ಮಂಗಳೂರು: ಅರಣ್ಯಾಧಿಕಾರಿಗಳ ವಿರುದ್ಧ ನಾಲಿಗೆ ಹರಿಬಿಟ್ಟ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಸೂಚನೆಯ ಮೇರೆಗೆ ಮೀಸಲು ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣ ಆರೋಪ ವಿಚಾರವಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಅರಣ್ಯಾಧಿಕಾರಿ ದೂರು ನೀಡಿದ್ದರು. ಇದರಿಂದ ಆಕ್ರೋಶಗೊಂಡ ಶಾಸಕರು, ಅರಣ್ಯಾಧಿಕಾರಿ ವಿರುದ್ಧ ಏಕವಚನದಲ್ಲಿ ಮತ್ತು ಅವಾಚ್ಯವಾಗಿ ಬೈದಿದ್ದಾರೆ.

Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: Rakesh Nayak Manchi

Updated on:Oct 09, 2023 | 8:41 PM

ಮಂಗಳೂರು, ಅ.9: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Poonja) ಸೂಚನೆಯ ಮೇರೆಗೆ ಮೀಸಲು ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣ ಆರೋಪ ವಿಚಾರವಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ಕೆಕೆ ಅವರು ದೂರು ನೀಡಿದ್ದರು. ಇದರಿಂದ ಆಕ್ರೋಶಗೊಂಡ ಶಾಸಕರು, ಅರಣ್ಯಾಧಿಕಾರಿ ವಿರುದ್ಧ ಏಕವಚನದಲ್ಲಿ ಮತ್ತು ಅವಾಚ್ಯವಾಗಿ ಬೈದಿದ್ದಾರೆ.

ಮೀಸಲು ಅರಣ್ಯ ಪ್ರದೇಶದಲ್ಲಿ ಮನೆ ಜಾಟಾಪಟಿ ವಿಚಾರ ಹಿನ್ನೆಲೆ ಸ್ಥಳದಲ್ಲಿ ಭಾರೀ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿನ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ ಮನೆಯ ಪೌಂಡೇಶನ್ ಸಹಿತ ಅರಣ್ಯಾಧಿಕಾರಿಗಳು ತೆರವು ಮಾಡಿದ್ದರು.

ಇದನ್ನೂ ಓದಿ: ನೋಟಿಸ್‌ ಕೊಡ್ದೆ ಡೆಮಾಲಿಶ್‌ಗೆ ಬಂದ ಅಧಿಕಾರಿಗೆ ಹಿಗ್ಗಾಮುಗ್ಗಾ ಕ್ಲಾಸ್‌ ತಗೊಂಡ ಶಾಸಕ; ಇಲ್ಲಿದೆ ವಿಡಿಯೋ

ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಹರೀಶ್ ಪೂಂಜಾ ಅವರು ಅರಣ್ಯ ಅಧಿಕಾರಿಗಳ ಎದುರೇ ಮತ್ತೆ ಮನೆ ನಿರ್ಮಿಸಲು ಸೂಚಿಸಿದ್ದರು. ಹೀಗಾಘಿ ಇಂದು ಕೂಡ ತೆರವು ಕಾರ್ಯಾಚರಣೆಗೆ ತೆರಳಿದ ಅರಣ್ಯಾಧಿಕಾರಿಗಳು ವಿರುದ್ಧ ಬಿಜೆಪಿ ಸಿಡಿದೆದ್ದಿದೆ.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಸುಳ್ಯ ಶಾಸಕಿ ಭಗಿರಥಿ ಜಿ ಮುರುಳ್ಯ, ಬಂಟ್ವಾಳ ಶಾಸಕ ರಾಜೇಶ್ ನಾಯಕ್, ಮಂಗಳೂರು ಉತ್ತರ ಶಾಸಕ ಭರತ್ ವೈ ಶೆಟ್ಟಿ, ಬೆಳ್ತಂಗಡಿ ಎಂಎಲ್​ಸಿ ಪ್ರತಾಪ್ ಸಿಂಹ ನಾಯಕ್ ಸ್ಥಳದಲ್ಲಿ ಮುಕ್ಕಾಂ ಹೂಡಿದ್ದಾರೆ. ಅಲ್ಲದೆ, ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ಕೆಕೆ ಅವರಿಗೆ ಹರೀಶ್ ಪೂಂಜಾ ಅವರು ಅವಾಚ್ಯ ಪದ ಬಳಸಿ ನಿಂದಿಸಿದ್ದಾರೆ.

ಸ್ಥಳದಲ್ಲಿ ಪೊಲೀಸ್ ಬಿಗಿ ಭದ್ರತೆ

ಅರಣ್ಯ ಮೀಸಲು ಪ್ರದೇಶದ ವಿಚಾರದಲ್ಲಿ ಜಟಾಪಟಿಗೆ ರಾಜಕೀಯ ನಾಯಕರ ಎಂಟ್ರಿಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಧರ್ಮಸ್ಥಳ ಪೊಲೀಸ್ ಅಧಿಕಾರಿಗಳು ಮೂರು KSRP ತುಕಡಿ ರೆಡಿ ಮಾಡಿದ್ದಾರೆ. ಡಿಎಫ್ಓ ಬರುವಿಕೆಗಾಗಿ ಕಾಯುತ್ತಿರುವ ಅರಣ್ಯಾಧಿಕಾರಿಗಳು, ಕೆಲವೇ ಕ್ಷಣಗಳಲ್ಲಿ ಮನೆ ತೆರವು ಮಾಡಲಿದ್ದಾರೆ. ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲಿ ಲಾಠಿ ಚಾರ್ಜ್ ನಡೆಸಲು ಸೂಚನೆ ನೀಡಲಾಗಿದೆ.

ಪ್ರತಾಪ್ ಸಿಂಹ ನಾಯಕ್ ಮತ್ತು ಅಧಿಕಾರಿಗಳ ನಡುವೆ ಜಟಾಪಟಿ

ತೀವ್ರ ವಿರೋಧದ ನಡುವೆಯೂ ಅರಣ್ಯಾಧಿಕಾರಿಗಳು ಮನೆ ಪಂಚಾಂಗ ತೆರವಿಗೆ ಮುಂದಾದರು. ಈ ವೇಳೆ ಬಿಜೆಪಿ ನಾಯಕರು ಮತ್ತು ಅರಣ್ಯಾಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ಅಲ್ಲದೆ,ಬಿಜೆಪಿ ಎಂಎಲ್​ಸಿ ಪ್ರತಾಪ್ ಸಿಂಹ ನಾಯಕ್ ಹಾಗೂ ಅರಣ್ಯಾಧಿಕಾರಿಗಳ ನಡುವೆ ನೂಕಾಟ ತಳ್ಳಾಟ ನಡೆಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:02 pm, Mon, 9 October 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್