Mangaluru Rains: ಫೆಂಗಲ್ ಚಂಡಮಾರುತದ ಆರ್ಭಟ; ದಕ್ಷಿಣ ಕನ್ನಡ, ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

| Updated By: ಸುಷ್ಮಾ ಚಕ್ರೆ

Updated on: Dec 02, 2024 | 5:37 PM

Weather Forecast: ದಕ್ಷಿಣ ಭಾರತದ ರಾಜ್ಯಗಳಲ್ಲಿ ಫೆಂಗಲ್ ಚಂಡಮಾರುತದ ಆರ್ಭಟ ಜೋರಾಗಿದೆ. ಕರ್ನಾಟಕದಲ್ಲೂ ಈ ಚಂಡಮಾರುತ ಪರಿಣಾಮವಾಗಿ ಮಲೆನಾಡು, ಕರಾವಳಿ, ಬೆಂಗಳೂರು, ಚಿಕ್ಕಬಳ್ಳಾಪುರ, ಕೊಡಗು ಸೇರಿದಂತೆ ಹಲವೆಡೆ ಭಾರೀ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ನೆರೆಯ ರಾಜ್ಯವಾದ ಕೇರಳದಲ್ಲಿ ಚಂಡಮಾರುತದ ತೀವ್ರತೆ ಹೆಚ್ಚಾಗಿರುವುದರಿಂದ ಅದರ ಪರಿಣಾಮವಾಗಿ ಮಂಗಳೂರು-ಕಾಸರಗೋಡು ಗಡಿಭಾಗದಲ್ಲಿ ಮಳೆ ಹೆಚ್ಚಾಗಿದೆ.

Mangaluru Rains: ಫೆಂಗಲ್ ಚಂಡಮಾರುತದ ಆರ್ಭಟ; ದಕ್ಷಿಣ ಕನ್ನಡ, ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ
ಮಳೆ
Follow us on

ಮಂಗಳೂರು: ‘ಫೆಂಗಲ್’ ಚಂಡಮಾರುತದ ಆರ್ಭಟ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹೆಚ್ಚಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ‘ಫೆಂಗಲ್’ ಚಂಡಮಾರುತದಿಂದಾಗಿ ಕರ್ನಾಟಕ-ಕೇರಳ ಗಡಿಯಲ್ಲಿ ಭಾರೀ ಮಳೆಯಾಗುತ್ತಿದೆ. ಕುಂಬ್ಳೆ ಬಳಿ ರಸ್ತೆಯಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಮಂಗಳೂರಿನಲ್ಲಿ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ, ಸಮುದ್ರ ತೀರಗಳಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ಪ್ರಕೃತಿ ವಿಕೋಪ ಉಂಟಾದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಮಂಗಳೂರಿನ ಹೊರವಲಯ ತಲಪಾಡಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಮಧ್ಯಾಹ್ನದಿಂದ ಶುರುವಾದ ಮಳೆ ಇನ್ನೂ ನಿಂತಿಲ್ಲ. ಆಕಾಶದಲ್ಲಿ ಕಗ್ಗತ್ತಲು ಆವರಿಸಿದ್ದು, ಗುಡುಗು, ಮಿಂಚು, ಭಾರೀ ಗಾಳಿಯಿಂದ ಮನೆಯಿಂದ ಹೊರಗೆ ಬರಲೂ ಜನರು ಯೋಚಿಸುವಂತಾಗಿದೆ.

ಇದನ್ನೂ ಓದಿ: Viral: ಫೆಂಗಲ್‌ ಚಂಡಮಾರುತ; ಪ್ರವಾಹದ ನೀರಿನಲ್ಲಿ ಸಿಲುಕಿದ್ದ ನಾಯಿಯನ್ನು ರಕ್ಷಿಸಿ ಮಾನವೀಯತೆ ಮೆರೆದ ವ್ಯಕ್ತಿ 

ಹಾಗೇ, ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮೀನುಗಾರಿಕೆಗೆ ತೆರಳದಂತೆ ಮಂಗಳೂರಿನ ಮೀನುಗಾರರಿಗೆ ಸೂಚನೆ ನೀಡಲಾಗಿದೆ. ಡಿ. 6ರವರೆಗೆ ಯಾವುದೇ ರೀತಿಯ ಮೀನುಗಾರಿಕೆ ನಡೆಸದಂತೆ ದಕ್ಷಿಣ ಕನ್ನಡ ಜಿಲ್ಲಾ ಮೀನುಗಾರಿಕಾ ಇಲಾಖೆ ಜಂಟಿ ನಿರ್ದೇಶಕರು ಸೂಚನೆ ಹೊರಡಿಸಿದ್ದಾರೆ.

ಉಡುಪಿಯಲ್ಲೂ ಭಾರೀ ಮಳೆ:

ಬಂಗಾಳಕೊಲ್ಲಿಯಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ಹೆಚ್ಚಾಗಿರುವುದತಿಂದ ಉಡುಪಿ ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆರೆಂಜ್ ಅಲರ್ಟ್ ಮೂಲಕ ಧಾರಾಕಾರ ಮಳೆಯ ಮುನ್ಸೂಚನೆ ನೀಡಲಾಗಿದೆ. ನಾಳೆ ಬೆಳಗ್ಗೆಯಿಂದ ಉಡುಪಿಯಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಇಂದು ರಾತ್ರಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ, ನದಿ, ಸಮುದ್ರ ಪಾತ್ರದ ಜನ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅರಬ್ಬೀ ಸಮುದ್ರದಲ್ಲಿ ಮೀನುಗಾರರು ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Cyclone Fengal: ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ; ಕೊಚ್ಚಿಹೋದ ಬಸ್​ಗಳು

ಕಾಸರಗೋಡಿನಲ್ಲಿ ರೆಡ್ ಅಲರ್ಟ್:

ತಮಿಳುನಾಡಿನ ಜೊತೆಗೆ ಕೇರಳದಲ್ಲೂ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದ ಗಡಿ ಭಾಗವಾದ ಕೇರಳದ ಕಾಸರಗೋಡಿನಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ನಾಳೆ ಕಾಸರಗೋಡು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಾಸರಗೋಡು ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ನಾಳೆ ರಜೆ ನೀಡಲಾಗಿದೆ. ಕಾಸರಗೋಡು ಜಿಲ್ಲೆಯ ವೃತ್ತಿಪರ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಕೆ. ಇಂಬುಶೇಖರ್ ಆದೇಶ ಹೊರಡಿಸಿದ್ದಾರೆ. ಟ್ಯೂಷನ್ ಕೇಂದ್ರಗಳು, ಅಂಗನವಾಡಿಗಳು ಮತ್ತು ಮದರಸಾಗಳಿಗೂ ರಜೆ ಅನ್ವಯವಾಗಲಿದೆ. ಆದರೆ, ಮಾದರಿ ವಸತಿ ಶಾಲೆಗಳಿಗೆ ರಜೆ ಅನ್ವಯಿಸುವುದಿಲ್ಲ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ