ಮಾಜಿ ಅಧ್ಯಕ್ಷ ಕಟೀಲ್ ಸೈಡ್ ಹೊಡೆದು ಲೋಕಸಭಾ ಟಿಕೆಟ್ ಗಿಟ್ಟಿಸಿಕೊಂಡ ಕ್ಯಾಪ್ಟನ್ ಬ್ರಿಜೇಶ್ ಚೌಟ ಯಾರು?
Captain Brijesh Chowta Profile : ಕರ್ನಾಟಕ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಹಾಲಿ ಸಂಸದರೂ ಆಗಿರುವ ನಳೀನ್ ಕುಮಾರ್ ಕಟೀಲ್ ಅವರನ್ನು ಬಿಟ್ಟು ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಈ ಬಾರಿ ದಕ್ಷಿಣ ಕನ್ನಡ ಬಿಜೆಪಿ ಟಿಕೆಟ್ ನೀಡಲಾಗಿದೆ. ಅಚ್ಚರಿ ಅಭ್ಯರ್ಥಿಯನ್ನೇ ಬಿಜೆಪಿ ಹೈಕಮಾಂಡ್ ಕಣಕ್ಕಿಳಿಸಿದೆ. ಹಾಗಾದ್ರೆ, ಈ ಬ್ರಿಜೇಶ್ ಚೌಟ ಯಾರು? ಅವರ ಹಿನ್ನೆಲೆಯೇನು? ಎಂಬುದರ ವಿವರ ಈ ಕೆಳಗಿನಂತಿದೆ.
ದಕ್ಷಿಣ ಕನ್ನಡ (ಮಾ.13): ಲೋಕಸಭಾ ಚುನಾವಣೆಗೆ ಕರ್ನಾಟಕದ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದ್ದು, ಕೆಲ ಹಾಲಿ ಸಂಸದರಿಗೆ ಕೊಕ್ ನೀಡಲಾಗಿದೆ. ಇನ್ನು ಪ್ರಮುಖವಾಗಿ ರಾಜ್ಯ ಬಿಜೆಪಿಯ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರನ್ನು ಸೈಡ್ ಹೊಡೆದು ಕ್ಯಾಪ್ಟನ್ ಬ್ರಿಜೇಶ್ ಚೌಟ (Captain Brijesh Chowta) ಅವರು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ(dakshina kannada loksabha constituency) ಬಿಜೆಪಿ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಬಿಜೆಪಿ ಹೈಕಮಾಂಡ್ , ಕ್ಯಾಪ್ಟನ್ ಬ್ರಿಜೇಶ್ ಚೌಟ ಎನ್ನುವ ಹೊಸ ಮುಖಕ್ಕೆ ಮಣೆ ಹಾಕಿರುವುದು ಅಚ್ಚರಿಗೆ ಕಾರಣವಾಗಿದೆ. ಇನ್ನು ಈ ಕ್ಯಾಪ್ಟನ್ ಬ್ರಿಜೇಶ್ ಚೌಟ ಯಾರು? ಅವರ ಹಿನ್ನೆಲೆ ಏನು ಎನ್ನುವುದನ್ನು ನೋಡುವುದಾದರೆ ಅವರೊಬ್ಬ ಮಾಜಿ ಸೈನಿಕ, ವಾಣಿಜ್ಯೋದ್ಯಮಿ, ಶಿಕ್ಷಣ ತಜ್ಞ ಮತ್ತು ಆಡಳಿತ ನಿರ್ವಹಣಾ ತಜ್ಞ.
ಬ್ರಿಜೇಶ್ ಚೌಟ ಯಾರು?
ಮಂಗಳೂರಿನ ರಥಬೀದಿಯಲ್ಲಿ ನೆಲೆಸಿರುವ ಕ್ಯಾಪ್ಟನ್ ಬೃಜೇಶ್ ಚೌಟ ಕಾಲೇಜು ದಿನಗಳಲ್ಲಿಯೇ ಎನ್ ಸಿಸಿಯಲ್ಲಿ ತೊಡಗಿಕೊಂಡಿದ್ದು, ಮಂಗಳೂರು ವಿವಿಯಲ್ಲಿ ಅತ್ಯುತ್ತಮ ಕೆಡೆಟ್ ಎಂಬ ಹೆಗ್ಗಳಿಕೆ ಪಡೆದಿದ್ದರು. ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜಿನಲ್ಲಿ ವಿಜ್ಞಾನ ಪದವಿಯನ್ನು ಪಡೆದ ಅವರು ಇಂದೋರ್‌ನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಿಂದ ಆಡಳಿತ ವ್ಯವಹಾರ ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ.
ಇದನ್ನೂ ಓದಿ: ಸಂಗಣ್ಣನ್ನ ಹಿಂದಿಕ್ಕಿ ಕೊಪ್ಪಳ ಟಿಕೆಟ್ ಗಿಟ್ಟಿಸಿಕೊಂಡ ಡಾ ಬಸವರಾಜ ಯಾರು? ಟಿಕೆಟ್ ಸಿಕ್ಕಿದ್ದೇಗೆ?
ಯುಪಿಎಸ್ಸಿ ಮೂಲಕ ಡಿಫೆನ್ಸ್ ಪರೀಕ್ಷೆ ಬರೆದು ತೇರ್ಗಡೆಗೊಂಡು ಚೆನ್ನೈನಲ್ಲಿ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಭೂಸೇನೆ ಸೇರಿದ್ದರು. ಪ್ರತಿಷ್ಠಿತ ಎಂಟನೇ ಗೋರ್ಖಾ ರೈಫಲ್ಸ್ 7ನೇ ಬೆಟಾಲಿಯನ್ನಲ್ಲಿ ಉತ್ತರ ಭಾರತ ಮತ್ತು ಈಶಾನ್ಯ ರಾಜ್ಯಗಳಲ್ಲಿ ಸೇವೆ ಸಲ್ಲಿಸಿ ಕ್ಯಾಪ್ಟನ್ ಹುದ್ದೆಗೇರಿದ್ದರು.
ಬ್ರಿಜೇಶ್ ಚೌಟರ ರಾಜಕೀಯ ಜೀವನ
ಬಾಲ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕರಾಗಿ ಸಂಘದ ಪ್ರೇರಣೆಯಿಂದ ಮುಂದೆ ಭಾರತೀಯ ಸೇನೆಗೆ ಸೇರಿದ್ದ ಚೌಟರು ಸೇನಾ ನಿವೃತ್ತಿಯ ಬಳಿಕ ಮಂಗಳೂರಿಗೆ ಆಗಮಿಸಿ ಆರೆಸ್ಸೆಸ್ ನ ವಿವಿಧ ಆಯಾಮಗಳಲ್ಲಿ ತೊಡಗಿಸಿಕೊಂಡು 2013ರಲ್ಲಿ ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸಕ್ರಿಯ ರಾಜಕೀಯಕ್ಕಿಳಿದಿದ್ದರು. 2016-19ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿ ವಹಿಸಿಕೊಂಡು ಸಂಸದ ನಳಿನ್ ಕುಮಾರ್ ಜೊತೆಗೂಡಿ ಪಕ್ಷದ ಕೆಲಸ ಮಾಡಿದ್ದರು.
2019ರಲ್ಲಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಚೌಟ, 2023ರ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದ ಪ್ರಭಾರಿಯಾಗಿದ್ದರು. ಇದಲ್ಲದೆ, 2015ರಿಂದ ಕೇರಳ, ಕರ್ನಾಟಕ, ದೆಹಲಿ, ಮಹಾರಾಷ್ಟ್ರದ ಅಸೆಂಬ್ಲಿ ಚುನಾವಣೆ ಸಂದರ್ಭದಲ್ಲಿ ಪಕ್ಷದ ಪರವಾಗಿ ಕರ್ತವ್ಯ ನಿರ್ವಹಿಸಿದ್ದರು. ರಾಜ್ಯ ಬಿಜೆಪಿಯ ಚುನಾವಣಾ ಸಮಿತಿ ಭಾಗವಾಗಿರುವ ಯುವ ಸಂವಾದ ಘಟಕದಲ್ಲಿ ರಾಜ್ಯ ಸಹ ಸಂಚಾಲಕರಾಗಿ ಬೆಂಗಳೂರು ದಕ್ಷಿಣ ಸಂಸದರಾದ ತೇಜಸ್ವಿ ಸೂರ್ಯ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷರಾದ ಅಣ್ಣಮಲೈ ಅವರ ಜೊತೆ ರಾಜ್ಯಾದ್ಯಂತ ಪ್ರವಾಸ ಮಾಡಿದ್ದರು. ರಾಜ್ಯ ಬಿಜೆಪಿ ಕಾರ್ಯದರ್ಶಿಯಾಗಿರುವ ಬೃಜೇಶ್ ಚೌಟ ಬಂಟ ಸಮುದಾಯದ ಪ್ರಮುಖ ಗುತ್ತಿನ ಮನೆಗೆ ಸೇರಿದ್ದು, ಮದುವೆಯಾಗದೇ ತಮ್ಮ ಸಂಪೂರ್ಣ ಜೀವನವನ್ನು ದೇಶ ಸೇವೆಗಾಗಿ ಮುಡಿಪಾಗಿಟ್ಟಿದ್ದಾರೆ.
ಸಾಮಾಜಿಕ ಸೇವಾ ಚಟುವಟಿಕೆಯಲ್ಲಿ ಮುಂಚೂಣಿ
ಪಕ್ಷದ ಚಟುವಟಿಕೆ ಜೊತೆಗೆ ಸಮರ್ಥನ್ ಫೌಂಡೇಶನ್ ಮೂಲಕ ಮಂಗಳೂರಿನಲ್ಲಿ ಸಾಮಾಜಿಕ ಸೇವಾ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಫೌಂಡೇಶನ್ ಮೂಲಕ ತಮ್ಮದೇ ಸ್ನೇಹಿತರನ್ನು ಕಟ್ಟಿಕೊಂಡು ಸದ್ದಿಲ್ಲದೆ ಸೇವಾ ಚಟುವಟಿಕೆಯನ್ನು ನಡೆಸಿದ್ದರು. ಇದಲ್ಲದೆ, ಮೆಟ್ರೋ ಪಾಲಿಟನ್ ನಗರಗಳಲ್ಲಿ ಮಾತ್ರ ಇರುತ್ತಿದ್ದ ಲಿಟ್ ಫೆಸ್ಟ್ ಎನ್ನುವ ರಾಷ್ಟ್ರ ಮಟ್ಟದ ಸಾಹಿತ್ಯ ಕೂಟವನ್ನು ಮಂಗಳೂರಿನಲ್ಲಿ ಸಮಾನ ಮನಸ್ಕರೊಂದಿಗೆ ಸೇರಿ ಸಂಘಟಿಸಿದ್ದರು. ರಾಷ್ಟ್ರೀಯ ಮಟ್ಟದ ವಾಗ್ಮಿಗಳು, ಬೇರೆ ಬೇರೆ ಕ್ಷೇತ್ರದ ಸಾಧಕರನ್ನು ಜೊತೆಗೂಡಿಸಿ ಸಂವಾದ, ಧನಾತ್ಮಕ ಸಾಹಿತ್ಯ ಚಟುವಟಿಕೆಗೆ ವೇದಿಕೆ ಒದಗಿಸಿದ್ದಲ್ಲದೆ, 2019ರಿಂದ ಪ್ರತಿ ವರ್ಷ ಲಿಟ್ ಫೆಸ್ಟ್ ಸಂಘಟಿಸುತ್ತಿದ್ದಾರೆ, ಆ ಮೂಲಕ ಕಾಲೇಜು ವಿದ್ಯಾರ್ಥಿಗಳಿಗೆ, ಯುವ ಸಾಹಿತ್ಯ ಪ್ರಿಯರಿಗೆ ರಾಷ್ಟ್ರ ಮಟ್ಟದ ದಿಗ್ಗಜರ ಜೊತೆಗೆ ಸಂವಾದಕ್ಕೆ ವೇದಿಕೆ ಸೃಷ್ಟಿಸಿದ್ದರು.
ಕಂಬಳ ಸಂಯೋಜಕ ಬ್ರಿಜೇಶ್ ಚೌಟ
2015ರಲ್ಲಿ ಕರಾವಳಿಯ ಜನಪದ ಕ್ರೀಡೆ ಕಂಬಳ ನಿಷೇಧಕ್ಕೊಳಗಾದ ಸಂದರ್ಭದಲ್ಲಿ ಅದರ ವಿರುದ್ಧ ಹೋರಾಟ ಸಂಘಟಿಸಿದವರಲ್ಲಿ ಕ್ಯಾಪ್ಟನ್ ಬೃಜೇಶ್ ಚೌಟ ಒಬ್ಬರು. ಕಂಬಳಕ್ಕೆ ಒಂದು ಹಂತದ ಜಯ ಸಿಕ್ಕ ಬೆನ್ನಲ್ಲೇ ಮಂಗಳೂರು ನಗರದಲ್ಲಿಯೇ ಕಂಬಳ ಆಯೋಜಿಸಬೇಕೆಂದು ನಿಶ್ಚಯಿಸಿ, ಯುವ ಸ್ನೇಹಿತರ ಬಳಗವನ್ನು ಕಟ್ಟಿಕೊಂಡು ಸತತ ಏಳು ವರ್ಷಗಳಿಂದ ಕುಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿಗ ಚರ್ಚೆ ನಡೆಯುತ್ತಿರುವಾಗಲೇ ಬೃಜೇಶ್ ಚೌಟ ಹೆಸರು ಮುನ್ನೆಲೆಗೆ ಬಂದಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.