ಮಂಗಳೂರು: ನರ್ತನ ವೇಳೆಯೇ ಕುಸಿದು ಬಿದ್ದು ದೈವ ನರ್ತಕ ಸಾವು
Mangalore News ದೈವದ ನರ್ತನ ಸೇವೆ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ಸಾವನ್ನಪ್ಪಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಮಂಗಳೂರು: ದೈವದ ನರ್ತನ ಸೇವೆ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ(daivanarthaka) ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ಕಡಬ ತಾಲೂಕಿನ ಎಡಮಂಗಲ ಗ್ರಾಮದಲ್ಲಿ ನಡೆದಿದೆ. ಎಡಮಂಗಲ ಗ್ರಾಮದ ಮೂಲಂಗೀರಿಯ ಕಾಂತು ಅಜಿಲ (59) ಸಾವನ್ನಪ್ಪಿದ ದೈವ ನರ್ತಕ. ನಿನ್ನೆ (ಮಾರ್ಚ್ 29) ರಾತ್ರಿ ಎಡಮಂಗಲ ಗ್ರಾಮದ ಇಡ್ಯಟ್ಕ ಎಂಬಲ್ಲಿ ನಡೆಯುತ್ತಿದ್ದ ಶಿರಾಡಿ- ಕಲ್ಕುಡ ದೈವದ ನೇಮೊತ್ಸವ ವೇಳೆ ಶಿರಾಡಿ ದೈವದ ನರ್ತಕರಾಗಿ ಕುಣಿಯುತ್ತಿದ್ದರು. ಆ ವೇಳೆ ಏಕಾಏಕಿ ಕುಸಿದುಬಿದ್ದಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಯಲಿಲ್ಲ. ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬೀಳುತ್ತಿರುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ.
ಎರಡು ದೈವಗಳ ನರ್ತನ ಸೇವೆ ಏಕ ಕಾಲದಲ್ಲಿ ನಡೆಯುತ್ತಿತ್ತು. ಭಕ್ತರು ಸುತ್ತಲೂ ಕುಳಿತು ನೋಡುತ್ತಿದ್ದರು. ಆಗ ಇದ್ದಕ್ಕಿದ್ದಂತೆ ಕಾಂತು ಅಜಿಲ ನರ್ತನ ಸೇವೆಯಲ್ಲಿ ತಲ್ಲೀನರಾಗಿದ್ದಾಗಲೇ ಕುಸಿದು ಬಿದ್ದರು. ತಕ್ಷಣ ನೆರೆದ ಭಕ್ತರು ಧಾವಿಸಿ ಆಸ್ಪತ್ರಗೆ ಕರೆದುಕೊಂಡು ಹೋಗಿದ್ದಾರೆ. ಆದ್ರೆ, ಹೃದಯಾಘಾತದಿಂದ ಸಾವನ್ನಪ್ಪಿರುವ ಬಗ್ಗೆ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ದೈವ ನರ್ತಕನ ಸಾವಿಗೆ ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ. ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು.
ದೈವ ನರ್ತನದ ಸನ್ನಿವೇಶ ಮತ್ತು ನರ್ತಕ ಕುಸಿದು ಬೀಳುವ ದೃಶ್ಯ ಅಲ್ಲಿದ್ದವರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಎಡಮಂಗಲ ಕೂಡುಕಟ್ಟಿನ ಪ್ರಸಿದ್ಧ ದೈವ ನರ್ತಕರಾಗಿರುವ ಕಾಂತು ಅಜಿಲ ಅವರು ಈ ಭಾಗದಲ್ಲಿ ಶಿರಾಡಿ ದೈವದ ನರ್ತನ ಸೇವೆಯಲ್ಲಿ ಪ್ರಧಾನವಾಗಿ ಗುರುತಿಸಿಕೊಂಡಿದ್ದರು ದೇವರ ಸೇವೆ ಮಾಡುತ್ತಿದ್ದ ಸಂದರ್ಭದಲ್ಲಿಯೇ ಈ ರೀತಿ ಸಾವು ಬಂದಿರುವುದು ಆತಂಕ ಸೃಷ್ಟಿಸಿದೆ.
ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬೀಳುತ್ತಿರುವ ದೃಶ್ಯ ಇಲ್ಲಿದೆ
ಮತ್ತಷ್ಟು ಮಂಗಳೂರು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:40 pm, Thu, 30 March 23