AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dakshina Kannada: ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಉರುಳಿಬಿದ್ದ ಕಾರು: 6 ಜನರಿಗೆ ಗಂಭೀರ ಗಾಯ, 2 ವರ್ಷದ ಮಗು ಪಾರು

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೆಲ್ಯಾಡಿ‌ಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಿರು ಸೇತುವೆಯಿಂದ ಉರುಳಿ 20 ಅಡಿ ಕಂದಕಕ್ಕೆ ಕಾರು ಬಿದ್ದ ಪರಿಣಾಮ 6 ಜನರಿಗೆ ಗಂಭೀರ ಗಾಯಗಳಾಗಿದ್ದು, ಕಾರಿನಲ್ಲಿದ್ದ 2 ವರ್ಷದ ಮಗು ಅದೃಷ್ಟವಶಾತ್​ ಪಾರಾಗಿದೆ.

Dakshina Kannada: ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಉರುಳಿಬಿದ್ದ ಕಾರು: 6 ಜನರಿಗೆ ಗಂಭೀರ ಗಾಯ, 2 ವರ್ಷದ ಮಗು ಪಾರು
ಸೇತುವೆಯಿಂದ ಉರುಳಿ ಬಿದ್ದ ಕಾರು
ಗಂಗಾಧರ​ ಬ. ಸಾಬೋಜಿ
|

Updated on:Jun 17, 2023 | 4:42 PM

Share

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಿರು ಸೇತುವೆಯಿಂದ ಉರುಳಿ 20 ಅಡಿ ಕಂದಕಕ್ಕೆ ಕಾರು ಬಿದ್ದ ಪರಿಣಾಮ 6 ಜನರಿಗೆ ಗಂಭೀರ ಗಾಯಗಳಾಗಿರುವಂತಹ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಕಡಬ ತಾಲೂಕಿನ ನೆಲ್ಯಾಡಿ‌ಯಲ್ಲಿ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ 2 ವರ್ಷದ ಮಗುವಿಗೆ ಗಾಯವಾಗಿಲ್ಲ. ಸದ್ಯ ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬೆಂಗಳೂರಿನ ಆರ್.ಟಿ.ನಗರದ ನಿವಾಸಿಗಳು ಎಂದು ತಿಳಿದುಬಂದಿದೆ. ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದಾಗ ಅವಘಡ ಸಂಭವಿಸಿದೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಸ್ತೆಗಳಲ್ಲಿ ದರೋಡೆ ಮಾಡುತ್ತಿದ್ದ ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ

ನೆಲಮಂಗಲ: ರಸ್ತೆಗಳಲ್ಲಿ ದರೋಡೆ ಮಾಡುತ್ತಿದ್ದ ಅಂತಾರಾಜ್ಯ ಕಳ್ಳರನ್ನು ನೆಲಮಂಗಲ ಟೌನ್ ಪೊಲೀಸರು ಬಂಧಿಸಿದ್ದಾರೆ. ಚಂದ್ರಶೇಖರ್(27) ಯತೀಶ್(26) ಬಂಧಿತ ಆರೋಪಿಗಳು. ಬಂಧಿತರಿಂದ ಕಾರು, ಆಟೋ, 2 ಬೈಕ್, ಲ್ಯಾಪ್‌ಟಾಪ್, ಎರಡು ಮೊಬೈಲ್, ಚಿನ್ನಾಭರಣ ಸೇರಿದಂತೆ 12 ಲಕ್ಷ ಮೌಲ್ಯದ ಚಿನ್ನಾಭರಣ ಸಾಮಾನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: Shivamogga News: ಆಂಟಿಯ ಹಿಂದೆ ಬಿದ್ದಿದ್ದ ಆಟೋ ಡ್ರೈವರ್​ನ ಬರ್ಬರ ಹತ್ಯೆ; ಆರೋಪಿ ಅರೆಸ್ಟ್​

ಆರೋಪಿ ಚಂದ್ರಶೇಖರ್ 42 ಪ್ರಕರಣಗಳಲ್ಲಿ ಮತ್ತು ಯತೀಶ್ 39 ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ಸದ್ಯ ಆರೋಪಿಗಳನ್ನ ವಶಕ್ಕೆ ಪಡೆದು ಪೊಲೀಸರು ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ. ಕೃತ್ಯಕ್ಕೆ ಬಳಸಿದ ಮಾರಕಾಸ್ತ್ರಗಳನ್ನು ಸಹ ವಶಕ್ಕೆ ಪಡೆದಿದ್ದಾರೆ.

ತಂತಿ ಬೇಲಿಯನ್ನ ಕದೀಯುತ್ತಿರುವ ಚೋರರು

ಮಂಡ್ಯ: ಬೆಂಗಳೂರು-ಮೈಸೂರು ಹೈವೆ ಪಕ್ಕದಲ್ಲಿ ಹಾಕಿದ್ದ ತಡೆ ಗೋಡೆಗಳ ತಂತಿ ಬೇಲಿಯನ್ನು ಕಳ್ಳತನ ಮಾಡಲಾಗಿದೆ. ಆ ಮೂಲಕ ಕಳ್ಳರ ತಮ್ಮ ಕೈ ಚಳಕ ತೋರಿದ್ದಾರೆ. ದನಕರಗಳು ಎಕ್ಸ್ ಪ್ರೆಸ್ ಹೈವೆ ನುಗ್ಗ ಬಾರದೆಂಬ ಕಾರಣಕ್ಕೆ ಮದ್ದೂರಿನಿಂದ ಮಂಡ್ಯದ ಮಾರ್ಗವಾಗಿ ಬರುವ ರಸ್ತೆಯಲ್ಲಿ ತಂತಿ ಬೇಲಿ ಹಾಕಲಾಗಿದೆ. ಈ ಹಿಂದೆ ವಿದ್ಯುತ್ ಕಂಬಕ್ಕೆ ಹಾಕಿದ್ದ ಅಲ್ಯೂಮಿನಿಯಮ್ ಪ್ಲೇಟ್​ಗಳನ್ನ ಸಹ ಕಳ್ಳರು ಕದ್ದಿದ್ದರು.

ಇದನ್ನೂ ಓದಿ: Belagavi News: ರಾತ್ರಿ ಗೆಳೆಯರ ಜೊತೆಗೆ ಹೋದವ, ಬೆಳಗ್ಗೆ ಶವವಾಗಿ ಪತ್ತೆ; ಮುಗಿಲು ಮುಟ್ಟಿದ ಮಗನನ್ನ ಕಳೆದುಕೊಂಡ ತಾಯಿಯ ಗೋಳಾಟ

ಈಗ ಕಳ್ಳರ ಚಿತ್ತ ತಂತಿ ಬೇಲಿ ಮೇಲೆ ಬಿದಿದ್ದು, 20 ಕ್ಕೂ ಹೆಚ್ಚು ಕಡೆ ತಂತಿ ಬೇಲಿ ಕಳ್ಳತನ ಮಾಡಿದ್ದಾರೆ. ಪೊಲೀಸರು ಎಷ್ಟೇ ಗಸ್ತು ತಿರುಗಿದರೂ ತಂತಿ ಬೇಲಿ ಕಳ್ಳತನಕ್ಕೆ ಬ್ರೇಕ್​ ಬಿದ್ದಿಲ್ಲ. ಈಗಾಗಲೇ ಹೆದ್ದಾರಿ ಲೋಕಾರ್ಪಣೆಯಾದ ಬಳಿಕ ಅಪಘಾತ ಪ್ರಕರಣಗಳು ಹೆಚ್ಚಾಗಿವೆ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳದೆ ಇದ್ದರೆ ಪ್ರಾಣ ಹಾನಿ ಸಂಭವಿಸುವ ಸಾಧ್ಯತೆ ಇದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:40 pm, Sat, 17 June 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ