AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

Dharmasthala Masked Man Arrest: ಧರ್ಮಸ್ಥಳ ವ್ಯಾಪ್ತಿಯಲ್ಲಿ ನೂರಾರು ಶವ ಹೂತಿದ್ದೇನೆಂದಿದ್ದ ಮಾಸ್ಕ್​ಮ್ಯಾನ್​​ನನ್ನು ಇದೀಗ ಎಸ್​ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.​ ತಲೆಬುರುಡೆ ತಂದ ಕೇಸ್​ನಲ್ಲಿ ಮಾಸ್ಕ್​ಮ್ಯಾನ್ ಸಿ.ಎನ್.ಚಿನ್ನಯ್ಯ ಅಲಿಯಾಸ್ ಚೆನ್ನ ಅರೆಸ್ಟ್ ಆಗಿದ್ದಾನೆ. ಇಂದು ಬೆಳ್ತಂಗಡಿ ಕೋರ್ಟ್​ಗೆ ಮಾಸ್ಕ್​ಮ್ಯಾನ್​​​ ನನ್ನ ಎಸ್​ಐಟಿ ಅಧಿಕಾರಿಗಳು ಹಾಜರುಪಡಿಸಲಿದ್ದಾರೆ.

ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ
ಮಾಸ್ಕ್​ಮ್ಯಾನ್ ಬಂಧನ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Aug 23, 2025 | 10:59 AM

Share

ಮಂಗಳೂರು, ಆಗಸ್ಟ್​ 23: ಧರ್ಮಸ್ಥಳದಲ್ಲಿ (Dharmasthala) ಶವ ಹೂತಿದ್ದಾಗಿ ದೂರು ವಿಚಾರವಾಗಿ ಇದೀಗ ಎಸ್​ಐಟಿ ಅಧಿಕಾರಿಗಳು ಮಾಸ್ಕ್​ಮ್ಯಾನ್​ ಸಿಎನ್​ ಚಿನ್ನಯ್ಯ ಅಲಿಯಾಸ್ ಚೆನ್ನನನ್ನು ಬಂಧಿಸಿದ್ದಾರೆ (arrest). ತಲೆಬುರುಡೆ ತಂದ ಕೇಸ್​ನಲ್ಲಿ ಎಸ್​ಐಟಿ ಅಧಿಕಾರಿಗಳು ಚಿನ್ನಯ್ಯನನ್ನು ಬಂಧಿಸಿದ್ದು, ಆ ಮೂಲಕ ಸಾಕ್ಷಿ ಸಂರಕ್ಷಣಾ ಕಾಯ್ದೆಯಿಂದ ವಿಮುಖಗೊಳಿಸಲಾಗಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕೋರ್ಟ್​ಗೆ ಮಾಸ್ಕ್​ಮ್ಯಾನ್​ ನನ್ನ ಎಸ್​ಐಟಿ ಅಧಿಕಾರಿಗಳು ಹಾಜರುಪಡಿಸಲಿದ್ದಾರೆ.

ಇನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಮಾಸ್ಕ್​ಮ್ಯಾನ್‌ಗೆ ಎಸ್‌ಐಟಿ ಅಧಿಕಾರಿಗಳು ವೈದ್ಯಕೀಯ ತಪಾಸಣೆ ಮಾಡಿಸಲಿದ್ದಾರೆ. ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ನಡೆಯಲಿದೆ. ಬಳಿಕ ಬೆಳ್ತಂಗಡಿ ಕೋರ್ಟ್ ಮುಂದೆ ಹಾಜರು ಪಡಿಸಲಾಗುವುದು. ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ SIT ಮನವಿ ಮಾಡಲಿದ್ದು, ಆ ಮೂಲಕ ಮತ್ತಷ್ಟು ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಇದನ್ನೂ ಓದಿ
Image
ಧರ್ಮಸ್ಥಳ ಪ್ರಕರಣ​: ಮಾಜಿ DC ಸಸಿಕಾಂತ್​ ಸೆಂಥಿಲ್​ ಷಡ್ಯಂತ್ರ ಎಂದ ರೆಡ್ಡಿ
Image
ಧರ್ಮಸ್ಥಳ ಪ್ರಕರಣ: ಅನನ್ಯಾ ಭಟ್ ನಾಪತ್ತೆ ಅಸಲಿಯತ್ತೇನು?
Image
ಧರ್ಮಸ್ಥಳದಲ್ಲಿ ಶವ ಹೂತಿದ್ದ ಪ್ರಕರಣ: ಆರ್​ಟಿಐ ಮಾಹಿತಿಯಲ್ಲಿ ಅಚ್ಚರಿಯ ಅಂಶ
Image
ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ ಎಂದ ಡಿಕೆ ಶಿವಕುಮಾರ್!

ಮಾಸ್ಕ್​ಮ್ಯಾನ್​ ಆರೋಪದ ಬಗ್ಗೆ ಎಸ್​​ಐಟಿ ಅಧಿಕಾರಿಗಳು ಮಾಸ್ಕ್​ಮ್ಯಾನ್​ ಸಿಎನ್​ ಚಿನ್ನಯ್ಯನನ್ನು ತನಿಖೆ ಮಾಡಿದ್ದರು. ಐಪಿಎಸ್‌ ಅಧಿಕಾರಿ ಪ್ರಣವ್ ಮೊಹಂತಿ ಕೂಡ ನಿನ್ನೆ ಮಧ್ಯಾಹ್ನ 2 ಗಂಟೆಯಿಂದ ಮಾಸ್ಕ್​ಮ್ಯಾನ್​ ವಿಚಾರಣೆ ಮಾಡಿದ್ದರು. ಸುದೀರ್ಘ ವಿಚಾರಣೆ ಬಳಿಕ ಇದೀಗ ಬಂಧಿಸಲಾಗಿದೆ.

ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ: ಅನಾಮಿಕನ ವಶಕ್ಕೆ ಪಡೆಯಲು ಚಿಂತನೆ, ಕಾನೂನು ಅಡ್ಡಿ ನಿವಾರಣೆಗೆ ಎಸ್​ಐಟಿ ಪ್ಲಾನ್ ಹೀಗಿದೆ ನೋಡಿ!

ಧರ್ಮಸ್ಥಳದಲ್ಲಿ ನೂರಾರು ಶವ ಹೂತಿರುವುದಾಗಿ ಅನಾಮಿಕ ಮಾಸ್ಕ್​ಮ್ಯಾನ್ ಆರೋಪದಂತೆ ಎಸ್​ಐಟಿ ಅಧಿಕಾರಿಗಳು ಮಾಸ್ಕ್​ಮ್ಯಾನ್ ತೋರಿಸಿದ ಸ್ಥಳಗಳಲ್ಲಿ ಅಗೆದು ಶೋಧ ಕಾರ್ಯ ಮಾಡಿದ್ದರು. ಎರಡು ಸ್ಥಳಗಳಲ್ಲಿ ಒಂದೆಡೆ ಅಸ್ಥಿಪಂಜರ ಸಿಕ್ಕಿದ್ದರೆ, ಮತ್ತೊಂದು ಜಾಗದಲ್ಲಿ ಮಾನವನ ಮೂಳೆಗಳು ಪತ್ತೆಯಾಗಿದ್ದವು. ಬಳಿಕ ಎಸ್​ಐಟಿ ಅಧಿಕಾರಿಗಳು ಉತ್ಖನನ ಕಾರ್ಯವನ್ನು ಸ್ಥಗಿತಗೊಳಿಸಿದ್ದರು. ನಂತರ ಮಾಸ್ಕ್​ಮ್ಯಾನ್​​ನನ್ನು ವಿಚಾರಣೆಗೊಳಪಡಿಸಲಾಗಿತ್ತು. ಈ ಮಧ್ಯೆ ಧರ್ಮಸ್ಥಳದಲ್ಲಿ ಮಾಸ್ಕ್‌ಮ್ಯಾನ್ ಜೊತೆ ಕೆಲಸ ಮಾಡಿದ್ದ ಮಂಡ್ಯದ ವ್ಯಕ್ತಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದರು. ದೂರುದಾರ ಹೇಳ್ತಿರೋದೇ ಸುಳ್ಳು ಎಂದಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:53 am, Sat, 23 August 25