AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನ ಉರೂಸ್​ ಕಾರ್ಯಕ್ರಮದಲ್ಲಿ ನೂಕುನುಗ್ಗಲು: ಹಲವರು ಅಸ್ವಸ್ಥ

ಕಡಬ ತಾಲೂಕಿನ ಕಾಣಿಯೂರಿನ ಕೂರತ್ ತಂಙಳ್ ಉರೂಸ್‌ ಕಾರ್ಯಕ್ರಮದಲ್ಲಿ ಭಾರಿ ಜನಜಂಗುಳಿಗೆ ಹಲವರು ಅಸ್ವಸ್ಥರಾಗಿದ್ದಾರೆ. ಅಪಾರ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರಿಂದ ನೂಕುನುಗ್ಗಲು ಉಂಟಾಗಿ ಉಸಿರಾಟದ ತೊಂದರೆಯಾಗಿದೆ. ಅಸ್ವಸ್ಥಗೊಂಡರವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು-ಕುಕ್ಕೆ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯು ಸಂಪೂರ್ಣ ಬಂದ್ ಆಗಿದೆ. ಹಲವರು ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ.

ಮಂಗಳೂರಿನ ಉರೂಸ್​ ಕಾರ್ಯಕ್ರಮದಲ್ಲಿ ನೂಕುನುಗ್ಗಲು: ಹಲವರು ಅಸ್ವಸ್ಥ
ಮಂಗಳೂರು ಉರೂಸ್​ ಕಾರ್ಯಕ್ರಮ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: ವಿವೇಕ ಬಿರಾದಾರ|

Updated on:Jun 29, 2025 | 10:29 PM

Share

ಮಂಗಳೂರು, ಜೂನ್​ 29: ಮಸೀದಿಯ ಉರೂಸ್ (Urus) ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿ ಹಲವರು ಅಸ್ವಸ್ಥಗೊಂಡಿರುವ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಕಡಬ (Kadaba) ತಾಲೂಕಿನ ಕಾಣಿಯೂರಿನ ಕೂರತ್ ತಂಙಳ್ ಉರೂಸ್ ಕಾರ್ಯಕ್ರಮದಲ್ಲಿ ನಡೆದಿದೆ. ಅಸ್ವಸ್ಥಗೊಂಡವರನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜೂನ್ 26ರಿಂದ 29ರವರೆಗೆ ಕಡಬ ತಾಲೂಕಿನ ಕಾಣಿಯೂರಿನ ಕೂರತ್ ತಂಙಳ್ ಉರೂಸ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಉರೂಸ್ ಮುಬಾರಕ್‌ನ ಕೊನೆಯ ದಿನವಾದ ಭಾನುವಾರ ನಿರೀಕ್ಷೆಗೂ ಮೀರಿ ಜನರು ಸೇರಿದ್ದರು.

ಇಂದು (ಜೂ.29) ಅನ್ನದಾನ ಕಾರ್ಯಕ್ರಮಕ್ಕೆ ಸುಮಾರು 30-40 ಸಾವಿರ ಭಕ್ತರು ಆಗಮಿಸುವ ನಿರೀಕ್ಷೆಯಿತ್ತು. ಆದರೆ, ರಾಜ್ಯದ ವಿವಿಧ ಭಾಗಗಳಿಂದ ಒಂದು ಲಕ್ಷಕ್ಕೂ ಅಧಿಕ ಮಂದಿ ಆಗಮಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ನಿರೀಕ್ಷೆಗೂ ಮೀರಿ ಜನರು ಸೇರಿದ್ದರಿಂದ ನೂಕುನುಗ್ಗಲಾಗಿದೆ. ಇದರಿಂದ ಉಸಿರಾಟದ ತೊಂದರೆಯಾಗಿ ಹಲವರು ಅಸ್ವಸ್ಥಗೊಂಡಿದ್ದಾರೆ. ಸದ್ಯ ಹಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ
Image
ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಕೇಸ್ ತನಿಖೆ ಚುರುಕು: ಆರೋಪಿಗಳು NIA ವಶಕ್ಕೆ
Image
ಸುಹಾಸ್ ಶೆಟ್ಟಿ ಕೊಲೆ ಆರೋಪಿ ಮೇಲೆ ಜೈಲಲ್ಲೇ ಸಹ ಕೈದಿಗಳಿಂದ ಅಟ್ಯಾಕ್‌
Image
ಸುಹಾಸ್​ ಕೊಲೆಯ ಪ್ರತೀಕಾರಕ್ಕೆ ಹಿಂದೂ ಸಮಾಜ ಕಾದು ಕೂತಿದೆ: ಭಜರಂಗದಳ ಮುಖಂಡ
Image
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳ ಬಂಧನ

ಇದನ್ನೂ ಓದಿ: ಸುಹಾಸ್​ ಶೆಟ್ಟಿ ಹತ್ಯೆ ಆರೋಪಿಗಳಿಗೆ PFI ನಂಟು: ಕೊಲೆಗೆ ವಿದೇಶದಿಂದ ಹಣದ ನೆರವು..!

ಭಾರೀ ಜನಸ್ತೋಮದಿಂದಾಗಿ ಪುತ್ತೂರು-ಕುಕ್ಕೆ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಸಂಪೂರ್ಣ ಬಂದ್ ಆಗಿ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:26 pm, Sun, 29 June 25

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್