Mangaluru: ಹಿಂದೂ ರಾಷ್ಟ್ರ ಅಭಿಯಾನದ ವಿರುದ್ಧ ಕ್ರಮಕ್ಕೆ ಎಸ್​​ಡಿಪಿಐ ಆಗ್ರಹ

‘ಹಿಂದೂ ರಾಷ್ಟ್ರ ಜಾಗೃತಿ ಅಭಿಯಾನ’ದ ಮೂಲಕ ಬಲಪಂಥೀಯ ಹಿಂದೂ ಸಂಘಟನೆ ‘ಹಿಂದೂ ಜಾಗೃತಿ ಸಮಿತಿ’ಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಕದಡಲು ಯತ್ನಿಸುತ್ತಿದೆ. ಈ ಅಭಿಯಾನವು ಸಂವಿಧಾನಕ್ಕೆ ವಿರುದ್ಧವಾಗಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪೊಲೀಸರನ್ನು ಆಗ್ರಹಿಸಿದೆ.

Mangaluru: ಹಿಂದೂ ರಾಷ್ಟ್ರ ಅಭಿಯಾನದ ವಿರುದ್ಧ ಕ್ರಮಕ್ಕೆ ಎಸ್​​ಡಿಪಿಐ ಆಗ್ರಹ
ಮಂಗಳೂರಿನಲ್ಲಿ ‘ಹಿಂದೂ ಜಾಗೃತಿ ಸಮಿತಿ’ ಹಾಕಿರುವ ಬ್ಯಾನರ್
Follow us
Ganapathi Sharma
|

Updated on: Mar 08, 2023 | 5:04 PM

ಮಂಗಳೂರು: ‘ಹಿಂದೂ ರಾಷ್ಟ್ರ ಜಾಗೃತಿ ಅಭಿಯಾನ’ದ (Hindu Rashtra Awareness Campaign) ಮೂಲಕ ಬಲಪಂಥೀಯ ಹಿಂದೂ ಸಂಘಟನೆ ‘ಹಿಂದೂ ಜಾಗೃತಿ ಸಮಿತಿ’ಯು (Hindu Janajagruti Samiti) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಕದಡಲು ಯತ್ನಿಸುತ್ತಿದೆ. ಈ ಅಭಿಯಾನವು ಸಂವಿಧಾನಕ್ಕೆ ವಿರುದ್ಧವಾಗಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪೊಲೀಸರನ್ನು ಆಗ್ರಹಿಸಿದೆ. ಮಾರ್ಚ್​​ 5ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ‘ಹಿಂದೂ ರಾಷ್ಟ್ರ ಜಾಗೃತಿ ಅಭಿಯಾನ’ದ ಕಾರ್ಯಕ್ರಮ ನಡೆಸಲಾಗಿದ್ದು, ದ್ವೇಷ ಭಾಷಣ ಮಾಡಲಾಗಿದೆ ಎಂದು ಎಸ್​​ಡಿಪಿಐ ಆರೋಪಿಸಿದೆ. ಸನಾತನ ಸಂಸ್ಥೆಯು ಧರ್ಮಗಳ ನಡುವೆ ದ್ವೇಷ ಬಿತ್ತುತ್ತಿದೆ. ಭಾರತವು ಜಾತ್ಯತೀತ ದೇಶ. ಇದನ್ನು ಹಿಂದೂ ರಾಷ್ಟ್ರವನ್ನಾಗಿ ಪರಿವರ್ತಿಸುತ್ತೇವೆ ಎನ್ನುವುದು ಸಂವಿಧಾನಕ್ಕೆ ವಿರುದ್ಧವಾದದ್ದು ಹಾಗೂ ಕಾನೂನುಬಾಹಿರ ಎಂದು ಎಸ್​ಡಿಪಿಐ ನಾಯಕ ರಿಯಾಜ್ ಫರಂಗಿಪೇಟೆ ಹೇಳಿದ್ದಾರೆ.

ಬಲಪಂಥೀಯ ಸಂಘಟನೆ ಮತ್ತು ಅದರ ನಾಯಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದಕ್ಷಿಣ ಕನ್ನಡ ಜಿಲ್ಲಾಡಳಿತವನ್ನು ಮತ್ತು ಪೊಲೀಸರನ್ನು ಒತ್ತಾಯಿಸುತ್ತೇವೆ. ಇದೊಂದು ಸೂಕ್ಷ್ಮ ವಿಷಯವಾದದ್ದರಿಂದ ರಾಷ್ಟ್ರೀಯ ತನಿಖಾ ದಳ (NIA) ಈ ಬಗ್ಗೆ ಗಮನಹರಿಸಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಕ್ರಮ ಕೈಗೊಳ್ಳಬೇಕು ಎಂಬುದಾಗಿ ಆಗ್ರಹಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಮಾರ್ಚ್​ 12ರಂದು ಕದ್ರಿಯಲ್ಲಿ ‘ಹಿಂದೂ ರಾಷ್ಟ್ರ ಜಾಗೃತಿ ಅಭಿಯಾನ’ ಕಾರ್ಯಕ್ರಮ ನಡೆಯಲಿದೆ ಎಂಬ ಬಗ್ಗೆ ಹಿಂದೂ ಜಾಗೃತಿ ಸಮಿತಿಯು ಮಂಗಳೂರಿನಲ್ಲಿ ಪೋಸ್ಟರ್​​ಗಳನ್ನೂ ಪ್ರಕಟಿಸಿದೆ ಎಂದೂ ಅವರು ಹೇಳಿದ್ದಾರೆ.

ಇದನ್ನೂ ಓದಿ: NIA Raid: ಬಿಹಾರದಲ್ಲಿ ಪಿಎಫ್​​ಐ ಚಟುವಟಿಕೆ; ದಕ್ಷಿಣ ಕನ್ನಡ, ಕಾಸರಗೋಡಿನಲ್ಲಿ ಐವರು ಪಿಎಫ್​ಐ ಕಾರ್ಯಕರ್ತರ ಬಂಧಿಸಿದ ಎನ್​ಐಎ

ಪ್ರಧಾನಿ ನರೇಂದ್ರ ಮೋದಿಯವರು ಬಿಹಾರದಲ್ಲಿ ಪಾಲ್ಗೊಂಡ ಕಾರ್ಯಕ್ರಮದಲ್ಲಿ ಅಶಾಂತಿ ಸೃಷ್ಟಿಸಲು ಸಂಚು ಹೂಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಯಾಜ್ ಫರಂಗಿಪೇಟೆ ಅವರನ್ನೂ ಎನ್​ಐಎ ಅಧಿಕಾರಿಗಳು ಇತ್ತೀಚೆಗೆ ತನಿಖೆಗೆ ಒಳಪಡಿಸಿದ್ದರು.

ಬಿಹಾರದಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಎರಡು ದಿನ ಹಿಂದಷ್ಟೇ ಕೇರಳದ ಕಾಸರಗೋಡು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ದಾಳಿ, ಶೋಧ ನಡೆಸಿದ್ದ ಎನ್​ಐಎ ಅಧಿಕಾರಿಗಳು ಐವರನ್ನು ಮಂಗಳವಾರ ಬಂಧಿಸಿದ್ದರು. ಇದರ ಬೆನ್ನಲ್ಲೇ, ಹಿಂದೂ ಜಾಗೃತಿ ಸಮಿತಿಯವರ ಅಭಿಯಾನಕ್ಕೆ ಸಂಬಂಧಿಸಿ ಎಸ್​ಡಿಪಿಐ ಧ್ವನಿಯೆತ್ತಿದೆ.

ಬಿಹಾರದ ಪುಲ್ವಾರಿಶರೀಫ್ ಮತ್ತು ಮೋತಿಹರಿಯಲ್ಲಿ ಪಿಎಫ್​ಐ ಚಟುವಟಿಕೆ ಸಕ್ರಿಯವಾಗಿರುವುದನ್ನು ಗಮನಿಸಲಾಗಿತ್ತು. ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ನಿರ್ದಿಷ್ಟ ಸಮುದಾಯದ ಯುವಕರ ಹತ್ಯೆಗೆ ಇತ್ತೀಚೆಗೆ ಬಂದೂಕು ಮತ್ತು ಮದ್ದುಗುಂಡುಗಳನ್ನು ಸಂಗ್ರಹಿಸಲಾಗಿತ್ತು. ಇವುಗಳ ಜಾಡು ಹಿಡಿದು ದಕ್ಷಿಣ ಕನ್ನಡ ಮತ್ತು ಕಾಸರಗೋಡಿನಲ್ಲಿ ದಾಳಿ ನಡೆಸಲಾಗಿತ್ತು ಎಂದು ಎನ್​ಐಎ ತಿಳಿಸಿದೆ. ಕಾಸರಗೋಡು, ದಕ್ಷಿಣ ಕನ್ನಡದಿಂದ ಬಂಧಿತರಾದವರು ಪಿಎಫ್​ಐ ಸಂಚಿನಲ್ಲಿ ಶಾಮೀಲಾದ ಆರೋಪ ಎದುರಿಸುತ್ತಿದ್ದಾರೆ. ವಿದೇಶಗಳಿಂದ ನಿಧಿ ಪಡೆದು ಸಂಘಟನೆಯ ನಾಯಕರಿಗೆ ಹಂಚಿದ ಆರೋಪ ಅವರ ಮೇಲಿದೆ ಎಂದೂ ಎನ್​ಐಎ ಪ್ರಕಟಣೆ ತಿಳಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್