ಮಂಗಳೂರು, ಡಿ.16: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ಕರಾವಳಿಯ ಹಿಂದೂ ಕಾರ್ಯಕರ್ತರ ವಿರುದ್ಧ ಪೊಲೀಸರು ಗಡಿಪಾರು ಅಸ್ತ್ರ ಪ್ರಯೋಗಿಸುತ್ತಲೇ ಇದೆ. ತಿಂಗಳ ಹಿಂದೆಯಷ್ಟೇ ಐವರು ಹಿಂದೂ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ಜಾರಿ ಮಾಡಿದ್ದ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರು ಪೊಲೀಸರು, ಇದೀಗ ಮತ್ತೊಬ್ಬ ಕಾರ್ಯಕರ್ತನಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ನಿಮ್ಮನ್ನು ಯಾಕೆ ಗಡಿಪಾರು ಮಾಡಬಾರದು ಎಂದು ಕಾರಣ ಕೇಳಿ ಪುತ್ತೂರು ತಾಲೂಕಿನ ನೆಟ್ಟಣಿಗೆ ನಿವಾಸಿಯಾಗಿರುವ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತ ಪ್ರವೀಶ್ ಕುಮಾರ್ ನಾಯರ್ ಎಂಬಾತನಿಗೆ ಪುತ್ತೂರು ಸಹಾಯಕ ಆಯುಕ್ತರು ನೋಟಿಸ್ ಜಾರಿ ಮಾಡಿದ್ದಾರೆ.
ಇದನ್ನೂ ಓದಿ: ಮಂಗಳೂರು: ಕಾರ್ಯಕರ್ತರ ಗಡಿಪಾರು ಖಂಡಿಸಿ ಪುತ್ತೂರಿನಲ್ಲಿ ಭಜರಂಗದಳ, ಬಿಜೆಪಿ ಪ್ರತಿಭಟನೆ
ಸದ್ಯ ಅಯ್ಯಪ್ಪ ಮಾಲಾಧಾರಿಯಾಗಿರುವ ಪ್ರವೀಶ್ ಕುಮಾರ್ ಅವರು ಎರಡು ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ. ಡಿಸೆಂಬರ್ 20 ರಂದು ಸಹಾಯಕ ಆಯುಕ್ತರ ನ್ಯಾಯಾಲಯದ ಮುಂದೆ ಹಾಜರಾಗುವಂತೆ ನೋಟಿಸ್ನಲ್ಲಿ ಸೂಚಿಸಲಾಗಿದೆ. ಪೊಲೀಸರ ನಡೆಗೆ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಕೋಮು ಗಲಭೆ, ದನಸಾಗಾಟ ಹಲ್ಲೆ, ನೈತಿಕ ಪೊಲೀಸ್ ಗಿರಿ ಸೇರಿ ಪ್ರಕರಣಗಳಲ್ಲಿ ಭಾಗಿಯಾದ ಆರೋಪ ಸಂಬಂಧ ನಿಮ್ಮನ್ನು ಯಾಕೆ ಗಡೀಪಾರು ಮಾಡಬಾರದು ಎಂದು ಕೇಳಿ ನವೆಂಬರ್ 16 ರಂದು ಐವರು ಬರಂಗದಳ ಕಾರ್ಯಕರ್ತರಿಗೆ ಪುತ್ತೂರು ಪೊಲೀಸರು ನೋಟಿಸ್ ಜಾರಿ ಮಾಡಿದ್ದರು. ಜುಲೈ ತಿಂಗಳಲ್ಲಿ ಮೂವರು ಕಾರ್ಯಕರ್ತರಿಗೆ ನೋಟಿಸ್ ಜಾರಿ ಮಾಡಲಾಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ