ದಕ್ಷಿಣ ಕನ್ನಡ: ಬೈಕ್ಗೆ ಲಾರಿ ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ಸಾವು; ಮಕ್ಕಳಿಗೆ ಗಾಯ
ಬೈಕ್ಗೆ ಲಾರಿ ಡಿಕ್ಕಿಯಾದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಕಲ್ಲಾಪು ಬಳಿ ನಡೆದಿದೆ.
ದಕ್ಷಿಣ ಕನ್ನಡ: ಬೈಕ್ಗೆ ಲಾರಿ ಡಿಕ್ಕಿಯಾದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಕಲ್ಲಾಪು ಬಳಿ ನಡೆದಿದೆ. ಪತಿ ಗಂಗಾಧರ್, ಪತ್ನಿ ನೇತ್ರಾವತಿ ಮೃತ ದುರ್ದೈವಿಗಳು. ಸ್ಕೂಟರ್ನಲ್ಲಿ ದಂಪತಿ ಮತ್ತು ಇಬ್ಬರು ಮಕ್ಕಳು ತೆರಳುತ್ತಿದ್ದರು. ಈ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸಾವನ್ನಪ್ಪಿದ್ದು, ನೇತ್ರಾವತಿ ಮಗ ಮೋಕ್ಷ, ನೇತ್ರಾವತಿ ಸೋದರಿ ಮಗ ಜ್ಞಾನೇಶ್ಗೆ ಗಾಯಗಳಾಗಿವೆ. ಗಾಯಗೊಂಡ ಮಕ್ಕಳನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ನೀಡಲಾಗುತ್ತಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:41 pm, Sun, 6 November 22