ಧರ್ಮಸ್ಥಳ ಪ್ರಕರಣ: ಬುರುಡೆ ವಿಡಿಯೋ ಹರಿಬಿಟ್ಟಿದ್ದ, ಕಥೆ ಕಟ್ಟಿದ್ದ ಯೂಟ್ಯೂಬರ್ ಮನಾಫ್​ಗೆ ಎಸ್​ಐಟಿ ನೋಟಿಸ್

ಧರ್ಮಸ್ಥಳದ ನೂರಾರು ಶವ ಹೂತಿರೋ ಕೇಸ್ ಇದೀಗ ಕೇಂದ್ರ ಸರ್ಕಾರದ ಅಂಗಳ ತಲುಪಿದೆ. ವಚನಾನಂದ ಶ್ರೀಗಳ ನೇತೃತ್ವದ 8 ಸ್ವಾಮೀಜಿಗಳ ನಿಯೋಗ ಅಮಿತ್ ಶಾ ಭೇಟಿ ಮಾಡಿ ಪ್ರಕರಣವನ್ನ ಎನ್​​ಐಎಗೆ ನೀಡುವಂತೆ ಮನವಿ ಮಾಡಿದ್ದಾರೆ. ಈ ಮಧ್ಯೆ ಎಸ್​​ಐಟಿ ಮತ್ತೊಬ್ಬ ಯೂಟ್ಯೂಬರ್​​ಗೆ ನೋಟಿಸ್​ ನಿಡಿದೆ.

ಧರ್ಮಸ್ಥಳ ಪ್ರಕರಣ: ಬುರುಡೆ ವಿಡಿಯೋ ಹರಿಬಿಟ್ಟಿದ್ದ, ಕಥೆ ಕಟ್ಟಿದ್ದ ಯೂಟ್ಯೂಬರ್ ಮನಾಫ್​ಗೆ ಎಸ್​ಐಟಿ ನೋಟಿಸ್
ಯೂಟ್ಯೂಬರ್ ಮನಾಫ್
Edited By:

Updated on: Sep 05, 2025 | 10:58 AM

ಮಂಗಳೂರು, ಸೆಪ್ಟೆಂಬರ್​ 05: ಬುರುಡೆ ಮ್ಯಾನ್​ನಿಂದ ಹಿಡಿದು ಅನನ್ಯಾ ಭಟ್​ವರೆಗೂ ಸಂಚು ನಡೆದಿರುವುದು ಎಸ್​ಐಟಿ ತನಿಖೆಯಲ್ಲಿ ಇಂಚಿಂಚು ಬಯಲಾಗುತ್ತಿದೆ. ಶ್ರೀಕ್ಷೇತ್ರ ಧರ್ಮಸ್ಥಳದ (Dharmasthala Case) ವಿರುದ್ಧ ಅಪಪ್ರಚಾರ ಮತ್ತು ಷಡ್ಯಂತ್ರ ಆರೋಪದ ಮೇಲೆ ಯುನೈಟೆಡ್ ಮೀಡಿಯಾ ಯೂಟ್ಯೂಬ್ ಚಾನಲ್ ನಡೆಸುತ್ತಿದ್ದ ಅಭಿಷೇಕ್​​ನನ್ನು ಎಸ್ಐಟಿ ವಿಚಾರಣೆ ನಡೆಸಿದೆ. ಈ ಮಧ್ಯೆ ಬುರುಡೆ ಕಥೆಯನ್ನು ಕೇರಳಕ್ಕೆ ಹಬ್ಬಿಸಿದ್ದ ಕೇರಳ ಮೂಲದ ಯೂಟ್ಯೂಬರ್ (youtuber) ಮನಾಫ್​​ಗೂ ಎಸ್ಐಟಿ ನೋಟಿಸ್​ ನಿಡಿದೆ.

ಮನಾಫ್ ಯಾರು? ​ 

2024 ಜುಲೈ ತಿಂಗಳಲ್ಲಿ ಸುರಿದ ಭಾರಿ ಮಳೆಗೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ 66ರ ಬದಿಯ ಗುಡ್ಡ ಕುಸಿದಿತ್ತು. ಈ ದುರಂತದಲ್ಲಿ ಬರೋಬ್ಬರಿ 11 ಮಂದಿ ಮೃತಪಟ್ಟಿದ್ದರು. ಇದೇ ಘಟನೆಯಲ್ಲಿ ಲಾರಿ ಚಾಲಕ ಅರ್ಜುನ್ ಮೃತಪಟ್ಟಿದ್ದ. ಈ ಮನಾಫ್​ ಅದೇ ಲಾರಿಯ ಮಾಲೀಕ ಹಾಗೂ ಕೇರಳ ಭಾಗದ ಯೂಟ್ಯೂಬರ್​​​ ಕೂಡ.​

ಇದನ್ನೂ ಓದಿ: Dharmasthala Case: ಧರ್ಮಸ್ಥಳ ಪ್ರಕರಣದಲ್ಲಿ ಕೇಂದ್ರದ ಎಂಟ್ರಿ! ಸ್ವಾಮೀಜಿಗಳ ನಿಯೋಗಕ್ಕೆ ಅಮಿತ್ ಶಾ ಮಹತ್ವದ ಭರವಸೆ

ಇದನ್ನೂ ಓದಿ
ಧರ್ಮಸ್ಥಳ ಕೇಸ್: SIT ವಿಚಾರಣೆ ಬಳಿಕ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಉದಯ್ ಜೈನ್
ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಮೀರ್​ ಮನೆ ಮೇಲೆ ಪೊಲೀಸ್ ದಾಳಿ
ಸೌಜನ್ಯ ಪ್ರಕರಣದಲ್ಲಿ SIT ಕೈ ಹಾಕಿಲ್ಲ : ವಿಚಾರಣೆ ವೇಳೆ ಉದಯ್ ಹೇಳಿದ್ದೇನು?
ಧರ್ಮಸ್ಥಳ ಪ್ರಕರಣದಲ್ಲಿ ಕೇಂದ್ರ ಎಂಟ್ರಿ! ಸ್ವಾಮೀಜಿಗಳಿಗೆ ಶಾ ಮಹತ್ವದ ಭರವಸೆ

ಕೇರಳ ಮೂಲದ ಯೂಟ್ಯೂಬರ್ ಮನಾಫ್​, ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರಂಭದಿಂದಲೂ ತನ್ನ ಯೂಟ್ಯೂಬ್​ನಲ್ಲಿ ಕಥೆ ಕಟ್ಟಿದ್ದ. ಜಯಂತ್.ಟಿ ಮೂಲಕ ಬುರುಡೆ ಕಥೆಯನ್ನು ಕೇರಳಕ್ಕೂ ಹಬ್ಬಿಸಿದ್ದ.  ಧರ್ಮಸ್ಥಳದಲ್ಲಿ ನೂರಾರು ಹೆಣ್ಮಕ್ಕಳ ಮೇಲೆ ಅತ್ಯಾಚಾರ, ಕೊಲೆ ಮಾಡಿ ಹೂಳಲಾಗಿದೆ ಎಂದು ಪ್ರಚಾರ ಮಾಡಿದ್ದ.

ಇದನ್ನೂ ಓದಿ: ಧರ್ಮಸ್ಥಳ ಕೇಸ್: SIT ವಿಚಾರಣೆ ಬಳಿಕ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಉದಯ್ ಜೈನ್

ಇನ್ನು ಕಾಡಿನಿಂದ ಬುರುಡೆ ತಂದಿರುವ ಒರಿಜಿನಲ್ ವಿಡಿಯೋ ಮನಾಫ್ ಯುಟ್ಯೂಬ್​ನಲ್ಲಿ ಜುಲೈ 11 ರಂದು ಅಪ್ಲೋಡ್ ಆಗಿತ್ತು. ಬಂಗ್ಲೆಗುಡ್ಡೆಯಿಂದಲೇ ಬುರುಡೆ ತಂದಿರುವುದಾಗಿ ಜಯಂತ್.ಟಿ ಹೇಳಿದ್ದಾರೆ. ಕಾಡು ಪ್ರದೇಶದಲ್ಲಿ ಶೂಟ್ ಮಾಡಿರುವ ವಿಡಿಯೋ ಇದಾಗಿದ್ದು, ಮರಕ್ಕೆ ಸೀರೆ ಬಿಗಿದ ಸ್ಥಳದ ಪಕ್ಕದಲ್ಲೇ ಪತ್ತೆಯಾಗಿರುವ ಬುರುಡೆಯನ್ನ ಕತ್ತಿ ಮೂಲಕ ಎತ್ತಿಕೊಂಡು ತಂದಿರುವ ದೃಶ್ಯವನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಆ ಮೂಲಕ ಧರ್ಮಸ್ಥಳ ಭಾಗದಿಂದಲೇ ಬುರುಡೆ ಎತ್ತಿಕೊಂಡು ಬಂದಿರುವ ಅನುಮಾನ ವ್ಯಕ್ತವಾಗಿತ್ತು.

ಮಹೇಶ್ ತಿಮರೋಡಿ ಮನೆಗೆ ಮನಾಫ್ ಭೇಟಿ

ಮನಾಫ್, ಪ್ರಕರಣ ಆರಂಭಕ್ಕೂ ಮೊದಲೇ ಧರ್ಮಸ್ಥಳ, ಉಜಿರೆ, ಬೆಳ್ತಂಗಡಿ ಸುತ್ತಾಮುತ್ತಾ ಓಡಾಡಿದ್ದ. ಮಹೇಶ್ ತಿಮರೋಡಿ ಮನೆಗೂ ಭೇಟಿ ನೀಡಿ ಹೋರಾಟಕ್ಕೆ ಅಭಿನಂದನೆ ಸಲ್ಲಿಸಿದ್ದ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.