Managaluru News: ಬಿಪೊರ್​ಜೊಯ್​​ ಚಂಡಮಾರುತ ಆರ್ಭಟ: ಸಮುದ್ರ ತೀರಗಳಿಗೆ ತೆರಳದಂತೆ ಹವಾಮಾನ ಇಲಾಖೆ ಸೂಚನೆ

ಅರಬ್ಬಿ ಸಮುದ್ರದಲ್ಲಿಬಿಪೊರ್​ಜೊಯ್​​ ಚಂಡಮಾರುತದ ಆರ್ಭಟ ತೀವ್ರ ಸ್ವರೂಪ ಪಡೆದ ಹಿನ್ನೆಲೆ ಪ್ರವಾಸಿಗರು ಮಂಗಳೂರಿನ ಸಮುದ್ರ ತೀರಗಳಿಗೆ ತೆರಳದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

Managaluru News: ಬಿಪೊರ್​ಜೊಯ್​​ ಚಂಡಮಾರುತ ಆರ್ಭಟ: ಸಮುದ್ರ ತೀರಗಳಿಗೆ ತೆರಳದಂತೆ ಹವಾಮಾನ ಇಲಾಖೆ ಸೂಚನೆ
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on: Jun 09, 2023 | 2:01 PM

ಮಂಗಳೂರು: ಅರಬ್ಬಿ ಸಮುದ್ರದಲ್ಲಿ (Arabian Sea) ಬಿಪೊರ್​ಜೊಯ್​​ ಚಂಡಮಾರುತದ (Biporjoy Cyclone) ಆರ್ಭಟ ತೀವ್ರ ಸ್ವರೂಪ ಪಡೆದ ಹಿನ್ನೆಲೆ ಪ್ರವಾಸಿಗರು ಮಂಗಳೂರಿನ ಸಮುದ್ರ ತೀರಗಳಿಗೆ ತೆರಳದಂತೆ ಹವಾಮಾನ ಇಲಾಖೆ (Meteorological Department) ಸೂಚನೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಕಡಲ ತೀರದಲ್ಲಿ ಭಾರೀ ವೇಗವಾಗಿ ಗಾಳಿ ಬೀಸುತ್ತಿದೆ. ಈ ಹಿನ್ನೆಲೆ ಪ್ರಾವಾಸಿಗರು ತೆರಳಬಾರದು ಎಂದು ಸೂಚನೆ ನೀಡಿದೆ. ಚಂಡಮಾರುತ ಭೀತಿ ಹಿನ್ನೆಲೆ ಸಮುದ್ರ ತೀರದ ಅಂಗಡಿಗಳನ್ನು ಮುಚ್ಚಲಾಗಿದೆ.

ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರಿ ಸಾಧ್ಯತೆ

ಚಂಡಮಾರುತದ ಆರ್ಭಟ ತೀವ್ರ ಸ್ವರೂಪ ಪಡೆದ ಹಿನ್ನೆಲೆ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗು ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 48 ಗಂಟೆಗಳಲ್ಲಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದೆ. ಈ ಹಿನ್ನೆಲೆ ಮುಂದಿನ 3-4 ದಿನಗಳಲ್ಲಿ ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮಳೆಯಾಗುವ ಸಂಭವ ಇದೆ.

ಇದನ್ನೂ ಓದಿ: Karnataka Rains: ಅರಬ್ಬಿ ಸಮುದ್ರದಲ್ಲಿ ಚಂಡಮಾರುತದ ಅಬ್ಬರ, ಕರ್ನಾಟಕದ ಕರಾವಳಿ ಭಾಗದಲ್ಲಿ 3 ದಿನ ಕಟ್ಟೆಚ್ಚರ, ಯೆಲ್ಲೋ ಅಲರ್ಟ್​​ ಘೋಷಣೆ

ಕರ್ನಾಟಕದ ಕರಾವಳಿ, ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾಗೇ ಗೋವಾ, ಕೇರಳ, ಲಕ್ಷ ದ್ವೀಪ, ತಮಿಳುನಾಡು, ಆಂಧ್ರಪ್ರದೇಶ, ರಾಜಸ್ಥಾನ, ಈಶಾನ್ಯ ರಾಜ್ಯಗಳಾದ ಅಸ್ಸಾಂ, ಮಿಜೋರಾಂ, ಮಣಿಪುರ, ಅರುಣಾಚಲಪ್ರದೇಶ, ಮೇಘಾಲಯದಲ್ಲೂ ಮಳೆಯಾಗು ಸಾಧ್ಯತೆ ಇದ್ದು ಕಟ್ಟೆಚ್ಚರ ವಹಿಸುವಂತೆ ರಾಜ್ಯಗಳಿಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಿಪೊರ್ ಜಾಯ್ ಚಂಡಮಾರುತ ಗಂಟೆಗೆ ಎರಡು ಕಿಲೋಮೀಟರ್ ವೇಗದಲ್ಲಿ ಚಲಿಸುತ್ತಿದ್ದು ಇದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ. ಕರಾವಳಿ ಬಿಸಿಲ ಧಗೆಗೆ ನಲುಗಿ ಹೋಗಿದ್ದು, ನೀರಿಗಾಗಿ ಜನರು ತತ್ತರಿಸುತ್ತಿದ್ದಾರೆ. ಎಲ್ಲೆಡೆ ನೀರಿಗಾಗಿ ಹಾಹಾಕಾರ ಕೇಳಿ ಬರುತ್ತಿದೆ. ಈ ನಡುವೆ ನಿನ್ನೆ (ಜೂ.09) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದು, ಕರಾವಳಿ ಜನರಲ್ಲಿ ಸಂತಸ ಮೂಡಿಸಿದೆ.

ಮುಂದಿನ ಮೂರು ದಿನಗಳಲ್ಲಿ ಚಂಡಮಾರುತವು ಉತ್ತರ-ವಾಯುವ್ಯ ದಿಕ್ಕಿನಲ್ಲಿ ಚಲಿಸಲಿದೆ ಎಂದು IMD ಹೇಳಿದೆ. ಮುಂದಿನ 48 ಗಂಟೆಗಳಲ್ಲಿ ಕೇರಳಕ್ಕೆ ಮಾನ್ಸೂನ್ ಆಗಮಿಸುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್