AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಪಾವೂರು ಉಳಿ ದ್ವೀಪ ಜನರ ಹೋರಾಟಕ್ಕೆ ಜಯ, ಮರಳುಗಾರಿಕೆ ನಿಷೇಧಿಸಿದ ಜಿಲ್ಲಾಡಳಿತ

ಉಳಿಯ ದ್ವೀಪ ಮಂಗಳೂರಿನ ಸುಂದರ ದ್ವೀಪ ಪ್ರದೇಶ. ಸುಮಾರು 25 ಅಧಿಕ ಕುಟುಂಬಗಳು ವಾಸಿಸುತ್ತಿರುವ ಆ ಐಲ್ಯಾಂಡ್ ಪ್ರದೇಶವನ್ನು ಮರಳು ದಂಧೆಕೋರರು ನೀರು ಪಾಲು ಮಾಡಲು ಹೊರಟಿದ್ದರು. ಆದ್ರೆ ಇದೀಗ ಅಲ್ಲಿನ ಜನರ ಅವಿರತ ಹೋರಾಟದ ಬಳಿಕ ಮರಳುಗಾರಿಕೆಗೆ ಬ್ರೇಕ್​ ಬಿದ್ದಿದೆ.

ಮಂಗಳೂರು: ಪಾವೂರು ಉಳಿ ದ್ವೀಪ ಜನರ ಹೋರಾಟಕ್ಕೆ ಜಯ, ಮರಳುಗಾರಿಕೆ ನಿಷೇಧಿಸಿದ ಜಿಲ್ಲಾಡಳಿತ
ಉಳಿಯ ದ್ವೀಪ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on:Oct 19, 2024 | 5:00 PM

Share

ಮಂಗಳೂರು, ಅಕ್ಟೋಬರ್​ 18: ದಕ್ಷಿಣ ಕನ್ನಡ (Dakshin Kannada) ಜಿಲ್ಲೆಯ ಉಳ್ಳಾಲ (Ullal) ತಾಲೂಕಿನ ಪಾವೂರು ಬಳಿಯ ನೇತ್ರಾವತಿ ನದಿಯ (Netravathi River) ಉಳಿಯ ದ್ವೀಪ ಹಚ್ಚ ಹಸಿರು ಜನವಸತಿ ಪ್ರದೇಶದಿಂದ ಕೂಡಿದೆ. ಈ ದ್ವೀಪ ವಿನಾಶದ ಅಂಚಿಗೆ ತಲುಪಿತ್ತು. ಮರಳು ದಂಧೆಕೋರರ ಅಟ್ಟಹಾಸಕ್ಕೆ ಸುಮಾರು 80 ಎಕರೆ ಇದ್ದ ದ್ವೀಪ ಪ್ರದೇಶ ಇದೀಗ 40 ಎಕರೆಗೆ ಬಂದು ತಲುಪಿದೆ. ಈ ಅಕ್ರಮ ಮರಳುಗಾರಿಕೆಯ ವಿರುದ್ಧ ಇಲ್ಲಿನ 25ಕ್ಕೂ ಹೆಚ್ಚು ಕುಟುಂಬಗಳು ನಿರಂತರ ಹೋರಾಟ ಮಾಡುತ್ತಾ ಬಂದಿದ್ದರು.

ಪ್ರತಿಭಟನೆಗೂ ಬಗ್ಗದಿದ್ದಾಗ ದ್ವೀಪ ನಿವಾಸಿಗಳು ನದಿಯಲ್ಲಿ ಮುಳುಗಿ ಆಡಳಿತ ವ್ಯವಸ್ಥೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೊನೆಗೂ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ ಉಳಿಯ ದ್ವೀಪದ ಸುತ್ತಮುತ್ತಲಿನ ಎರಡು ಕಿ.ಮೀ ವ್ಯಾಪ್ತಿಯ ಪ್ರದೇಶದಲ್ಲಿ ಎಲ್ಲ ರೀತಿಯ ಮರಳುಗಾರಿಕೆಯನ್ನು ನಿಷೇಧಿಸಿ ಆದೇಶಿಸಿದೆ.

ನಿಷೇಧಿತ ಪ್ರದೇಶದ ವ್ಯಾಪ್ತಿಯಲ್ಲಿ ಸಂಚಾರ ದೋಣಿಗಳ ಹೊರತಾಗಿ ಇತರೆ ಎಲ್ಲ ದೋಣಿ ಅಥವಾ ಯಂತ್ರಗಳ ಮೂಲಕ ಮರಳು ಉತ್ಪನ್ನದ ಸಾಗಾಟ ಮಾಡುವುದನ್ನು ನಿಷೇಧಿಸಲಾಗಿದೆ. ಇದು ಇಲ್ಲಿನ ದ್ವೀಪ ನಿವಾಸಿಗಳ ಹೋರಾಟಕ್ಕೆ ಜಯಸಿಕ್ಕಂತಾಗಿದೆ.

ಇದನ್ನೂ ಓದಿ: ನದಿ, ಸಮುದ್ರ ತೀರಕ್ಕೆ ಯಾರೂ ತೆರಳದಂತೆ ಎಚ್ಚರಿಕೆ ವಹಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ

2014ರಲ್ಲಿ ದಕ್ಷಿಣಕನ್ನಡ ಜಿಲ್ಲಾಧಿಕಾರಿಯಾಗಿದ್ದ ಎ.ಬಿ ಇಬ್ರಾಹಿಂ ಉಳಿಯ ಪಾವೂರು ದ್ವೀಪದ ಸುತ್ತಮುತ್ತಲು ಒಂದು ಕಿ.ಮೀ ವ್ಯಾಪ್ತಿಯಲ್ಲಿ ಮರಳುಗಾರಿಕೆ ನಿಷೇಧ ಮಾಡಿ ಆದೇಶ ಹೊರಡಿಸಿದ್ದರು. ಆದರೆ ಅವರ ಆದೇಶವನ್ನು ಗಾಳಿಗೆ ತೂರಿ ನಿರಂತರವಾಗಿ ಅಕ್ರಮ ಮರಳುಗಾರಿಕೆ ಮುಂದುವರಿದುಕೊಂಡೆ ಬಂದಿತ್ತು.

ಇತ್ತಿಚೇಗೆ ಯಾರ ಭಯವೂ ಇಲ್ಲದೆ ಮರಳು ದಂಧೆಕೋರರು ಮರಳು ಅಗೆಯುತ್ತಿದ್ದ ದೃಶ್ಯಗಳು ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿತ್ತು. ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದ ಕೆಡಿಪಿ ಸಭೆಯಲ್ಲೂ ಈ ವಿಚಾರ ಚರ್ಚೆಗೆ ಬಂದು ತೀವ್ರ ಚರ್ಚೆಗೆ ಕಾರಣವಾಗಿತ್ತು. ಅಕ್ರಮಕ್ಕೆ ಕಡಿವಾಣ ಹಾಕಿ ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದರು.

ಕೊನೆಗೂ ಮರಳುಗಾರಿಕೆಗೆ ಬ್ರೇಕ್ ಬಿದ್ದಿದೆ. ಅನಧಿಕೃತ ದಕ್ಕೆಗಳಲ್ಲಿ ಮರಳು ಶೇಖರಿಸಿರುವುದನ್ನು ಮತ್ತು ವಾಹನಗಳಿಗೆ ಮರಳು ಹಂಚುವುದನ್ನು ಕೂಡ ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದೆ.

ಈ ದ್ವೀಪದಲ್ಲಿ ಸುಮಾರು 25ಕ್ಕೂ ಹೆಚ್ಚು ಕುಟುಂಬಗಳು ನೂರಾರು ವರ್ಷದಿಂದ ವಾಸವಾಗಿದ್ದು ಅಕ್ರಮ ಮರಳುಗಾರಿಕೆಯಿಂದ ಇವರುಗಳ ಮನೆ ಅಪಾಯದಲ್ಲಿತ್ತು. ಹೀಗಾಗಿ ಈ ದ್ವೀಪವನ್ನು ಉಳಿಸಲು ಇಲ್ಲಿನ ಜನ ಬೀದಿಗಿಳಿದು ಪ್ರತಿಭಟಿಸಿದ್ದರು. ಇದೀಗ ಇಲ್ಲಿನ ನಿವಾಸಿಗಳ ಕೂಗು ಆಡಳಿತ ವ್ಯವಸ್ಥೆಗೆ ತಲುಪಿದ್ದು ಜನ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:18 am, Fri, 18 October 24

Follow Us
Ashok
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್