AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನದಿ, ಸಮುದ್ರ ತೀರಕ್ಕೆ ಯಾರೂ ತೆರಳದಂತೆ ಎಚ್ಚರಿಕೆ ವಹಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ

ವಾಯುಭಾರ ಕುಸಿತವಾದ ಹಿನ್ನಲೆ ಅ.16ರಿಂದ 19ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ವೇಳೆ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾದ್ಯತೆ ಇದ್ದು, ನದಿತೀರ, ಸಮುದ್ರ ತೀರಕ್ಕೆ ಸಾರ್ವಜನಿಕರು ಹಾಗೂ ಪ್ರವಾಸಿಗರು ತೆರಳದಂತೆ ಎಚ್ಚರಿಕೆ ವಹಿಸಲು ದ‌.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

ನದಿ, ಸಮುದ್ರ ತೀರಕ್ಕೆ ಯಾರೂ ತೆರಳದಂತೆ ಎಚ್ಚರಿಕೆ ವಹಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Oct 15, 2024 | 8:09 PM

Share

ದಕ್ಷಿಣ ಕನ್ನಡ, ಅ.15: ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನಲೆ ಅ.16ರಿಂದ 19ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಬೆನ್ನಲ್ಲೇ ಎಚ್ಚೆತ್ತ ದಕ್ಷಿಣ ಕನ್ನಡ ಜಿಲ್ಲಾಡಳಿತ ‘ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಸೂಚಿಸಿದೆ. ಜೊತೆಗೆ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರರು ಕೂಡಲೇ ದಡ ಸೇರುವಂತೆ ತಿಳಿಸಿದೆ.

ಇನ್ನು ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಭಾರಿ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾದ್ಯತೆ ಇರುವುದರಿಂದ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರ ತೀರಕ್ಕೆ ಸಾರ್ವಜನಿಕರು ಹಾಗೂ ಪ್ರವಾಸಿಗರು ತೆರಳದಂತೆ ಎಚ್ಚರಿಕೆ ವಹಿಸಲು ದ‌.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ ಮುಂಜಾನೆಯಿಂದಲೇ ಮಳೆ, ವಿವಿಧ ಜಿಲ್ಲೆಗಳಲ್ಲಿ 3 ದಿನ ಭಾರೀ ಮಳೆಯ ಮುನ್ಸೂಚನೆ

ಇಂದಿನಿಂದ ಅ.19ರವರೆಗೆ ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ದಕ್ಷಿಣ ಕನ್ನಡ, ರಾಮನಗರ, ಬೆಂಗಳೂರು, ಮಂಡ್ಯ, ಮೈಸೂರು, ಚಾಮರಾಜನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ಅಕ್ಟೋಬರ್ 19ರವರೆಗೆ ಯೆಲ್ಲೋ ಹಾಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಅ.19ರವರೆಗೆ ಸಾಧಾರಣ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞ, ಪ್ರಾದೇಶಿಕ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ