AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಸ್ಥಳ ಪ್ರಕರಣ: ಗಿರೀಶ್ ಮಟ್ಟಣ್ಣನವರ್ ಬುಡಕ್ಕೆ ಬಂದ ‘ತಲೆಬುರಡೆ’ ಕೇಸ್

ಧರ್ಮಸ್ಥಳದಲ್ಲಿ ನೂರಾರು ಶವ ಹೂತಿದ್ದಾಗಿ ಮಾಸ್ಕ್‌ಮ್ಯಾನ್ ಚಿನ್ನಯ್ಯ ತಂದಿದ್ದ ತಲೆಬುರಡೆ ಇದೀಗ ಎಲ್ಲರ ಕೇಂದ್ರಬಿಂದುವಾಗಿದೆ. ಇದೇ ತಲೆಬುರಡೆ ಸರ್ಕಾರದ ದಿಕ್ಕುತಪ್ಪಿಸಿತ್ತು. ಎಸ್‌ಐಟಿ ರಚನೆ ಮಾಡಿ ಧರ್ಮಸ್ಥಳ ವ್ಯಾಪ್ತಿಯಲ್ಲಿ ಹತ್ತಾರು ಗುಂಡಿಗಳನ್ನು ಅಗೆಯಲು ಕಾರಣವಾಗಿತ್ತು. ಆದರೆ ಈಗ ತಲೆಬುರಡೆ ಮೂಲ ಹುಡುಕಲು ಮುಂದಾಗಿರುವ ತನಿಖಾಧಿಕಾರಿಗಳಿಗೆ ಒಂದೊಂದೇ ರೋಚಕ ವಿಚಾರಗಳು ತಿಳಿದುಬರುತ್ತಿವೆ.

ಧರ್ಮಸ್ಥಳ ಪ್ರಕರಣ: ಗಿರೀಶ್ ಮಟ್ಟಣ್ಣನವರ್ ಬುಡಕ್ಕೆ ಬಂದ ‘ತಲೆಬುರಡೆ' ಕೇಸ್
ಚಿನ್ನಯ್ಯನನ್ನು ಶುಕ್ರವಾರವೂ ತೀವ್ರ ವಿಚಾರಣೆಗೆ ಒಳಪಡಿಸಲಾಯಿತು
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: Ganapathi Sharma|

Updated on: Sep 06, 2025 | 7:20 AM

Share

ಮಂಗಳೂರು, ಸೆಪ್ಟೆಂಬರ್ 6: ಧರ್ಮಸ್ಥಳದಲ್ಲಿ (Dharmasthala case) ಸಿಕ್ಕಿದ್ದು ಎಂದು ದೇಶವನ್ನೇ ಗದ್ದಲಕ್ಕೆ ದೂಡಿದ್ದ ಬುರುಡೆ ಈಗ ಅನಾಥವಾಗಿದೆ. ಮಾಲೀಕ ಯಾರು ಎಂಬುದೇ ಗೊತ್ತಾಗದ ಸ್ಥಿತಿಯಲ್ಲಿದೆ. ಯಾಕೆಂದರೆ ಆರಂಭದಲ್ಲಿ ಬುರುಡೆ ಜೊತೆಗಿದ್ದವರೆಲ್ಲಾ ಈಗ ಆ ಬುರುಡೆಯನ್ನು ದೂರ ತಳ್ಳುತ್ತಿದ್ದಾರೆ. ಮುಸುಕುಧಾರಿ ಚಿನ್ನಯ್ಯ, ‘ತಲೆಬುರುಡೆಯನ್ನು ನಾನು ಧರ್ಮಸ್ಥಳದಿಂದ ತಂದಿಲ್ಲ. ಇದನ್ನು ನನಗೆ ಕೊಟ್ಟಿದ್ದು ಜಯಂತ್’ ಎಂದು ಎಸ್‌ಐಟಿ ಮುಂದೆ ತಪ್ಪೊಪ್ಪಿಕೊಂಡಿದ್ದ. ಹೀಗಾಗಿ ದೂರುದಾರ ಜಯಂತ್‌ರನ್ನು ವಿಚಾರಣೆಗೆ ಕರೆಸಿ ಎಸ್ಐಟಿ ಫುಲ್ ಗ್ರಿಲ್ ಮಾಡಿತ್ತು. ಆದರೀಗ ಜಯಂತ್‌ ಬಿಗ್‌ ಟ್ವಿಸ್ಟ್‌ ಕೊಟ್ಟಿದ್ದಾರೆ. ನನಗೆ ಬುರುಡೆ ಕೊಟ್ಟಿದ್ದೇ ಗಿರೀಶ್ ಮಟ್ಟಣ್ಣನವರ್ ಎಂದಿದ್ದಾರೆ. ಹೀಗಾಗಿ ಬುರುಡೆ ಸುತ್ತಿಬಳಸಿ ಕೊನೆಗೆ ಗಿರೀಶ್ ಮಟ್ಟಣ್ಣನವರ್ ಬುಡಕ್ಕೆ ಬಂದುನಿಂತಿದೆ.

ತಡರಾತ್ರಿವರೆಗೂ ಗಿರೀಶ್, ಜಯಂತ್ ಪ್ರತ್ಯೇಕ ವಿಚಾರಣೆ

ಬುರುಡೆ ಮೂಲ ಕೆದಕಲು ಗಿರೀಶ್ ಮಟ್ಟಣ್ಣನವರ್ ಮತ್ತು ಜಯಂತ್‌ರನ್ನು ಶುಕ್ರವಾರ ವಿಚಾರಣೆಗೆ ಕರೆಯಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಎಸ್ಐಟಿ ಠಾಣೆಯಲ್ಲಿ ತಡರಾತ್ರಿವರೆಗೂ ಪ್ರತ್ಯೇಕವಾಗಿ ಕೂರಿಸಿ ಪ್ರಶ್ನೆಗಳನ್ನು ಕೇಳಲಾಗಿದೆ. ನನಗೆ ಬುರುಡೆ ಕೊಟ್ಟಿದ್ದೇ ಗಿರೀಶ್ ಮಟ್ಟಣ್ಣ ಎಂದು ಜಯಂತ್ ಕಡ್ಡಿ ಮುರಿದಂತೆ ಹೇಳಿದ್ದಾರೆ. ಆದರೆ ಗಿರೀಶ್ ಮಟ್ಟಣ್ಣನವರ್ ಬುರುಡೆ ಬಗ್ಗೆ ತಮಗೇನು ಗೊತ್ತಿಲ್ಲ ಅಂತಾ ಉತ್ತರಿಸಿದ್ದಾರೆ. ಹೀಗಾಗಿ ಬುರುಡೆ ಮೂಲ ಕುತೂಹಲ ಮೂಡಿಸಿದೆ.

ಯೂಟ್ಯೂಬರ್ ಅಭಿಷೇಕ್‌ಗೂ ಬುರುಡೆ ಬಗ್ಗೆ ಪ್ರಶ್ನೆ

ಸುಜಾತ ಭಟ್ ಇಂಟರ್‌ವ್ಯೂವ್ ಮಾಡಿ ಸದ್ದು ಮಾಡಿದ್ದ ಯೂಟ್ಯೂಬರ್‌ ಅಭಿಷೇಕ್‌ನನ್ನು ಎಸ್ಐಟಿ ಟೀಂ ವಿಚಾರಣೆ ನಡೆಸಿದೆ. ಗಿರೀಶ್ ಮಟ್ಟಣ್ಣನವರ್, ಜಯಂತ್ ರೀತಿ ಪ್ರತ್ಯೇಕವಾಗಿ ಅಭಿಷೇಕ್‌ನನ್ನು ವಿಚಾರಣೆ ಮಾಡಲಾಗಿದ್ದು, ಬುರುಡೆ ಬಗ್ಗೆಯೂ ಪ್ರಶ್ನೆಗಳನ್ನು ಕೇಳಲಾಗಿದೆ ಎನ್ನಲಾಗಿದೆ.

ಕೊಲೆಯಾಗಿದ್ದ ಸೌಜನ್ಯಳ ಮಾವ ವಿಠಲಗೌಡನನ್ನು ಎಸ್ಐಟಿ ವಿಚಾರಣೆ ನಡೆಸಿದೆ. ಈ ವಿಠಲಗೌಡ, ಗಿರೀಶ್ ಮಟ್ಟಣ್ಣವರ್ ಮತ್ತು ಜಯಂತ್ ಜೊತೆ ನಿಕಟ ಸಂಪರ್ಕದಲ್ಲಿದ್ದರು. ಹೀಗಾಗಿ ಬುರುಡೆ ಪ್ರಕರಣದಲ್ಲಿ ವಿಠಲಗೌಡ ಭಾಗಿಯಾಗಿರುವ ಆರೋಪವಿದೆ.

ಧರ್ಮಸ್ಥಳ ಬುರುಡೆ ಕೇಸ್: ಕೇರಳಕ್ಕೂ ಕಾಲಿಟ್ಟ ಲಿಂಕ್

ಧರ್ಮಸ್ಥಳ ಪ್ರಕರಣಕ್ಕೂ ಕೇರಳಕ್ಕೂ ಲಿಂಕ್​ ಇದೆ ಎಂದು ಬಿಜೆಪಿ ನಾಯಕರು ಸಾಲು ಸಾಲು ಆರೋಪ ಮಾಡಿದ್ದರು. ಬಿಜೆಪಿ ನಾಯಕರ ಆರೋಪಕ್ಕೆ ಪುಷ್ಟಿ ಎಂಬಂತೆ ಕೇರಳ ಲಿಂಕ್ ಬಯಲಾಗಿದೆ. ಕಳೆದ ವರ್ಷ ಕಾರವಾರದ ಶಿರೂರು ಬಳಿ ಗುಡ್ಡ ಕುಸಿತ ದುರಂತದಲ್ಲಿ ಈತನ ಲಾರಿ ಕೊಚ್ಚಿ ಹೋಗಿತ್ತು. ಡ್ರೈವರ್ ಅರ್ಜುನ್ ಮೃತಪಟ್ಟಿದ್ದ. ಇದೇ ಲಾರಿಯ ಮಾಲೀಕ ಮನಾಫ್‌ ಯೂಟ್ಯೂಬ್ ಚಾನಲ್​ ಸಹ ಹೊಂದಿದ್ದಾನೆ. ಮುನಾಫ್​ ತನ್ನ ಯೂಟ್ಯೂಬ್​ ಚಾನಲ್​​ನನಲ್ಲಿ ಬುರುಡೆ ದೃಶ್ಯವನ್ನು ಅಪ್ಲೋಡ್ ಮಾಡಿದ್ದ. ಕಾಡಿನಲ್ಲಿ ಮರಕ್ಕೆ ಸೀರೆ ಬಿಗಿದ ಸ್ಥಿತಿ, ಪಕ್ಕದಲ್ಲಿದ್ದ ಬುರುಡೆಯನ್ನು ಕತ್ತಿ ಮೂಲಕ ಎತ್ತಿ ಚೀಲಕ್ಕೆ ತುಂಬುತ್ತಿರುವ ವಿಡಿಯೋ ಹಂಚಿಕೊಂಡಿದ್ದ.

ಸರ್ಕಾರ ಎಸ್​ಐಟಿ ರಚನೆ ಮಾಡಿದ ಮೇಲೆ ಜಯಂತ್, ಮಹೇಶ್ ಶೆಟ್ಟಿ ತಿಮರೋಡಿಯನ್ನು ಭೇಟಿಯಾಗಿದ್ದರು. ಈ ವೇಳೆ ಮುನಾಫ್ ಕೂಡ ಇದ್ದ. ಇದೇ ಮುನಾಫ್ ತಿಮರೋಡಿ ಹೋರಾಟವನ್ನು ಅಭಿನಂದಿಸಿದ್ದ. ಕೇಸ್ ಆರಂಭಕ್ಕೂ ಮೊದಲೇ ಮನಾಫ್ ಧರ್ಮಸ್ಥಳ, ಬೆಳ್ತಂಗಡಿ, ಉಜಿರೆ ಬಳಿಯೂ ಓಡಾಡಿದ್ದ. ಜಯಂತ್ ಮೂಲಕ ಬುರುಡೆ ಕಥೆಯನ್ನು ಕೇರಳಕ್ಕೂ ಹಬ್ಬಿಸಿದ್ದ ಎನ್ನಲಾಗಿದೆ.

ಇದನ್ನೂ ಓದಿ: ಧರ್ಮಸ್ಥಳ ಕೇಸ್: ಧರ್ಮ ಜಾಗೃತಿ ಸಮಾವೇಶದಲ್ಲಿ 8 ಮಹತ್ವದ ನಿರ್ಣಯಗಳನ್ನ ಕೈಗೊಂಡ ಧಾರ್ಮಿಕ ಕ್ಷೇತ್ರಗಳ ಮುಖಂಡರು

ಮುನಾಫ್ ಬಗ್ಗೆ ಇಷ್ಟೆಲ್ಲ ಮಾಹಿತಿ ಕಲೆ ಹಾಕಿರುವ ಎಸ್​ಐಟಿ ಮನಾಫ್​ಗೆ ನೋಟಿಸ್​ ನೀಡಿದೆ. ವಿಚಾರಣೆಗೆ ಹಾಜರಾಗುವಂತೆ ಸೂಚನೆ ಕೊಡಲಾಗಿದೆ. ಶುಕ್ರವಾರ ಈದ್‌ ಹಬ್ಬ ಇದ್ದ ಕಾರಣ, ಇಂದು ಮುನಾಫ್ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ