ಜೆರೋಸಾ ಶಿಕ್ಷಣ ಸಂಸ್ಥೆ ವಿವಾದ ಬೆನ್ನಲ್ಲೇ ದಕ್ಷಿಣ ಕನ್ನಡ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ವರ್ಗಾವಣೆ

| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 14, 2024 | 7:39 PM

ಮಂಗಳೂರು ನಗರದ ಜೆಪ್ಪುನಲ್ಲಿರುವ ಜೆರೋಸಾ ಶಾಲೆಯ ಏಳನೇ ತರಗತಿ ಶಿಕ್ಷಕಿ ಪ್ರಭಾ ವಿರುದ್ಧ ಧರ್ಮ ನಿಂದನೆಯ ಕಿಚ್ಚು ಜೋರಾಗಿದ್ದ ಹಿನ್ನಲೆ ಅವರನ್ನು ಅಮಾನತುಗೊಳಿಸಲಾಗಿತ್ತು. ಇದರ ಬೆನ್ನಲ್ಲೇ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ದಯಾನಂದ ರಾಮಚಂದ್ರ ನಾಯ್ಕ ಅವರನ್ನು ಬೆಳಗಾವಿಯ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯಕ್ಕೆ ದಿಢೀರ್ ವರ್ಗಾವಣೆ ಮಾಡಲಾಗಿದೆ.

ಜೆರೋಸಾ ಶಿಕ್ಷಣ ಸಂಸ್ಥೆ ವಿವಾದ ಬೆನ್ನಲ್ಲೇ ದಕ್ಷಿಣ ಕನ್ನಡ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ವರ್ಗಾವಣೆ
ಜೆರೋಸಾ ಶಿಕ್ಷಣ ಸಂಸ್ಥೆ ವಿವಾದ ಬೆನ್ನಲ್ಲೇ ದಕ್ಷಿಣ ಕನ್ನಡ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ವರ್ಗಾವಣೆ
Follow us on

ದಕ್ಷಿಣ ಕನ್ನಡ,ಫೆ.14: ಮಂಗಳೂರಿನ ‌ಜೆರೋಸಾ ಶಿಕ್ಷಣ ಸಂಸ್ಥೆ(St. Gerosa School) ವಿವಾದದ ಬೆನ್ನಲ್ಲೇ ಇದೀಗ ದಕ್ಷಿಣ ಕನ್ನಡ(Dakshina kannada) ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ದಯಾನಂದ ರಾಮಚಂದ್ರ ನಾಯ್ಕ ಅವರನ್ನು ಬೆಳಗಾವಿಯ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯಕ್ಕೆ ದಿಢೀರ್ ವರ್ಗಾವಣೆ ಮಾಡಲಾಗಿದೆ. ನೂತನ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾಗಿ ವೆಂಕಟೇಶ ಸುಬ್ರಾಯ ಪಟಗಾರ ಎಂಬುವವರನ್ನು ನೇಮಕ ಮಾಡಲಾಗಿದೆ.

ವಿವಾದ ಬಗೆಹರಿಸುವಲ್ಲಿ ವಿಫಲವಾದ ಹಿನ್ನೆಲೆ ವರ್ಗಾವಣೆ ಸಾಧ್ಯತೆ

ಇತ್ತೀಚೆಗೆ ಮಂಗಳೂರಿನ ಜೆರೋಸಾ ಶಿಕ್ಷಣ ಸಂಸ್ಥೆ ಶಿಕ್ಷಕಿಯಿಂದ ಶ್ರೀರಾಮನ ಅವಹೇಳನ ಆರೋಪ ಕೇಳಿ ಬಂದಿತ್ತು. ಈ ವಿಚಾರದಲ್ಲಿ ಶಿಕ್ಷಣ ಇಲಾಖೆ ಪರಿಸ್ಥಿತಿ ನಿಭಾಯಿಸುವಲ್ಲಿ ವಿಫಲವಾಗಿತ್ತು. ಕಾಂಗ್ರೆಸ್ ನಿಯೋಗ ನಿನ್ನೆ(ಫೆ,13) ಜೆರೋಸಾ ಸಂಸ್ಥೆಗೆ ಭೇಟಿ ನೀಡಿದ ವೇಳೆ ಡಿಡಿಪಿಐ ವಿರುದ್ದ ಅಸಮಾಧಾನ ಹೊರ ಹಾಕಿತ್ತು. ಈ ವೇಳೆ ಮಾತನಾಡಿದ್ದ ರಮಾನಾಥ್ ರೈ, ‘ಸಮಸ್ಯೆ ಸರಿಪಡಿಸದ ಶಿಕ್ಷಣ ಇಲಾಖೆಯೇ ಜವಾಬ್ದಾರಿಯಾಗುತ್ತೆ ಎಂದಿದ್ದರು. ಜೊತೆಗೆ ಸ್ಥಳೀಯ ಶಾಸಕ ವೇದವ್ಯಾಸ ಕಾಮತ್ ಹೇಳಿದಂತೆ ಡಿಡಿಪಿಐ ಕ್ರಮ ಕೈಗೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿಯೇ ಡಿಡಿಪಿಐ ಅವರನ್ನು ಇದೀಗ ದಿಢೀರ್ ವರ್ಗಾವಣೆ ಮಾಡಿರುವ ಸಾಧ್ಯತೆಯಿದೆ.

ಇದನ್ನೂ ಓದಿ:ಜೆರೋಸಾ ಶಿಕ್ಷಣ ಸಂಸ್ಥೆಯಲ್ಲಿ ಶ್ರೀರಾಮ ದೇವರಿಗೆ ಅವಹೇಳನ ಆರೋಪ; ಶಿಕ್ಷಕಿ ವಿರುದ್ದ ಪೊಲೀಸರಿಗೆ ದೂರು ನೀಡಿದ ಪೋಷಕರು

ಮಂಗಳೂರಿನ ಜೆರೋಸಾ ಶಾಲೆಯ ಏಳನೇ ತರಗತಿ ಶಿಕ್ಷಕಿ ಸಿಸ್ಟರ್ ಪ್ರಭಾ ಅವರು ಅಯೋಧ್ಯೆ ರಾಮಮಂದಿರ ಹಾಗೂ ಪ್ರಭು ಶ್ರೀರಾಮನ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ತಮ್ಮ ಪೋಷಕರ ಬಳಿ ಹೇಳಿಕೊಂಡಿದ್ದರು. ಮಕ್ಕಳಲ್ಲಿ ಶಿಕ್ಷಕಿ ಶಾಲಾ ಮಕ್ಕಳಿಗೆ ಹಿಂದೂ ಧರ್ಮ, ದೇವರ ಬಗ್ಗೆ ಅವಹೇಳನಕಾರಿ ಬೋಧನೆ ಮಾಡಿದ್ದಾರೆ ಎಂದು ಅದರ ವಿರುದ್ಧ ಧ್ವನಿ ಎತ್ತಿ ಪ್ರತಿಭಟಿಸಲು ನಿರ್ಧರಿಸಿ, ಹಿಂದೂ ಸಂಘಟನೆಗಳ ಕಾರ್ಯಕರ್ತರು ಶಾಲಾ ಆವರಣದಲ್ಲಿ ಸೇರುವಂತೆ ಸಂದೇಶ ರವಾನಿಸಿದ್ದರು. ಬಳಿಕ  ಶ್ರೀರಾಮನಿಗೆ ಅವಹೇಳನ ಮಾಡಿದ ಆರೋಪ ಸಂಬಂಧ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅವರನ್ನು ಆಡಳಿತ ಮಂಡಳಿ ಅಮಾನತು ಮಾಡಿತ್ತು. ಇದೀಗ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರನ್ನೇ ವರ್ಗಾವಣೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ