AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಸ್ಥಳ ಕೇಸಿಗೆ ರೋಚಕ ತಿರುವು: ಅಸ್ಥಿಪಂಜರದ ಬಳಿ ಸಿಕ್ಕ ಐಡಿ ಕಾರ್ಡ್​​ ವ್ಯಕ್ತಿ ರಹಸ್ಯ ಬಯಲಿಗೆ

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌಜನ್ಯ ಮಾವ ಮಾಡಿರುವ ಆರೋಪ ಮೇಲೆ ಎಸ್​ಐಟಿ ಅಧಿಕಾರಿಗಳು ಬಂಗ್ಲೆಗುಡ್ಡ ಜಾಲಾಡುತ್ತಿದ್ದು, ಈ ವೇಳೆ ಅಸ್ಥಿಪಂಜರ, ತಲೆಬುರುಡೆ, ಮೂಳೆಗಳು ಪತ್ತೆಯಾಗಿದ್ದು, ಅವುಗಳನ್ನು ಸಂಗ್ರಹಿಸಿ ಸೀಲ್ ಮಾಡಿದ್ದರು. ಇದೀಗ ಎರಡನೇ ದಿನದವೂ ಸಹ ಎಸ್​ಐಟಿ ಶೋಧ ಕಾರ್ಯ ನಡೆಸಿದೆ. ಈ ವೇಳೆ ಬುರುಡೆ ಮತ್ತು ಅಸ್ಥಿಪಂಜರದ ಬಳಿ ಒಂದು ಐಡಿ ಕಾರ್ಡ್​ ಸಿಕ್ಕಿದ್ದು, ಆ ಐಡಿ ಕಾರ್ಡ್ ಯಾರದ್ದು ಏನು ಎನ್ನುವುದು ಸಹ ಬೆಳಕಿಗೆ ಬಂದಿದೆ.

ಧರ್ಮಸ್ಥಳ ಕೇಸಿಗೆ ರೋಚಕ ತಿರುವು: ಅಸ್ಥಿಪಂಜರದ ಬಳಿ ಸಿಕ್ಕ ಐಡಿ ಕಾರ್ಡ್​​ ವ್ಯಕ್ತಿ ರಹಸ್ಯ ಬಯಲಿಗೆ
ಅಯ್ಯಪ್ಪ (ಫೋಟೋನಲ್ಲಿ ಇರುವವರು)
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ರಮೇಶ್ ಬಿ. ಜವಳಗೇರಾ|

Updated on:Sep 18, 2025 | 5:06 PM

Share

ಮಂಗಳೂರು, (ಸೆಪ್ಟೆಂಬರ್ 18): ಧರ್ಮಸ್ಥಳ ಪ್ರಕರಣಕ್ಕೆ (Dharmasathala Case) ಸಂಬಂಧಿಸಿದಂತೆ ಬಂಗ್ಲೆಗುಡ್ಡದಲ್ಲಿ ಸಿಕ್ಕ ಅಸ್ಥಿಪಂಜರ, ತಲೆ ಬುರುಡೆ ಹಾಗೂ ಮೂಳೆಗಳ ಯಾರದ್ದು ಎಂಬ ಪ್ರಶ್ನೆ ಮೂಡಿದೆ. ಹೀಗಿರುವಾಗಲೇ ಧರ್ಮಸ್ಥಳದ ಬಂಗ್ಲೆಗುಡ್ಡೆದಲ್ಲಿ ಶೋಧಕ್ಕೆ ರೋಚಕ ತಿರುವು ಸಿಕ್ಕಿದೆ. ಹೌದು…ಬುರುಡೆ ಮತ್ತು ಅಸ್ಥಿಪಂಜರದ ಬಳಿ ಒಂದು ಐಡಿ ಕಾರ್ಡ್​ ಸಿಕ್ಕಿದ್ದು, ಅದು ಯು.ಬಿ.ಅಯ್ಯಪ್ಪ ಎಂಬುವರ ಐಟಿ ಕಾರ್ಡ್ ಎನ್ನುವುದು ಸಹ ಪತ್ತೆಯಾಗಿದೆ. ಕೊಡಗು (Kodagu) ಜಿಲ್ಲೆ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮದ ನಿವಾಸಿ ಅಯ್ಯಪ್ಪ ಎನ್ನುವರು 2017ರಲ್ಲಿ ಕಾಣೆಯಾಗಿದ್ದರು. ಇದೀಗ ಅವರ ಐಡಿ ಕಾರ್ಡ್ ಬಂಗ್ಲೆಗುಡ್ಡದಲ್ಲಿ ಸಿಕ್ಕಿದೆ.

ಐಡಿ ಕಾರ್ಡ್ ರಹಸ್ಯ ಬಯಲು

ಇನ್ನು ಬಂಗ್ಲೆಗುಡ್ಡದಲ್ಲಿ ಪತ್ತೆಯಾದ ತಲೆ ಬುರುಡೆ ಮತ್ತು ಅಸ್ಥಿಪಂಜರದ ಬಳಿ ಪತ್ತೆಯಾದ ಐಡಿ ಕಾರ್ಡ್​ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ  ಗ್ರಾಮದ ನಿವಾಸಿ ಅಯ್ಯಪ್ಪ ಅವರದ್ದು ಎನ್ನುವುದು ತಿಳಿದುಬಂದಿದೆ. 2017ರಲ್ಲಿ ಮೈಸೂರಿನ ಆಸ್ಪತ್ರೆಗೆ ಹೋಗುವುದಾಗಿ ಹೇಳಿ ಹೋಗಿದ್ದ ಅಯ್ಯಪ್ಪ, ಅಂದಿನಿಂದ ಕಾಣೆಯಾಗಿದ್ದರು. ಈ ಬಗ್ಗೆ ಕುಟುಂಬಸ್ಥರು, ಕುಟ್ಟ ಪೊಲೀಸ್ ಠಾಣೆಗೆ ದೂರು ಸಹ ನೀಡಿದ್ದರು. ಹೀಗಾಗಿ ಸಿಕ್ಕ ಅಸ್ಥಿಪಂಜರ ಸಹ ಅಯ್ಯಪ್ಪನವರದ್ದೇ ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಧರ್ಮಸ್ಥಳ ಪ್ರಕರಣಕ್ಕೆ ರೋಚಕ ತಿರುವು: ಬಂಗ್ಲೆಗುಡ್ಡದಲ್ಲಿ 5 ಬುರುಡೆ, ಮೂಳೆಗಳು, ಎರಡು ಹಗ್ಗ, ಸೀರೆ ಪತ್ತೆ!

ಅಯ್ಯಪ್ಪ ಕಾಣೆಯಾಗಿರುವ ಬಗ್ಗೆ ಅವರ ಪುತ್ರ ಜೀವನ್ ಎನ್ನುವರು ನೀಡಿದ ದೂರಿನ ಬಗ್ಗೆ 15-06-2017ರಂದು ಕುಟ್ಟ ಠಾಣೆ ಎಫ್ಐಆರ್ ದಾಖಲಾಗಿತ್ತು. ಆಸ್ಪತ್ರೆಗೆಂದು ಬೆಳಗ್ಗೆ 6 ಗಂಟೆಗೆ ಮನೆ ಬಿಟ್ಟಿದ್ದ ಅಯ್ಯಪ್ಪ, ಬೆಳಗ್ಗೆ 11.30ರ ನಂತರ ಅವರ ಮೊಬೈಲ್ ಸ್ವಿಚ್ ಅಫ್ ಆಗಿತ್ತು. ಇದಾದ ಬಳಿಕ ಕುಟುಂಬ ಒಂದು ವಾರ ಹುಡುಕಾಡಿತ್ತು. ಕೊನೆಗೆ ಅಯ್ಯಪ್ಪ ಸುಳಿವು ಸಿಗದಿದ್ದಾಗ ಜೀವನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದ್ರೆ, ದೂರು ನೀಡಿದರೂ ಸಹ ಅಯ್ಯಪ್ಪ ಸುಳಿವು ಸಹ ಸಿಕ್ಕಿರಲಿಲ್ಲ. ಇದೀಗ ಎಂಟು ವರ್ಷಗಳ ಬಳಿಕ ಬಂಗ್ಲೆಗುಡ್ಡೆಯಲ್ಲಿ ಅಯ್ಯಪ್ಪ ಅವರ ಐಡಿ ಕಾರ್ಡ್ ಪತ್ತೆಯಾಗಿದೆ.

ಇನ್ನೂ ಬಂಗ್ಲೆಗುಡ್ಡದಲ್ಲಿ ಪತ್ತೆಯಾದ ಅಸ್ಥಿಪಂಜರಗಳು ಆತ್ಮಹತ್ಯೆಯ ಸ್ಥಿತಿಯಲ್ಲಿತ್ತು ಎನ್ನುವುದು ಮೇಲ್ನೋಟಕ್ಕೆ ಗೊತ್ತಾಗಿದೆ. ತಲೆ ಬುರುಡೆ ಹಾಗು ಅವಶೇಷಗಳು ಹಗ್ಗ, ಬಟ್ಟೆಯಿಂದ ಮರಕ್ಕೆ ಕಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು ಅಂತಾ ಎಸ್ಐಟಿ ಮೂಲಗಳು ತಿಳಿಸಿವೆ. ಇಷ್ಟೇ ಅಲ್ಲ, ಶೋಧದ ವೇಳೆ ಎಸ್ಐಟಿ ಅಧಿಕಾರಿಗಳಿಗೆ ಹಲವು ವಸ್ತುಗಳು ಸಿಕ್ಕಿವೆ. ಒಂದು ಅಸ್ಥಿಪಂಜರದ ಪಕ್ಕದಲ್ಲೇ ಹಿರಿಯ ನಾಗರಿಕರ ಕಾರ್ಡ್ ಪತ್ತೆಯಾಗಿದೆ. ಎಸ್ಐಟಿ ಶೋಧದ ವೇಳೆ ಮರದಲ್ಲಿ ಎರಡು ಹಗ್ಗ ಮತ್ತು ಒಂದು ಸೀರೆ ಸಿಕ್ಕಿದೆ. ಹಗ್ಗದ ಪತ್ತೆಯಾದ ಮರದ ಕೆಳ ಭಾಗದಲ್ಲೇ ಅಸ್ಥಿಪಂಜರ ಸಿಕ್ಕಿದೆ. ನೇಣು ಹಾಕಿಕೊಂಡ ಕುಣಿಕೆ ರೀತಿ ಪತ್ತೆಯಾದ ಹಗ್ಗ ಮತ್ತು ಸೀರೆಯನ್ನೂ ವಶಕ್ಕೆ ಪಡೆಯಲಾಗಿದ್ದು, ಎಲ್ಲವನ್ನೂ ಸೀಲ್ ಮಾಡಲಾಗಿದೆ. ಇನ್ನು ಸಿಕ್ಕ ಆ ಐಡಿ ಕಾರ್ಡ್​ ಯಾರದ್ದು ಎನ್ನುವ ಸ್ಫೋಟಕ ಮಾಹಿತಿ ಲಭ್ಯವಾಗಿದೆ. ವಿಠ್ಠಲಗೌಡ ಹೇಳಿಕೆ ಆಧರಿಸಿ ಬಂಗ್ಲೆಗುಡ್ಡದಲ್ಲಿ ಶೋಧ ನಡೆಸಿದಾಗ ನಿನ್ನೆ 5 ಬುರುಡೆ ಮತ್ತು ಮೂಳೆಗಳು ಪತ್ತೆಯಾಗಿತ್ತು. ಆದ್ರೆ, ಬಂಗ್ಲೆಗುಡ್ಡದಲ್ಲಿ ಅಗೆದಿಲ್ಲ. ಭೂಮಿಯೇ ಮೇಲ್ಮಾಗದಲ್ಲೇ ಅಸ್ಥಿಪಂಜರ ಸಿಕ್ಕಿತ್ತು. ಹೀಗಾಗಿ ಬುರುಡೆ ಮತ್ತು ಮೂಳೆ ಮಣ್ಣಿನ ಸ್ಯಾಂಪಲ್ ಸಂಗ್ರಹಿಸಿದ SIT ಅಧಿಕಾರಿಗಳು FSLಗೆ ಕಳುಹಿಸಿದ್ದಾರೆ. ಮೇಲ್ನೋಟಕ್ಕೆ ಬುರುಡೆ ಮತ್ತು ಮೂಳೆಯನ್ನ ಪರಿಶೀಲಿಸಿದಾಗ ಇದು ಪುರುಷರದ್ದು ಅಂತಾ ವೈದ್ಯರು ಅಭಿಪ್ರಾಯ ಪಟ್ಟಿದ್ದಾರೆ. ಮೂಳೆಗಳ ಸಂಪೂರ್ಣ ವಿಶ್ಲೇಷಣೆಗಾಗಿ FSLಗೆ ಕಳುಹಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:02 pm, Thu, 18 September 25

ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ಜಾರ್ಖಂಡ್ ಕಲ್ಲಿದ್ದಲು ಪ್ರದೇಶದಲ್ಲಿ ವಿಷಕಾರಿ ಅನಿಲ ಸೋರಿಕೆ; ಇಬ್ಬರು ಸಾವು
ಜಾರ್ಖಂಡ್ ಕಲ್ಲಿದ್ದಲು ಪ್ರದೇಶದಲ್ಲಿ ವಿಷಕಾರಿ ಅನಿಲ ಸೋರಿಕೆ; ಇಬ್ಬರು ಸಾವು
ಸಾಕ್ಷಿ ಕೇಳ್ತಿದ್ದ ಸಿದ್ರಾಮಯ್ಯಗೆ ವಿಡಿಯೋ ಪ್ಲೇ ಮಾಡಿ ತೋರಿಸಿದ ಅಶೋಕ್​
ಸಾಕ್ಷಿ ಕೇಳ್ತಿದ್ದ ಸಿದ್ರಾಮಯ್ಯಗೆ ವಿಡಿಯೋ ಪ್ಲೇ ಮಾಡಿ ತೋರಿಸಿದ ಅಶೋಕ್​
ನಿರ್ದೇಶಕ ಸಂಗೀತ್ ಸಾಗರ್ ನಿಧನಕ್ಕೂ ಮುನ್ನ ಪರಿಸ್ಥಿತಿ ಹೇಗಿತ್ತು?
ನಿರ್ದೇಶಕ ಸಂಗೀತ್ ಸಾಗರ್ ನಿಧನಕ್ಕೂ ಮುನ್ನ ಪರಿಸ್ಥಿತಿ ಹೇಗಿತ್ತು?
ಶೂಟಿಂಗ್ ವೇಳೆ ನಿರ್ದೇಶಕ ಸಾವು, ಘಟನೆ ವಿವರಿಸಿದ ನಿರ್ಮಾಪಕ: ವಿಡಿಯೋ
ಶೂಟಿಂಗ್ ವೇಳೆ ನಿರ್ದೇಶಕ ಸಾವು, ಘಟನೆ ವಿವರಿಸಿದ ನಿರ್ಮಾಪಕ: ವಿಡಿಯೋ
ಹಿಜಾಬ್ Vs ಕೇಸರಿ ಶಾಲು: ಮತ್ತೆ ಮುನ್ನೆಲೆಗೆ ಬಂದ ವಿವಾದ
ಹಿಜಾಬ್ Vs ಕೇಸರಿ ಶಾಲು: ಮತ್ತೆ ಮುನ್ನೆಲೆಗೆ ಬಂದ ವಿವಾದ