AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಿಂದ ನಕ್ಸಲರನ್ನು ವಶಕ್ಕೆ ಪಡೆದ ದಕ್ಷಿಣ ಕನ್ನಡ ಪೊಲೀಸ್: ನಕ್ಸಲ್ ಮುಕ್ತ ರಾಜ್ಯದಲ್ಲಿ ಮತ್ತೇನಿದು ಬೆಳವಣಿಗೆ!

ಕರ್ನಾಟಕ ರಾಜ್ಯ ನಕ್ಸಲ್ ಮುಕ್ತವಾಗಿದೆ ಎಂದು ಈಗಾಗಲೇ ಹೇಳಿಕೊಳ್ಳಲಾಗಿದೆ. ಇತ್ತೀಚೆಗಷ್ಟೇ ನಕ್ಸಲರ ಶರಣಾಗತಿ ಪ್ರಕ್ರಿಯೆ ನಡೆದಿತ್ತು. ಆನಂತರ, ರಾಜ್ಯದಲ್ಲಿ ನಕ್ಸಲ್ ನಿಗ್ರಹ ಪಡೆಯನ್ನು ತೆಗೆದುಹಾಕಬೇಕು, ಇನ್ನು ಅದರ ಅಗತ್ಯ ಇಲ್ಲ ಎಂಬ ಒತ್ತಾಯಗಳೂ ಕೇಳಿಬಂದಿದ್ದವು. ಆದರೆ, ಇದೀಗ ಮತ್ತೆ ನಕ್ಸಲ್ ವಿಚಾರ ಸುದ್ದಿಯಲ್ಲಿದೆ. ಯಾಕಾಗಿ? ಕಾರಣ ಏನು? ವಿವರಗಳು ಇಲ್ಲಿವೆ.

ಕೇರಳದಿಂದ ನಕ್ಸಲರನ್ನು ವಶಕ್ಕೆ ಪಡೆದ ದಕ್ಷಿಣ ಕನ್ನಡ ಪೊಲೀಸ್: ನಕ್ಸಲ್ ಮುಕ್ತ ರಾಜ್ಯದಲ್ಲಿ ಮತ್ತೇನಿದು ಬೆಳವಣಿಗೆ!
ಬಿಗಿ ಭದ್ರತೆಯಲ್ಲಿ ನಕ್ಸಲರನ್ನು ಕರೆತಂದ ಪೊಲೀಸರು
ಅಶೋಕ್​ ಪೂಜಾರಿ
| Edited By: |

Updated on:Apr 07, 2025 | 2:12 PM

Share

ಬೆಳ್ತಂಗಡಿ, ಏಪ್ರಿಲ್ 7: ಮೂರು ನಕ್ಸಲ್ (Naxal) ಚಟುವಟಿಕೆ ಪ್ರಕರಣ ದಾಖಲಾದ ಸಂಬಂಧ ಇಬ್ಬರು ನಕ್ಸಲ್ ನಾಯಕರನ್ನು ಬೆಳ್ತಂಗಡಿ (Belthangady)  ಪೊಲೀಸರು ಕೇರಳ (Kerala) ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬೆಳ್ತಂಗಡಿ ಪೊಲೀಸರು ಇಬ್ಬರು ನಕ್ಸಲರನ್ನು ಎರಡು ದಿನ ಕಸ್ಟಡಿಗೆ ಪಡೆದು ಮೂರು ಪ್ರಕರಣಗಳ ಬಗ್ಗೆ ತನಿಖೆ ನಡೆಸಲಿದ್ದಾರೆ‌. 8-11-2021 ರಂದು ಕೇರಳ ರಾಜ್ಯದ ಪೊಲೀಸರು ಮೋಸ್ಟ್ ವಾಟೆಂಡ್ ನಕ್ಸಲ್ ನಾಯಕರಾದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ನಿವಾಸಿ ಪಶ್ಚಿಮ ಘಟ್ಟದ ವಿಶೇಷ ಸಮಿತಿಯ ಕಾರ್ಯದರ್ಶಿಯಾಗಿದ್ದ ಬಿ.ಜಿ.ಕೃಷ್ಣಮೂರ್ತಿ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕಳಸ ನಿವಾಸಿ ಸಾವಿತ್ರಿಯನ್ನು ಬಂಧಿಸಿದ್ದರು. ನಂತರ ಬಂಧಿತರನ್ನು ತ್ರಿಶೂರ್ ಜೈಲಿನಲ್ಲಿರಿಸಲಾಗಿತ್ತು. ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ಬಿ.ಜಿ.ಕೃಷ್ಣಮೂರ್ತಿ ವಿರುದ್ಧ 53 ಪ್ರಕರಣ, ಸಾವಿತ್ರಿ ವಿರುದ್ಧ 22 ಪ್ರಕರಣ ತನಿಖೆಯಲ್ಲಿದೆ.

ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಮಚಂದ್ರ ಭಟ್ ಎಂಬವರ ಮನೆಯ ಅಂಗಳದಲ್ಲಿದ್ದ ಕಾರು, ಬೈಕ್​ಗೆ 2012-2013 ರಲ್ಲಿ ಬೆಂಕಿ ಹಚ್ಚಿದ ಪ್ರಕರಣ, ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ಯತಡ್ಕ ಗ್ರಾಮದಲ್ಲಿ ನಕ್ಸಲ್ ಬೆಂಬಲಿತ ಬ್ಯಾನರ್ ಹಾಕಿದ ಪ್ರಕರಣ, ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮಲವಂತಿಗೆ ಗ್ರಾಮದಲ್ಲಿ ಭಾರಿ ಸ್ಫೋಟಕ ಪತ್ತೆ ಪ್ರಕರಣದಲ್ಲಿ ಇಬ್ಬರನ್ನು ಬಾಡಿ ವಾರೆಂಟ್ ಮೂಲಕ ಕೇರಳ ರಾಜ್ಯದ ತ್ರಿಶೂರ್ ಜೈಲಿನಿಂದ ಭದ್ರತೆಯಲ್ಲಿ ಕರೆದುಕೊಂಡು ಬಂದಿದ್ದಾರೆ.

ಕೇರಳ ರಾಜ್ಯದಿಂದ ಅಲ್ಲಿನ ಪೊಲೀಸರು ಬಿಗಿ ಭದ್ರತೆಯಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಬಳಿಕ ತನಿಖಾಧಿಕಾರಿ ಬಂಟ್ವಾಳ ಡಿವೈಎಸ್ಪಿ ವಿಜಯ ಪ್ರಸಾದ್ ಅವರ ತಂಡಕ್ಕೆ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲು ಇಬ್ಬರು ನಕ್ಸಲರನ್ನು ಒಪ್ಪಿಸಿದೆ. ಬೆಳ್ತಂಗಡಿ, ವೇಣೂರು, ಧರ್ಮಸ್ಥಳ , ಪುಂಜಾಲಕಟ್ಟೆ ಪೊಲೀಸರು ಭದ್ರತೆ ನೀಡಿದ್ದಾರೆ.

ಇದನ್ನೂ ಓದಿ
Image
ಸೆಕೆಂಡ್ ಪಿಯುಸಿ ಫಲಿತಾಂಶ ಇಂದು, ನೀವು ತಿಳಿಯಲೇಬೇಕಾದ ವಿಚಾರಗಳು ಇಲ್ಲಿವೆ
Image
ನಗ್ನ ವಿಡಿಯೋ ಕರೆ ಮಾಡುವಂತೆ ಒತ್ತಾಯ, ಅನ್ಯ ಕೋಮಿನ ಯುವಕನಿಗೆ ಬಿತ್ತು ಗೂಸಾ
Image
ಬೆಂಗಳೂರಿನಲ್ಲಿ ಚಿಕೂನ್ ಗುನ್ಯಾ, ಡೆಂಗ್ಯೂ ಹೆಚ್ಚಳ: ವಾರದಲ್ಲಿ 100 ಕೇಸ್
Image
ವಿಧಾನಸೌಧದ ಶಾಶ್ವತ ವರ್ಣರಂಜಿತ ದೀಪಾಲಂಕಾರ ನೋಡಿ

ಇದನ್ನೂ ಓದಿ: ಸಶಸ್ತ್ರ ಹೋರಾಟಕ್ಕೆ ಧುಮುಕಿದ್ಯಾಕೆ? ಶರಣಾಗುತ್ತಿರುವ 6 ನಕ್ಸಲರ ಬಗ್ಗೆ ಒಂದಿಷ್ಟು ಮಾಹಿತಿ

ತಲೆಮರೆಸಿಕೊಂಡಿದ್ದ 6 ನಕ್ಸಲರು ಶಸ್ತ್ರಾಸ್ತ್ರ ತೊರೆದು ಮುಖ್ಯವಾಹಿನಿಗೆ ಬರಲು ಜನವರಿಯಲ್ಲಿ ಸಮ್ಮತಿಸಿದ್ದರು. ಅದರಂತೆ ಶರಣಾಗತಿ ಪ್ರಕ್ರಿಯೆಯೂ ನಡೆದಿತ್ತು. ಶೃಂಗೇರಿ ತಾಲೂಕಿನ ಮುಂಡುಗಾರು ಗ್ರಾಮದ ಲತಾ, ಕಳಸ ತಾಲೂಕಿನ ಬಾಳೆಹೊಳೆ ಗ್ರಾಮದ ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆ ಕುಂತಲೂರು ಮೂಲಕದ ಸುಂದರಿ, ರಾಯಚೂರು ಮೂಲದ ಮಾರಪ್ಪ ಅರೋಳಿ, ವಸಂತ, ಎನ್.ಜೀಶಾ ಶರಣಾಗಿದ್ದರು. ನಂತರ ಕರ್ನಾಟಕ ನಕ್ಸಲ್ ಮುಕ್ತ ರಾಜ್ಯ ಎಂದು ಘೋಷಿಸಲಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:04 pm, Mon, 7 April 25

Follow Us
ಅಶೋಕ್​ ಪೂಜಾರಿ
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ