ಧಾರವಾಹಿಯಲ್ಲಿ ದೈವಾರಾಧನೆ ಪ್ರದರ್ಶನ; ಕರಾವಳಿಯಲ್ಲಿ ದೈವಾರಾಧಕರ ಆಕ್ರೋಶ

ಕನ್ನಡದ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಧಾರವಾಹಿಯ ಪ್ರೋಮೋದಲ್ಲಿ ದೈವದಂತೆ ವೇಷ ಭೂಷಣ ಧರಿಸಿ ನಟನೆ ಮಾಡಲಾಗಿದೆ. ಹೀಗಾಗಿ ದೈವಾರಾಧಕರು ಗರಂ ಆಗಿದ್ದು ದೈವಾರಾಧನೆ ಪ್ರದರ್ಶನ ಬೆನ್ನಲ್ಲೇ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಮಂಗಳೂರಿನ ತುಳುನಾಡ ದೈವಾರಾಧನೆ ಸಂರಕ್ಷಣಾ ಯುವ ವೇದಿಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಹಾಗು ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದೆ.

ಧಾರವಾಹಿಯಲ್ಲಿ ದೈವಾರಾಧನೆ ಪ್ರದರ್ಶನ; ಕರಾವಳಿಯಲ್ಲಿ ದೈವಾರಾಧಕರ ಆಕ್ರೋಶ
ತುಳುನಾಡ ದೈವಾರಾಧನೆ ಸಂರಕ್ಷಣಾ ಯುವ ವೇದಿಕೆ ದೂರು
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: ಆಯೇಷಾ ಬಾನು

Updated on:Feb 10, 2024 | 10:36 AM

ಮಂಗಳೂರು, ಫೆ.10: ಕಾಂತಾರ (Kantara) ಸಿನಿಮಾ ಬಳಿಕ ದೈವಾರಾಧನೆ ಬಗ್ಗೆ ಜನರಲ್ಲಿ ಆಸಕ್ತಿ ಹೆಚ್ಚಾಗಿದೆ. ದೈವದ ಮೇಲೆ ಭಕ್ತಿ ಹುಟ್ಟಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಕೆಲವರು ಹಣ ಮಾಡಲು ನಾನಾ ರೀತಿಯ ಕಸರತ್ತು ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ದೈವಗಳ ಹೆಸರಲ್ಲಿ ದಂಧೆಗೆ ಇಳಿದವರ ವಿರುದ್ಧ ದೈವಾರಾಧಕರು ಕೊರಗಜ್ಜನ ಮೊರೆ ಹೋಗಿದ್ದ ಘಟನೆ ನಡೆದಿತ್ತು. ಸದ್ಯ ಈಗ ದೈವಾರಾಧನೆ (Daivaradhane)  ಪ್ರದರ್ಶನ ಧಾರವಾಹಿಗೂ ವ್ಯಾಪಿಸಿದ್ದು ಕರಾವಳಿಯಲ್ಲಿ ದೈವಾರಾಧಕರ ಆಕ್ರೋಶ ಭುಗಿಲೆದ್ದಿದೆ. ದಿನೇ ದಿನೇ ತುಳುನಾಡು ವಿಶಿಷ್ಟ, ಧಾರ್ಮಿಕ ಆಚರಣೆಗೆ ಧಕ್ಕೆಯಾಗುತ್ತಿದೆ ಎಂದು ದೈವಾರಾಧಕರು ಅಸಮಾಧಾನ ಹೊರ ಹಾಕಿದ್ದಾರೆ.

ಕನ್ನಡದ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಧಾರವಾಹಿಯ ಪ್ರೋಮೋದಲ್ಲಿ ದೈವದಂತೆ ವೇಷ ಭೂಷಣ ಧರಿಸಿ ನಟನೆ ಮಾಡಲಾಗಿದೆ. ಧಾರಾವಾಹಿಯಲ್ಲಿ ದೈವಕೋಲ ಪ್ರದರ್ಶನಗೊಂಡ ಹಿನ್ನೆಲೆ ತುಳುನಾಡ ದೈವಾರಾಧಕರು ಗರಂ ಆಗಿದ್ದಾರೆ. ದೈವಾರಾಧನೆ ಪ್ರದರ್ಶನ ಬೆನ್ನಲ್ಲೇ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ದೈವದ ಪಾತ್ರ ನಿರ್ವಹಿಸಿದ ಕಲಾವಿದನ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಕಲಾವಿದ ಮಂಗಳೂರಿನ ಪ್ರಶಾಂತ್ ಸಿ.ಕೆ ಹಾಗೂ ಧಾರವಾಹಿ ನಿರ್ದೇಶಕನ ವಿರುದ್ಧ ಪ್ರಕರಣ ದಾಖಲಿಸಲು ದೈವಾರಾಧಕರು ಮುಂದಾಗಿದ್ದಾರೆ. ಯಾವುದೇ ಕಾರಣಕ್ಕೂ ಧಾರವಾಹಿ ತೆರೆ ಮೇಲೆ ಬರಬಾರದೆಂದು ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ: ಕಾಂತಾರ ಸಿನಿಮಾ ಬಳಿಕ ಹೊಸ ಸಂಕಷ್ಟ ಶುರು; ದೈವಾರಾಧನೆ ಹೆಸರಿನಲ್ಲಿ ದಂಧೆ

ಧಾರವಾಹಿಯ ಪ್ರೋಮೋ ವಿಡಿಯೋ ವೈರಲ್ ಬೆನ್ನಲ್ಲೇ ದೈವಾರಾಧಕರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಈ ಬಗ್ಗೆ ಮಂಗಳೂರಿನ ತುಳುನಾಡ ದೈವಾರಾಧನೆ ಸಂರಕ್ಷಣಾ ಯುವ ವೇದಿಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಹಾಗು ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದೆ. ಚಿತ್ರೀಕರಣಕ್ಕೆ ಸುಳ್ಳು ಹೇಳಿ ಬ್ಯಾಂಡ್ ವಾದ್ಯದವರನ್ನು ಕರೆಸಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ದೈವಸ್ಥಾನದಲ್ಲಿ ಕೋಲ ಇದೆ ಎಂದು ಹೇಳಿ ದೇವಸ್ಥಾನದ ಬ್ಯಾಂಡ್ ವಾದ್ಯದವರನ್ನು ಕರೆಸಿದ್ದಾರೆ ಎಂದು ದೈವಾರಾಧಕರ ವೇದಿಕೆ ಧಾರವಾಹಿ ತಂಡದ ಮೇಲೆ ಆರೋಪ ಮಾಡಿದ್ದಾರೆ.

ದೈವಾರಾಧನೆ ನಮ್ಮ ಸಮಾಜದ ಕರ್ತವ್ಯ. ಸೀಮಿತ ಸಮಾಜದವರು ಮಾತ್ರ ದೈವ ನರ್ತನ ಮಾಡಬೇಕು. ಈಗ ಚದ್ಮವೇಷದಂತೆ ಪ್ರತಿಯೊಬ್ಬರು ವೇಷ ಹಾಕಿಕೊಂಡು‌ ಹಣ ಮಾಡುತ್ತಿದ್ದಾರೆ. ಈ ರೀತಿಯ ಘಟನೆಗಳಿಂದ ದೈವಾರಾಧನೆಗೆ ಅಪಮಾನ ಮಾಡಲಾಗುತ್ತಿದೆ. ಸಾಂಪ್ರದಾಯಿಕವಾಗಿ ದೈವ ನರ್ತನ ಸೇವೆ ನಡೆಯುವಲ್ಲಿಯೇ ಅದು ನಡೆಯಬೇಕು. ಸಿನಿಮಾ, ಧಾರವಾಹಿ, ವೇದಿಕೆಗಳಲ್ಲಿ ದೈವಾರಾಧನೆ ಪ್ರದರ್ಶನ ಸಲ್ಲದು. ನಾವು ಆ ರೀತಿಯ ಪ್ರದರ್ಶನಗಳಿಗೆ ಅವಕಾಶ ನೀಡೋದಿಲ್ಲ. ಇದರ ವಿರುದ್ಧ ನಾವು ಹೋರಾಟ ನಡೆಸುತ್ತೇವೆ. ಸಿನಿಮಾ, ಧಾರವಾಹಿ ಯಾವುದರಲ್ಲೂ ದೈವಾರಾಧನೆಯನ್ನ ಬಳಸಿಕೊಳ್ಳಬಾರದು. ಇದು ನಮ್ಮ ಜನಾಂಗೀಯ ನಿಂದನೆ. ಮುಂದೆ ಇದರ ವಿರುದ್ಧ ಕಾನೂನಾತ್ಮಕ ಹೋರಾಟವನ್ನ ನಡೆಸುತ್ತೇವೆ ಎಂದು ದೈವಾರಾಧಕರು ಎಚ್ಚರಿಕೆ ನೀಡಿದ್ದಾರೆ.

ಕಾಂತಾರ-2 ಸಿನಿಮಾದಲ್ಲಿ ದೈವರಾಧಾನೆ ಬೇಡ

ಕಾಂತಾರ ಸಿನಿಮಾ ಬಂದ ಬಳಿಕ ಹೊರಜಿಲ್ಲೆಯಲ್ಲಿ ದೈವಾರಾಧನೆ ನಡೆಯುತ್ತಿದೆ. ಇದನ್ನು ಸಹ ನಮ್ಮ ವೇದಿಕೆ ಮೂಲಕ ನಿಲ್ಲಿಸುವ ಕೆಲಸ ಮಾಡ್ತೇವೆ. ಕಾಂತಾರ 2 ಗೂ ಎಚ್ಚರಿಕೆ ನೀಡಿದ್ದೇವೆ. ಕಾಂತಾರ ಸಿನಿಮಾ ಬರೋದಕ್ಕೆ ನಮ್ಮ ವಿರೋಧವಿಲ್ಲ. ಆದ್ರೆ ಅದರಲ್ಲಿ ದೈವದ ಆಚಾರ ವಿಚಾರ ಇರಬಾರದು. ದೈವದ ಕೊಡಿ‌ ಅಡಿಯಲ್ಲಿ ನಡೆಯುವ ಆಚಾರ ವಿಚಾರ ಅದರಲ್ಲಿ ಇರಬಾರದು. ಇದರ ವಿರುದ್ಧ ದೊಡ್ಡ ಮಟ್ಟದ ಹೋರಾಟ ಮಾಡ್ತೇವೆ ಎಂದು ಮಂಗಳೂರಿನಲ್ಲಿ ತುಳುನಾಡ ದೈವಾರಾಧನೆ ಸಂರಕ್ಷಣಾ ಯುವ ವೇದಿಕೆ ಕಾರ್ಯದರ್ಶಿ ರವಿ ಬಜ್ಪೆ ಹೇಳಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:25 am, Sat, 10 February 24

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ