಟ್ಯಾಂತರ ಮೌಲ್ಯದ ಪಡಿತರ ಅಕ್ಕಿ ನಾಪತ್ತೆಯಾಗಿದೆ.

ಮಂಗಳೂರು: ಅಕ್ಕಿ ಇಲ್ಲವೆಂದು ಪೇಚಾಡುವ ಸರ್ಕಾರ; ತನ್ನದೇ ಗೋದಾಮಿನಿಂದ ಕೋಟ್ಯಾಂತರ ರೂ. ಅಕ್ಕಿ ಮಾಯ
ಪಡಿತರ ಅಕ್ಕಿ ಗೌಡೌನ
ಅಶೋಕ್​ ಪೂಜಾರಿ
| Edited By: ವಿವೇಕ ಬಿರಾದಾರ|

Updated on: Aug 18, 2023 | 1:30 PM

Share

ಮಂಗಳೂರು: ರಾಜ್ಯದಲ್ಲಿ ಪಡಿತರ ಅಕ್ಕಿ (Rice) ವಿತರಣೆ ವಿಚಾರವಾಗಿ ಯುದ್ಧವೇ ನಡೆದಿದೆ. ಅನ್ನಭಾಗ್ಯ ಯೋಜನೆ (Anna Bhagya) ಅಡಿ ರಾಜ್ಯ ಸರ್ಕಾರ 10 ಕೇಜಿ ಅಕ್ಕಿ ನೀಡಲು ಘೋಷಿಸಿತ್ತು. ಈಗ ನೀಡುತ್ತಿರುವ ಐದು ಕೇಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ ಐದು ಕೇಜಿ ಅಕ್ಕಿ ನೀಡಲು ನಿರ್ಧರಿಸಿತ್ತು. ಆದರೆ ಇದು ಸಾಧ್ಯವಾಗದ ಹಿನ್ನೆಲೆಯಲ್ಲಿ ಅಕ್ಕಿಯ ಬದಲಾಗಿದೆ ಹಣ ನೀಡುತ್ತಿದೆ. ಒಂದು ಕಡೆ ಅಕ್ಕಿ ಇಲ್ಲವೆಂದು ಪೇಚಾಡುವ ಸರ್ಕಾರಕ್ಕೆ ತನ್ನದೇ ಗೋದಾಮಿನಿಂದ ಅಕ್ಕಿ ಕಳುವುವಾಗುತ್ತಿರುವುದು ತಿಳಿದಿದೆಯೋ ಇಲ್ಲೋ. ಹೌದು ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳದ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಗೋದಾಮಿನಲ್ಲಿದ್ದ ಕೋಟ್ಯಾಂತರ ಮೌಲ್ಯದ ಪಡಿತರ ಅಕ್ಕಿ ನಾಪತ್ತೆಯಾಗಿದೆ.

ಬರೊಬ್ಬರಿ 1.32 ಕೋಟಿ ಮೌಲ್ಯದ 3892 ಕ್ವಿಂಟಾಲ್ ಅಕ್ಕಿ ನಾಪತ್ತೆಯಾಗಿದ್ದು, ಫಿಸ್ಟ್ ತಂತ್ರಾಂಶದಲ್ಲಿ ದಾಸ್ತಾನು ಪರಿಶೀಲಿಸಿದಾಗ ಗೋಲ್ಮಾಲ್ ಪತ್ತೆಯಾಗಿದೆ. ಪಡಿತರ ಅಕ್ಕಿ ಅವ್ಯವಹಾರದ ಬಗ್ಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಮಂಗಳೂರು: ಸ್ವಾತಂತ್ರ್ಯೋತ್ಸವ ದಿನ ಮಕ್ಕಳಿಂದ ಸಾವರ್ಕರ್​​ಗೆ ಜೈಕಾರ; ಶಿಕ್ಷಕಿ ಕ್ಷಮೆ ಕೇಳುವಂತೆ ಪೋಷಕರ ಆಗ್ರಹ

ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಮಂಗಳೂರು ಕಚೇರಿ ವ್ಯವಸ್ಥಾಪಕ ಶರತ್ ಕುಮಾರ್ ಹೋಂಡಾ ಗೋದಾಮಿನ ನಿರ್ವಾಹಕ ವಿಜಯ್ ವಿರುದ್ಧ ದೂರು ನೀಡಿದ್ದಾರೆ. ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಅಶೋಕ್​ ಪೂಜಾರಿ
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More