ಮಂಗಳೂರಿನ ಮೋತಿ ಮಹಲ್ ಹೋಟೆಲ್​ ಸ್ವಿಮ್ಮಿಂಗ್ ಪೂಲ್​ನಲ್ಲಿ ಕೇರಳ ಬ್ಯಾಂಕ್‌ ಅಧಿಕಾರಿ ಮೃತದೇಹ ಪತ್ತೆ

ಯೂನಿಯನ್ ಬ್ಯಾಂಕ್ ಅಧಿಕಾರಿಯಾದ ಗೋಪು ಆರ್ ನಾಯರ್ ಅವರು ನಿನ್ನೆ ಭಾನುವಾರ ಮಂಗಳೂರಿಗೆ ಬಂದು ಮೋತಿ ಮಹಲ್ ಹೊಟೇಲ್ ನಲ್ಲಿ ಉಳಿದು ಕೊಂಡಿದ್ದರು. ಬ್ಯಾಂಕ್ ಅಧಿಕಾರಿ ನಿನ್ನೆ ಸಂಜೆ 4 ಗಂಟೆ ವೇಳೆ ಹೊಟೇಲ್ ರೂಮ್ ನಿಂದ ಹೊರ ಹೋಗಿದ್ದರು. ಸ್ಥಳಕ್ಕೆ ಪಾಂಡೇಶ್ವರ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಮಂಗಳೂರಿನ  ಮೋತಿ ಮಹಲ್ ಹೋಟೆಲ್​ ಸ್ವಿಮ್ಮಿಂಗ್ ಪೂಲ್​ನಲ್ಲಿ ಕೇರಳ ಬ್ಯಾಂಕ್‌ ಅಧಿಕಾರಿ ಮೃತದೇಹ ಪತ್ತೆ
ಮಂಗಳೂರಿನ ಪ್ರತಿಷ್ಠಿತ ಹೋಟೆಲ್​ ಸ್ವಿಮ್ಮಿಂಗ್ ಪೂಲ್ ನಲ್ಲಿ ಬ್ಯಾಂಕ್‌ ಅಧಿಕಾರಿ ಮೃತ ದೇಹ
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: ಸಾಧು ಶ್ರೀನಾಥ್​

Updated on:Sep 11, 2023 | 10:18 AM

ಮಂಗಳೂರು, ಸೆಪ್ಟೆಂಬರ್​ 11: ಕರಾವಳಿ ನಗರಿಯ ಪ್ರತಿಷ್ಠಿತ ಹೊಟೇಲ್ ನ ಈಜು ಕೊಳದಲ್ಲಿ ಮೃತ ದೇಹ (Dead body) ಪತ್ತೆಯಾಗಿದೆ. ಮಂಗಳೂರಿನ (Mangalore) ಪ್ರತಿಷ್ಠಿತ ಮೋತಿ ಮಹಲ್ ಹೊಟೇಲ್ ಸ್ವಿಮ್ಮಿಂಗ್ ಪೂಲ್ ನಲ್ಲಿ (Swimming Pool) ಮುಳುಗಿ‌ ಬ್ಯಾಂಕ್‌ ಅಧಿಕಾರಿ ಸಾವಿಗೀಡಾಗಿದ್ದಾರೆ. ಮೃತ ವ್ಯಕ್ತಿ ಕೇರಳದ ತಿರುವನಂತಪುರಂ ನಿವಾಸಿ ಗೋಪು ಆರ್ ನಾಯರ್ ಎಂದು ತಿಳಿದುಬಂದಿದೆ.

ಯೂನಿಯನ್ ಬ್ಯಾಂಕ್ ಅಧಿಕಾರಿಯಾದ ಗೋಪು ಆರ್ ನಾಯರ್ ಅವರು ನಿನ್ನೆ ಭಾನುವಾರ ಮಂಗಳೂರಿಗೆ ಬಂದು ಮೋತಿ ಮಹಲ್ ಹೊಟೇಲ್ ನಲ್ಲಿ ಉಳಿದು ಕೊಂಡಿದ್ದರು. ಬ್ಯಾಂಕ್ ಅಧಿಕಾರಿ ನಿನ್ನೆ ಸಂಜೆ 4 ಗಂಟೆ ವೇಳೆ ಹೊಟೇಲ್ ರೂಮ್ ನಿಂದ ಹೊರ ಹೋಗಿದ್ದರು. ಸ್ಥಳಕ್ಕೆ ಪಾಂಡೇಶ್ವರ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Also Read:  ರಾಯಚೂರು ನಗರಸಭೆಯಲ್ಲಿನ ಲಂಚಾವತಾರ ಬಯಲು ಮಾಡಿದ ಸಾರ್ವಜನಿಕರು, ವಿಡಿಯೋ ವೈರಲ್

ಬ್ಯಾಂಕ್‌ ಅಧಿಕಾರಿ ಮದ್ಯ ಸೇವಿಸಿ ಸ್ವಿಮ್ಮಿಂಗ್?

ಹೊಟೇಲ್ ನ ಈಜುಕೊಳದಲ್ಲಿ ಮೃತದೇಹ ಪತ್ತೆಯಾಗಿದ್ದು, 11 ಅಡಿ ಆಳದಲ್ಲಿದ್ದ ಗೋಪು ಆರ್ ನಾಯರ್ ಮೃತದೇಹವನ್ನು ಮುಳುಗು ತಜ್ಞರು ಹೊರತೆಗೆದಿದ್ದಾರೆ. ಈಜುತ್ತಿರುವಾಗ ಮೇಲೆ ಬರಲು ಸಾಧ್ಯವಾಗದೆ ಮುಳುಗಿರುವ ಶಂಕೆ ವ್ಯಕ್ತವಾಗಿದೆ. ಹೊಟೇಲ್ ರೂಂನಲ್ಲಿ ಮದ್ಯ ಸೇವಿಸಿ ಸ್ವಿಮ್ಮಿಂಗ್ ಫೂಲ್ ಗೆ ಇಳಿದಿರುವ ಅನುಮಾನವಿದೆ. ರೂಮ್ ನಲ್ಲಿ ಖಾಲಿಯಾದ ಮದ್ಯ ಬಾಟಲಿ, ಫುಡ್ ಪತ್ತೆಯಾಗಿದೆ.

ಭೀಮನಕಟ್ಟೆ ಬಳಿ ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಬೆಂಗಳೂರು ಮೂಲದ ಇಬ್ಬರು ನೀರುಪಾಲು:

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಭೀಮನಕಟ್ಟೆ ಗ್ರಾಮದ ಬಳಿ ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ನೀರುಪಾಲಾದ ಘಟನೆ ನಡೆದಿದೆ.

ಬೆಂಗಳೂರು ಮೂಲದ ಗೌತಮ್ (26), ಸುಜಯ್ (28) ನೀರು‌ ಪಾಲಾದ ಯುವಕರು. ಈ ಯುವಕರಿಬ್ಬರೂ ತೀರ್ಥಹಳ್ಳಿ ಭಾಗಕ್ಕೆ ಪ್ರವಾಸಕ್ಕೆ ಬಂದಿದ್ದರು. ನಿನ್ನೆ ಭಾನುವಾರ ಸಂಜೆ ನದಿಯಲ್ಲಿ ಈಜಲು ತೆರಳಿದ್ದಾಗ ಘಟನೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಈಜುಗಾರರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೌತಮ್ (26) ಮೃತದೇಹ ಪತ್ತೆಯಾಗಿದೆ. ಮತ್ತೊಬ್ಬ ಯುವಕ ಸುಜಯ್ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿದಿದೆ. ಆಗುಂಬೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:03 am, Mon, 11 September 23

ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
Video: ಕಜಾಕಿಸ್ತಾನದಲ್ಲಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ
Video: ಕಜಾಕಿಸ್ತಾನದಲ್ಲಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ
ಮ್ಯಾಕ್ಸ್ ಸಿನಿಮಾ ಬಗ್ಗೆ ಪ್ರಾಮಾಣಿಕ ವಿಮರ್ಶೆ ತಿಳಿಸಿದ ಯಶ್ ಅಭಿಮಾನಿಗಳು
ಮ್ಯಾಕ್ಸ್ ಸಿನಿಮಾ ಬಗ್ಗೆ ಪ್ರಾಮಾಣಿಕ ವಿಮರ್ಶೆ ತಿಳಿಸಿದ ಯಶ್ ಅಭಿಮಾನಿಗಳು