Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಮತ್ತೊಬ್ಬ ಹಿಂದೂ ಕಾರ್ಯಕರ್ತನಿಗೆ ಗಡಿಪಾರು ನೋಟಿಸ್

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ಕರಾವಳಿಯ ಹಿಂದೂ ಕಾರ್ಯಕರ್ತರ ವಿರುದ್ಧ ಪೊಲೀಸರು ಗಡಿಪಾರು ಅಸ್ತ್ರ ಪ್ರಯೋಗಿಸುತ್ತಲೇ ಇದೆ. ತಿಂಗಳ ಹಿಂದೆಯಷ್ಟೇ ಐವರು ಹಿಂದೂ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ಜಾರಿ ಮಾಡಿದ್ದ ಪುತ್ತೂರು ಪೊಲೀಸರು, ಇದೀಗ ಮತ್ತೊಬ್ಬ ಕಾರ್ಯಕರ್ತನಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಮಂಗಳೂರು: ಮತ್ತೊಬ್ಬ ಹಿಂದೂ ಕಾರ್ಯಕರ್ತನಿಗೆ ಗಡಿಪಾರು ನೋಟಿಸ್
ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತನಿಗೆ ಗಡಿಪಾರು ನೋಟಿಸ್ ಜಾರಿ ಮಾಡಿದ ಪುತ್ತೂರು ಪೊಲೀಸರು
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: Rakesh Nayak Manchi

Updated on: Dec 16, 2023 | 3:01 PM

ಮಂಗಳೂರು, ಡಿ.16: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ಕರಾವಳಿಯ ಹಿಂದೂ ಕಾರ್ಯಕರ್ತರ ವಿರುದ್ಧ ಪೊಲೀಸರು ಗಡಿಪಾರು ಅಸ್ತ್ರ ಪ್ರಯೋಗಿಸುತ್ತಲೇ ಇದೆ. ತಿಂಗಳ ಹಿಂದೆಯಷ್ಟೇ ಐವರು ಹಿಂದೂ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ಜಾರಿ ಮಾಡಿದ್ದ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರು ಪೊಲೀಸರು, ಇದೀಗ ಮತ್ತೊಬ್ಬ ಕಾರ್ಯಕರ್ತನಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ನಿಮ್ಮನ್ನು ಯಾಕೆ ಗಡಿಪಾರು ಮಾಡಬಾರದು ಎಂದು ಕಾರಣ ಕೇಳಿ ಪುತ್ತೂರು ತಾಲೂಕಿನ ನೆಟ್ಟಣಿಗೆ ನಿವಾಸಿಯಾಗಿರುವ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತ ಪ್ರವೀಶ್ ಕುಮಾರ್ ನಾಯರ್ ಎಂಬಾತನಿಗೆ ಪುತ್ತೂರು ಸಹಾಯಕ ಆಯುಕ್ತರು ನೋಟಿಸ್ ಜಾರಿ ಮಾಡಿದ್ದಾರೆ.

ಇದನ್ನೂ ಓದಿ: ಮಂಗಳೂರು: ಕಾರ್ಯಕರ್ತರ ಗಡಿಪಾರು ಖಂಡಿಸಿ ಪುತ್ತೂರಿನಲ್ಲಿ ಭಜರಂಗದಳ, ಬಿಜೆಪಿ ಪ್ರತಿಭಟನೆ

ಸದ್ಯ ಅಯ್ಯಪ್ಪ ಮಾಲಾಧಾರಿಯಾಗಿರುವ ಪ್ರವೀಶ್ ಕುಮಾರ್ ಅವರು ಎರಡು ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ. ಡಿಸೆಂಬರ್ 20 ರಂದು ಸಹಾಯಕ ಆಯುಕ್ತರ ನ್ಯಾಯಾಲಯದ ಮುಂದೆ ಹಾಜರಾಗುವಂತೆ ನೋಟಿಸ್​ನಲ್ಲಿ ಸೂಚಿಸಲಾಗಿದೆ. ಪೊಲೀಸರ ನಡೆಗೆ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಕೋಮು ಗಲಭೆ, ದನಸಾಗಾಟ ಹಲ್ಲೆ, ನೈತಿಕ ಪೊಲೀಸ್ ಗಿರಿ ಸೇರಿ ಪ್ರಕರಣಗಳಲ್ಲಿ ಭಾಗಿಯಾದ ಆರೋಪ ಸಂಬಂಧ ನಿಮ್ಮನ್ನು ಯಾಕೆ ಗಡೀಪಾರು ಮಾಡಬಾರದು ಎಂದು ಕೇಳಿ ನವೆಂಬರ್ 16 ರಂದು ಐವರು ಬರಂಗದಳ ಕಾರ್ಯಕರ್ತರಿಗೆ ಪುತ್ತೂರು ಪೊಲೀಸರು ನೋಟಿಸ್ ಜಾರಿ ಮಾಡಿದ್ದರು. ಜುಲೈ ತಿಂಗಳಲ್ಲಿ ಮೂವರು ಕಾರ್ಯಕರ್ತರಿಗೆ ನೋಟಿಸ್ ಜಾರಿ ಮಾಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ