AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ದಕ್ಷಿಣ ಕನ್ನಡದಿಂದ ಎಲ್ಲಿಗೆ ಗೊತ್ತಾ?

ಧರ್ಮಸ್ಥಳದಲ್ಲಿ ನೂರಾರು ಶವ ಹೂತ್ತಿರುವುದಾಗಿ ಚಿನ್ನಯ್ಯ ಆರೋಪ ಮಾಡಿರುವ ಪ್ರಕರಣ ಹಾಗೂ ಸೌಜನ್ಯ ಪ್ರಕರಣದಲ್ಲಿ ಭಾರೀ ಸದ್ದು ಮಾಡಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಉತ್ತರ ಕರ್ನಾಟಕದ ಜಿಲ್ಲೆಯೊಂದಕ್ಕೆ ಗಡಿಪಾರು ಮಾಡಿ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ.

ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ದಕ್ಷಿಣ ಕನ್ನಡದಿಂದ  ಎಲ್ಲಿಗೆ ಗೊತ್ತಾ?
Mahesh Shetty Thimarodi
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Sep 23, 2025 | 4:56 PM

Share

ಮಂಗಳೂರು, (ಸೆಪ್ಟೆಂಬರ್ 23): ಧರ್ಮಸ್ಥಳದ ಬುರುಡೆ ಪ್ರಕರಣ ಹಾಗೂ ಸೌಜನ್ಯ ಕೇಸಿನ ಹೋರಾಟದಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದ ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Thimarodi ) ಅವರನ್ನು ಗಡಿಪಾರು ಮಾಡಲಾಗಿದೆ. ಒಂದು ವರ್ಷ ಅವಧಿಗೆ ದಕ್ಷಿಣ ಕನ್ನಡ (Dakshina kannada) ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಸುಮಾರು 32 ವಿವಿಧ ಪ್ರಕರಣಗಳು ಇವೆ. ಹೀಗಾಗಿ ಇವರನ್ನು ಗಡಿಪಾರು ಮಾಡುವಂತೆ ಆಗ್ರಹಗಳು ವ್ಯಕ್ತವಾಗಿದ್ದವು. ಇದರ ಬೆನ್ನಲ್ಲೇ ಇದೀಗ ಈ ಕ್ರಮ ಕೈಗೊಳ್ಳಲಾಗಿದೆ.

ಸಪ್ಟೆಂಬರ್ 20ರಂದೇ ಪುತ್ತೂರು ಸಹಾಯಕ ಆಯುಕ್ತರು ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಆದ್ರೆ, ಇನ್ನೂ ಕೂಡ ಗಡಿಪಾರು ಪ್ರಕ್ರಿಯೆ ನಡೆದಿಲ್ಲ. ಯಾಕಂದ್ರೆ ಗಡಿಪಾರು ನೋಟಿಸ್ ಅನ್ನು ಪೊಲೀಸರು ಖುದ್ದು ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ನೀಡಬೇಕು. ಅದಾದ ಬಳಿಕ ಗಡಿಪಾರು ಪ್ರಕ್ರಿಯೆ ನಡೆಯುತ್ತದೆ.

ಇದನ್ನೂ ಓದಿ: ಮಹೇಶ್​ ಶೆಟ್ಟಿ ತಿಮರೋಡಿ ಮನೆಯಲ್ಲಿ ಮಾಸ್ಕ್​ಮ್ಯಾನ್ ಚಿನ್ನಯ್ಯ ಮೊಬೈಲ್ ಪತ್ತೆ

ಹಲವು ಪ್ರಕರಣಗಳಲ್ಲಿ ವಿಚಾರಣೆಯನ್ನು ಎದುರಿಸುತ್ತಿರುವ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಮಹೇಶ್ ಶೆಟ್ಟಿ ತಿಮರೋಡಿ ಅವರು ಹಲವು ಹೋರಾಟಗಳಲ್ಲಿ ಗುರುತಿಸಿಕೊಂಡಿದ್ದಾರೆ. ಸೌಜನ್ಯ ಪರ ಹೋರಾಟದಲ್ಲೂ ಸಹ ಇವರು ಮುಂಚೂಣಿಯಲ್ಲಿದ್ದರು. ಅಲ್ಲದೇ ಧರ್ಮಸ್ಥಳ ಪ್ರಕರಣದಲ್ಲೂ ಸಹ ಕಾಣಿಸಿಕೊಂಡಿದ್ದು, ಈ ಸಂಬಂಧ ಇವರ ಮನೆ ಮೇಲೆ ಎಸ್​ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ಶಸ್ತ್ರಾಸ್ತ್ರಗಳು ಪತ್ತೆಯಾಗಿದ್ದು, ಈ ಸಂಬಂಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಲ್ಲದೇ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧವೂ ಸಹ ಅವಹೇಳನಕಾರಿ ಹೇಳಿಕೆ ನೀಡಿ ಬಂಧನಕ್ಕೊಳಗಾಗಿದ್ದರು. ಸದ್ಯ ಇವರ ವಿರುದ್ಧ ಸುಮಾರು 32 ಪ್ರಕರಣ ಇದ್ದು, ವಿಚಾರಣೆ ಹಂತದಲ್ಲಿವೆ.

Published On - 4:35 pm, Tue, 23 September 25

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ