ಬೆಂಗಳೂರು ಸೇರಿ ಹಲವೆಡೆ ಡೆಂಗ್ಯೂ ಪ್ರಕರಣ ಹೆಚ್ಚಳ; ದಕ್ಷಿಣ ಕನ್ನಡದಲ್ಲಿ ಕಟ್ಟೆಚ್ಚರ

ದಕ್ಷಿಣ ಕನ್ನಡ-ಬೆಂಗಳೂರು ನಡುವೆ ನಿತ್ಯ ನೂರಾರು ಜನರು ಪ್ರಯಾಣಿಸುತ್ತಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾ ರೋಗ ನಿಯಂತ್ರಣ ಕಾರ್ಯಕ್ರಮ ಅಧಿಕಾರಿ ಡಾ. ನವೀನಚಂದ್ರ ಕುಲಾಲ್ ಮನವಿ ಮಾಡಿದ್ದಾರೆ.

ಬೆಂಗಳೂರು ಸೇರಿ ಹಲವೆಡೆ ಡೆಂಗ್ಯೂ ಪ್ರಕರಣ ಹೆಚ್ಚಳ; ದಕ್ಷಿಣ ಕನ್ನಡದಲ್ಲಿ ಕಟ್ಟೆಚ್ಚರ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Jun 27, 2023 | 7:48 PM

ಮಂಗಳೂರು: ಕರ್ನಾಟಕ ರಾಜಧಾನಿ ಬೆಂಗಳೂರು ಹಾಗೂ ಇತರ ಕೆಲವು ನಗರಗಳಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಡೆಂಗ್ಯೂ ಪ್ರಕರಣಗಳು (Dengue cases) ಹೆಚ್ಚಾಗಿದ್ದು, ದಕ್ಷಿಣ ಕನ್ನಡ ಆರೋಗ್ಯ ಇಲಾಖೆ ಈಗಾಗಲೇ ಮುನ್ನೆಚ್ಚರಿಕೆ ವಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಕನ್ನಡ-ಬೆಂಗಳೂರು ನಡುವೆ ನಿತ್ಯ ನೂರಾರು ಜನರು ಪ್ರಯಾಣಿಸುತ್ತಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾ ರೋಗ ನಿಯಂತ್ರಣ ಕಾರ್ಯಕ್ರಮ ಅಧಿಕಾರಿ ಡಾ. ನವೀನಚಂದ್ರ ಕುಲಾಲ್ ಮನವಿ ಮಾಡಿದ್ದಾರೆ.

ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರೆಸ್​​ಕ್ಲಬ್​ನಲ್ಲಿ ಆಯೋಜಿಸಿದ್ದ ಸಂವಾದದಲ್ಲಿ ಡಾ. ಕುಲಾಲ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ಪಾಲ್ಗೊಂಡಿದ್ದಾರೆ. ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದು, ಡೆಂಗ್ಯೂ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಡಾ. ಕಿಶೋರ್ ಹೇಳಿದ್ದಾರೆ.

ಜಿಲ್ಲೆಯಲ್ಲಿ ಸೊಳ್ಳೆಗಳ ಹಾವಳಿ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯೊಂದಿಗೆ ಜನತೆ ಕೈಜೋಡಿಸಬೇಕು ಎಂದು ಡಾ. ಕುಲಾಲ್ ಕರೆ ನೀಡಿದ್ದಾರೆ.

ಒಟ್ಟಾರೆ ಜಿಲ್ಲೆಯಲ್ಲಿ ಡೆಂಗ್ಯೂ ಮತ್ತು ಮಲೇರಿಯಾ ಪ್ರಕರಣಗಳಲ್ಲಿ ಕುಸಿತ ದಾಖಲಾಗುತ್ತಿದೆ. ಜಿಲ್ಲೆಯಲ್ಲಿ ಈ ವರ್ಷ 56 ಡೆಂಗ್ಯೂ ಪ್ರಕರಣಗಳು ಹಾಗೂ 24 ಮಲೇರಿಯಾ ಪ್ರಕರಣಗಳು ವರದಿಯಾಗಿವೆ. ಇದುವರೆಗೆ ಯಾವುದೇ ಚಿಕೂನ್ ಗುನ್ಯಾ ಪ್ರಕರಣಗಳು ವರದಿಯಾಗಿಲ್ಲ. ಜಿಲ್ಲೆಯಲ್ಲಿ 2019 ರಲ್ಲಿ 1,539, 2020 ರಲ್ಲಿ 239, 2021 ರಲ್ಲಿ 295 ಮತ್ತು 2022 ರಲ್ಲಿ 388 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. 2019 ರಲ್ಲಿ 2,797 ಮಲೇರಿಯಾ ಪ್ರಕರಣಗಳು ವರದಿಯಾಗಿವೆ, ಮತ್ತು 2019 ರಲ್ಲಿ ಇದು 1,397 ಕ್ಕೆ ಇಳಿದಿದ್ದು, 2019 ರಲ್ಲಿ 1817 ಪ್ರಕರಣಗಳು ವರದಿಯಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: National Dengue Day 2022: ಡೆಂಗ್ಯೂ ರೋಗದ ಲಕ್ಷಣ, ಚಿಕಿತ್ಸೆ, ಮುನ್ನೆಚ್ಚರಿಕಾ ಕ್ರಮಗಳೇನು?

ವಿವಿಧ ಇಲಾಖೆಗಳ ಸಮನ್ವಯ, ಸಾರ್ವಜನಿಕ ಸಹಭಾಗಿತ್ವದಿಂದ ಜಿಲ್ಲೆಯಲ್ಲಿ ಮಲೇರಿಯಾ ಪ್ರಕರಣಗಳು ಇಳಿಮುಖವಾಗಿದೆ. ಹಾಗೆಂದು, ಜನರು ಮತ್ತು ಅಧಿಕಾರಿಗಳು ಮೈಮರೆಯುವಂತಿಲ್ಲ ಎಂದು ಡಾ. ಕುಮಾರ್ ಹೇಳಿದ್ದಾರೆ.

ಟೈಫಾಯ್ಡ್ ಪ್ರಕರಣಗಳೆಷ್ಟು?

ದಕ್ಷಿಣ ಕನ್ನಡದಲ್ಲಿ ಈವರೆಗೆ 23 ಟೈಫಾಯಿಡ್ ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯಲ್ಲಿ ವರದಿಯಾಗಿರುವ ಟೈಫಾಯಿಡ್ ಪ್ರಕರಣಗಳ ವಿವರ ನೀಡುವಂತೆ ಎಲ್ಲ ಆಸ್ಪತ್ರೆಗಳಿಗೆ ಸೂಚನೆ ನೀಡಲಾಗಿದೆ. ಟೈಫಾಯಿಡ್ ಜ್ವರವು ಕಲುಷಿತ ನೀರು ಅಥವಾ ಆಹಾರ ಸೇವನೆಯಿಂದ ಹರಡುವ ಕಾಯಿಲೆಯಾಗಿದೆ. ಕುಡುಪು, ಪಡೀಲ್, ಸಜಿಪ, ಉಳ್ಳಾಲ ಭಾಗದಲ್ಲಿ ಪ್ರಕರಣಗಳು ವರದಿಯಾಗಿವೆ. ಎಲ್ಲಾ ರೋಗಿಗಳು ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಅವರ ಸ್ಥಿತಿ ಸ್ಥಿರವಾಗಿದೆ ಎಂದು ಡಾ. ಕುಮಾರ್ ಮಾಹಿತಿ ನೀಡಿದ್ದಾರೆ.

ಮಂಗಳೂರಿನ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್