ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಶಾಸಕ ವೈ ಭರತ್ ಶೆಟ್ಟಿ ಮೇಲೆ ಎಫ್​ಐಆರ್

ಕಾಂಗ್ರೆಸ್ ನಾಯಕರ ರಾಹುಲ್ ಗಾಂಧಿ ವಿರುದ್ಧ ಮಂಗಳೂರಿನಲ್ಲಿ ಬಿಜೆಪಿ ಶಾಸಕ ಭರತ್ ಶೆಟ್ಟಿ ಅವಹೇಳನಕಾರಿ ಹೇಳಿಕೆ ನೀಡಿದ್ದು ಕಳೆದ ಕೆಲವು ದಿನಗಳಿಂದ ಬಹಳ ಚರ್ಚೆಯಾಗುತ್ತಿದೆ. ಈ ವಿಚಾರವಾಗಿ ಮಂಗಳೂರಿನ ಕಾಂಗ್ರೆಸ್ ನಾಯಕರು ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಭರತ್ ಶೆಟ್ಟಿ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಶಾಸಕ ವೈ ಭರತ್ ಶೆಟ್ಟಿ ಮೇಲೆ ಎಫ್​ಐಆರ್
ವೈ ಭರತ್ ಶೆಟ್ಟಿ
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: Ganapathi Sharma

Updated on:Jul 10, 2024 | 12:56 PM

ಮಂಗಳೂರು, ಜುಲೈ 10: ಕಾಂಗ್ರೆಸ್ ಸಂಸದ, ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಆರೋಪಕ್ಕೆ ಸಂಬಂಧಿಸಿ ಬಿಜೆಪಿ ಶಾಸಕ ಡಾ. ವೈ ಭರತ್ ಶೆಟ್ಟಿ ಮೇಲೆ ಎಫ್​ಐಆರ್​​ ದಾಖಲಿಸಲಾಗಿದೆ. ಪಾಲಿಕೆ ಸದಸ್ಯ ಕಾಂಗ್ರೆಸ್​​ನ ಅನಿಲ್ ಕುಮಾರ್ ನೀಡಿದ್ದ ದೂರಿನ ಆಧಾರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ. BNS 351(3), 353 ಸೆಕ್ಷನ್ ಅಡಿ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮಧ್ಯೆ, ಭರತ್ ಶೆಟ್ಟಿ ಹೇಳಿಕೆ ಖಂಡಿಸಿ ಮಂಗಳೂರು ಪಾಲಿಕೆ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಪ್ರತಿಭಟನೆ ಮುಗಿದ ಬೆನ್ನಲ್ಲೇ ಏಕಾಏಕಿ ರಸ್ತೆಗೆ ನುಗ್ಗಿದ ಕಾರ್ಯಕರ್ತರು ರಸ್ತೆ ತಡೆ ಮಾಡಿದ್ದಾರೆ. ರಸ್ತೆ ತಡೆಯಿಂದ ಲಾಲ್ ಭಾಗ್ ಸರ್ಕಲ್ ಬಳಿ ಟ್ರಾಫಿಕ್ ಜಾಂ ಉಂಟಾಯಿತು. ಬಳಿಕ ರಸ್ತೆ ತಡೆ ನಡೆಸಿದ ನಾಯಕರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಪಕ್ಕಕ್ಕೆ ಸರಿಸಿದರು.

ಏನು ಹೇಳಿದ್ದರು ಭರತ್ ಶೆಟ್ಟಿ?

ಮಂಗಳೂರಿನ ಕಾವೂರಿನಲ್ಲಿ ಸೋಮವಾರ ನಡೆದಿದ್ದ ಬಿಜೆಪಿ ಪ್ರತಿಭಟನೆಯಲ್ಲಿ ಮಾತನಾಡಿದ್ದ ಭರತ್ ಶೆಟ್ಟಿ, ರಾಹುಲ್ ಗಾಂಧಿಗೆ ಪಾರ್ಲಿಮೆಂಟ್ ಒಳಗೆ ಹೋಗಿ ಕೆನ್ನೆಗೆ ಬಾರಿಸಬೇಕಿತ್ತು ಅನಿಸುತ್ತಿದೆ ಎಂದಿದ್ದರು. ರಾಹುಲ್ ಗಾಂಧಿ ಶಿವನ ಫೋಟೊ ಹಿಡಿದು ನಿಂತಿದ್ದ. ಈ ಹುಚ್ಚನಿಗೆ ಶಿವ ಮೂರನೇ ಕಣ್ಣು ಬಿಟ್ಟರೆ ಸುಟ್ಟು ಬೂದಿಯಾಗಬಹುದು ಅಂತ ಗೊತ್ತಿಲ್ಲ ಎಂದು ಭರತ್ ಶೆಟ್ಟಿ ಹೇಳಿದ್ದರು.

ಇದನ್ನೂ ಓದಿ: ರಾಹುಲ್ ಗಾಂಧಿ ದೊಡ್ಡ ಹುಚ್ಚ, ಪಾರ್ಲಿಮೆಂಟ್​ಗೆ ಹೋಗಿ ಅವನ ಕೆನ್ನೆಗೆ ಬಾರಿಸಬೇಕು: ಭರತ್ ಶೆಟ್ಟಿ ಹೇಳಿಕೆಗೆ ವ್ಯಾಪಕ ವಿರೋಧ

ಸಾರ್ವಜನಿಕ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿ ವ್ಯಕ್ತಿಯನ್ನು ನಿಂದಿಸಿದ ಬಗ್ಗೆ ಅವರ ವಿರುದ್ಧ ದೂರು ದಾಖಲಾಗಿತ್ತು. ಶಸ್ತ್ರಾಸ್ತ್ರ ಉಪಯೋಗಿಸಿ ಹೋರಾಟ ಮಾಡೋಣ ಎಂದು ಪ್ರಚೋದನಕಾರಿ ಹೇಳಿಕೆ‌‌‌ ನೀಡಿದ್ದಾರೆ ಎಂದೂ ಆರೋಪಿಸಲಾಗಿತ್ತು. ಶಾಸಕರ ಹೇಳಿಕೆಯನ್ನು ಬೆಂಬಲಿಸಿದ ಶಾಸಕ ವೇದವ್ಯಾಸ್ ಕಾಮತ್, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಕಾರ್ಪೋರೇಟರ್​​ಗಳ ವಿರುದ್ಧವೂ ಸೂಕ್ತ ಕ್ರಮಕ್ಕೆ ದೂರುದಾರರು ಆಗ್ರಹಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:51 pm, Wed, 10 July 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ