AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಸ್ಥಳ ಶವ ಹೂತಿಟ್ಟ ಕೇಸ್​: ಚಿನ್ನಯ್ಯಗೆ 14 ದಿನ ನ್ಯಾಯಾಂಗ ಬಂಧನ, ಶಿವಮೊಗ್ಗ ಜೈಲಿಗೆ ಶಿಫ್ಟ್

ಧರ್ಮಸ್ಥಳದಲ್ಲಿ ಶವ ಹೂತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಿ.ಎನ್. ಚಿನ್ನಯ್ಯನ ಎಸ್​ಐಟಿ ಕಸ್ಟಡಿ ಅಂತ್ಯವಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಬೆಳ್ತಂಗಡಿ ನ್ಯಾಯಾಲಯವು ಆದೇಶ ಹೊರಡಿಸಿದೆ. ಭದ್ರತಾ ಕಾರಣಗಳಿಂದಾಗಿ ಚಿನ್ನಯ್ಯನನ್ನು ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. SIT ಪೊಲೀಸರು ಚಿನ್ನಯ್ಯನನ್ನು ಶಿವಮೊಗ್ಗ ಜೈಲಿಗೆ ಕರೆದೊಯ್ದಿದ್ದಾರೆ.

ಧರ್ಮಸ್ಥಳ ಶವ ಹೂತಿಟ್ಟ ಕೇಸ್​: ಚಿನ್ನಯ್ಯಗೆ 14 ದಿನ ನ್ಯಾಯಾಂಗ ಬಂಧನ, ಶಿವಮೊಗ್ಗ ಜೈಲಿಗೆ ಶಿಫ್ಟ್
ಆರೋಪಿ ಸಿ.ಎನ್.ಚಿನ್ನಯ್ಯ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ಗಂಗಾಧರ​ ಬ. ಸಾಬೋಜಿ|

Updated on:Sep 06, 2025 | 6:52 PM

Share

ಮಂಗಳೂರು, ಸೆಪ್ಟೆಂಬರ್​ 06: ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ಹೇಳಿದ್ದ (Dharmasthala Case) ದೂರುದಾರ ಸಿಎನ್ ಚಿನ್ನಯ್ಯ ಅಲಿಯಾಸ್ ಚೆನ್ನನ ಎಸ್​​ಐಟಿ ಕಸ್ಟಡಿ ಅಂತ್ಯವಾಗಿದ್ದು, 14 ದಿನ ನ್ಯಾಯಾಂಗ ಬಂಧನ ವಿಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ನ್ಯಾಯಾಲಯ ಶನಿವಾರ ಆದೇಶ ಹೊರಡಿಸಿದೆ. ಭದ್ರತೆ ದೃಷ್ಟಿಯಿಂದ ಶಿವಮೊಗ್ಗ ಸೆಂಟ್ರಲ್ ಜೈಲಿಗೆ ಚಿನ್ನಯ್ಯನನ್ನು ಎಸ್​ಐಟಿ (SIT) ಪೊಲೀಸರು ಸ್ಥಳಾಂತರಿಸಿದ್ದಾರೆ.

ಅತ್ತ ನ್ಯಾಯಾಂಗ ಬಂಧನಕ್ಕೊಳಗಾಗುತ್ತಿದ್ದಂತೆ ಇತ್ತ ಉಚಿತ ಕಾನೂನು ಸೇವೆಗಳ ಪ್ರಾಧಿಕಾರ ನೇಮಿಸಿದ್ದ ಚಿನ್ನಯ್ಯ ಪರ ವಕೀಲರಿಂದ ಜಾಮೀನು ಕೋರಿ ಬೆಳ್ತಂಗಡಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಸೆಪ್ಟೆಂಬರ್‌ 9ಕ್ಕೆ ಮುಂದೂಡಿದೆ.

ಇದನ್ನೂ ಓದಿ: ಧರ್ಮಸ್ಥಳ ವಿರೋಧಿ ಅಭಿಯಾನದ ಮೂಲ ಸಂಚುಕೋರರು ಸಿಗುವುದು ಕಷ್ಟ: ಎಸ್​ಐಟಿಗಿದೆ ತಾಂತ್ರಿಕ ಸಂಕಷ್ಟ

ಇದನ್ನೂ ಓದಿ
Image
ಧರ್ಮಸ್ಥಳ ಪ್ರಕರಣ ಸಂಚುಕೋರರು ಸಿಗೋದು ಕಷ್ಟ, ಎಸ್ಐಟಿಗೆ ತಾಂತ್ರಿಕ ಸಂಕಷ್ಟ
Image
ಧರ್ಮಸ್ಥಳ ಪ್ರಕರಣ: ಗಿರೀಶ್ ಮಟ್ಟಣ್ಣನವರ್ ಬುಡಕ್ಕೆ ಬಂದ ‘ತಲೆಬುರಡೆ' ಕೇಸ್
Image
ಧರ್ಮಸ್ಥಳ ಕೇಸ್: 8 ನಿರ್ಣಯಗಳನ್ನ ಕೈಗೊಂಡ ಧಾರ್ಮಿಕ ಕ್ಷೇತ್ರಗಳ ಮುಖಂಡರು
Image
ಬುರುಡೆ ವಿಡಿಯೋ ಹರಿಬಿಟ್ಟಿದ್ದ ಯೂಟ್ಯೂಬರ್ ಮನಾಫ್​ಗೆ ಎಸ್​ಐಟಿ ನೋಟಿಸ್

ಹೆಚ್ಚು ಕಡಿಮೆ ಎರಡು ತಿಂಗಳು ಬುರುಡೆ ಬಿಟ್ಟಿದ್ದ ಚಿನ್ನಯ್ಯ, ಧರ್ಮಸ್ಥಳ ಸುತ್ತ ಮುತ್ತ 17 ಗುಂಡಿ ಅಗೆಸಿದ್ದ. ಕೊನೆಗೆ ನಾನು ಹೇಳಿದ್ದೆಲ್ಲ ಸುಳ್ಳು ಅಂತಾ ತಪ್ಪೊಪ್ಪಿಕೊಂಡಿದ್ದ. ಕಳೆದ 15 ದಿನದಿಂದ ತೀವ್ರ ವಿಚಾರಣೆ ನಡೆಸಿ ಮಹತ್ವದ ದಾಖಲೆಗಳನ್ನ ಸಂಗ್ರಹಿಸಿರುವ ಎಸ್‌ಐಟಿ ಅಧಿಕಾರಿಗಳು, ಬುರುಡೆ ಮ್ಯಾನ್‌ನನ್ನ ಜೈಲಿಗಟ್ಟಿದ್ದಾರೆ.

ಇಂದು ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಮೆಡಿಕಲ್‌ ಟೆಸ್ಟ್ ನಡೆಸಿ, ಬೆೆಳ್ತಂಗಡಿ ಕೋರ್ಟ್‌ಗೆ ಚಿನ್ನಯ್ಯನನ್ನ ಹಾಜರುಪಡಿಸಲಾಗಿತ್ತು. ಕೋರ್ಟ್‌ಗೆ ಬರುವಾಗಲೇ ಚಿನ್ನಯ್ಯನನ್ನ ಲಗೇಜ್‌ ಸಮೇತ ಕರೆದುಕೊಂಡು ಬರಲಾಗಿತ್ತು. ಚಿನ್ನಯ್ಯನನ್ನ SITಕಸ್ಟಡಿಗೆ ಕೇಳದ ಕಾರಣ, 14 ದಿನ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. ಭದ್ರತಾ ದೃಷ್ಟಿಯಿಂದ ಶಿವಮೊಗ್ಗ ಜೈಲಿಗೆ ಶಿಫ್ಟ್ ಮಾಡಲಾಗಿದೆ.

ಇದನ್ನೂ ಓದಿ: ಧರ್ಮಸ್ಥಳ ಕೇಸ್: ಧರ್ಮ ಜಾಗೃತಿ ಸಮಾವೇಶದಲ್ಲಿ 8 ಮಹತ್ವದ ನಿರ್ಣಯಗಳನ್ನ ಕೈಗೊಂಡ ಧಾರ್ಮಿಕ ಕ್ಷೇತ್ರಗಳ ಮುಖಂಡರು

ಜೈಲಿಗೆ ಹೋಗೋ ಮುನ್ನ ಹಲವು ಸ್ಫೋಟಕ ವಿಚಾರಗಳನ್ನ ಬುರುಡೆ ಮ್ಯಾನ್ ಬಾಯ್ಬಿಟ್ಟಿದ್ದಾನೆ. ಧರ್ಮಸ್ಥಳ ವಿರುದ್ಧ ಷಡ್ಯಂತ್ರ ನಡೆದಿದೆ ಎಂದಿರೋ ಚಿನ್ನಯ್ಯ, ನನ್ನ ಬಳಸಿಕೊಂಡು ಧರ್ಮಸ್ಥಳಕ್ಕೆ ಕಳಂಕ ತರಲು ಹುನ್ನಾರ ನಡೆದಿದೆ. ಧರ್ಮಸ್ಥಳಕ್ಕೆ ಕೆಟ್ಟ ಹೆಸರು ತರಲು ಷಡ್ಯಂತ್ರ ಮಾಡಿದ್ದಾರೆ ಅಂತಾ ಎಸ್ಐಟಿ ಎದುರು ಗ್ಯಾಂಗ್‌ನ ಹೆಸರನ್ನ ಚಿನ್ನಯ್ಯ ಹೇಳಿದ್ದಾನೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:22 pm, Sat, 6 September 25